ETV Bharat / state

ಸರ್ಕಾರಿ ನೌಕರನಿಗೆ ವಿಧಿಸಿದ್ದ ಒಂದು ವರ್ಷದ ಶಿಕ್ಷೆಯನ್ನು ಒಂದು ದಿನಕ್ಕೆ ಇಳಿಕೆ ಮಾಡಿದ ಹೈಕೋರ್ಟ್

ಸರ್ಕಾರಿ ನೌಕರನಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ ಹಣಕಾಸು ದುರ್ಬಳಕೆ ಮಾಡಿದ್ದ ಆರೋಪದಲ್ಲಿ ಒಂದು ವರ್ಷ ಶಿಕ್ಷೆಗೆ ಒಳಗಾಗಿದ್ದ ವ್ಯಕ್ತಿಯ ಶಿಕ್ಷೆ ಪ್ರಮಾಣವನ್ನು ಕೋರ್ಟ್​ ಒಂದು ದಿನಕ್ಕೆ ಇಳಿಸಿ ಮಹತ್ವದ ಆದೇಶ ಹೊರಡಿಸಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Apr 24, 2023, 3:42 PM IST

Updated : Apr 24, 2023, 7:40 PM IST

ಬೆಂಗಳೂರು : ಸರ್ಕಾರಿ ನೌಕರನಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಹಣಕಾಸು ದುರ್ಬಳಕೆ ಮಾಡಿದ್ದ ಆರೋಪದಲ್ಲಿ ಒಂದು ವರ್ಷದ ಜೈಲು ಶಿಕ್ಷೆಗೆ ಗುರಿಯಾಗಿದ್ದ 80 ವರ್ಷದ ವೃದ್ಧನ ಶಿಕ್ಷೆಯನ್ನು ಒಂದು ದಿನಕ್ಕೆ (ನ್ಯಾಯಾಲಯದ ಕಲಾಪ ಮುಗಿಯುವವರೆಗೆ ಮಾತ್ರ) ಇಳಿಕೆ ಮಾಡಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಅಲ್ಲದೇ, ಅರ್ಜಿದಾರರ ವಿರುದ್ಧ ದಾಖಲಾಗಿದ್ದ ಎರಡು ಆರೋಪಗಳಿಗೆ ತಲಾ 10 ಸಾವಿರ ರೂಗಳಂತೆ ದಂಡ ಪಾವತಿಸುವಂತೆ ಆದೇಶಿಸಿದೆ. ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಒಂದು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಮೈಸೂರು ಜಿಲ್ಲೆ ಕೆ ಆರ್ ನಗರದ ಹನುಮಂತರಾವ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್​ ಶೆಟ್ಟಿ ಅವರಿದ್ದ ಪೀಠ, ವಿಚಾರಣಾ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಎತ್ತಿ ಹಿಡಿದಿದೆ. ಆದರೆ, ಅರ್ಜಿದಾರರಿಗೆ 80 ವರ್ಷ ವಯಸ್ಸಾಗಿದ್ದು, ದುರ್ಬಳಕೆ ಮಾಡಿಕೊಂಡಿರುವ ಮೊತ್ತವನ್ನು ಈಗಾಗಲೇ ಸರ್ಕಾರ ಹಿಂಪಡೆದಿದೆ. ಹೀಗಾಗಿ ದಂಡ ವಿಧಿಸಿ ಶಿಕ್ಷೆಯ ಪ್ರಮಾಣ ಕಡಿಮೆ ಮಾಡಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ ಏನು ? : ಅರ್ಜಿದಾರ ಹನುಮಂತ ರಾವ್ ವಿರುದ್ಧ 1981ರ ನವೆಂಬರ್ 21 ರಿಂದ 1987ರ ಜನವರಿ 5ರ ವರೆಗಿನ ಅವಧಿಯಲ್ಲಿ ವಿಧವಾ ವೇತನ ಮಂಜೂರು ಮಾಡುವಲ್ಲಿ 54,299 ರೂ ಗಳ ಅವ್ಯವಹಾರ ಎಸಗಿದ ಆರೋಪ ಎದುರಾಗಿತ್ತು. ಈ ಸಂಬಂಧ ನಡೆದ ಲೆಕ್ಕಪರಿಶೋಧನೆ ವೇಳೆ ಅರ್ಜಿದಾರರು ತಪ್ಪು ಎಸಗಿರುವುದು ಕಂಡು ಬಂದಿರುತ್ತದೆ. ಇದಕ್ಕಾಗಿ ಅರ್ಜಿದಾರರಿಗೆ ನೋಟಿಸ್ ಜಾರಿ ಮಾಡಿ ದುರ್ಬಳಕೆ ಮಾಡಿಕೊಂಡಿರುವ ಹಣವನ್ನು 1987 ರ ಜನವರಿ 31ರ ಅಂತ್ಯದ ವೇಳೆಗೆ ಹಿಂದಿರುಗಿಸುವಂತೆ ಸೂಚನೆ ನೀಡಿರುತ್ತಾರೆ. ಅಲ್ಲದೆ, ಈ ಮೊತ್ತವನ್ನು ಅರ್ಜಿದಾರರ ವೇತನದಿಂದ ಹಿಂಪಡೆದುಕೊಂಡಿರುತ್ತಾರೆ.

ಈ ನಡುವೆ ಮಂಡ್ಯ ಜಿಲ್ಲಾ ಖಜಾನೆ ಅಧಿಕಾರಿಯಾಗಿದ್ದ ಸಿ ಎಸ್ ಮುತ್ತಣ್ಣ ಎಂಬುವರು ಭಾರತೀಯ ದಂಡ ಸಂಹಿತೆ 409 (ಸರ್ಕಾರಿ ನೌಕರನ ಮೇಲಿನ ನಂಬಿಕೆ ಉಲ್ಲಂಘನೆ), 477 ಎ(ಸುಳ್ಳು ಲೆಕ್ಕ ಬರೆಯುವುದು) ಅಡಿ ಅಪರಾಧಗಳ ಅಡಿ ಕೃಷ್ಣರಾಜಪೇಟೆ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ್ದ ಪೊಲೀಸರು ಅರ್ಜಿದಾರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುತ್ತಾರೆ.

ವಿಚಾರಣೆ ವೇಳೆ ಹಾಜರಾಗಿದ್ದ ಅರ್ಜಿದಾರರು ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿಕೆ ನೀಡಿದ್ದರು. ಸಾಕ್ಷ್ಯಾಧಾರಗಳನ್ನು ಪರಿಗಣಿಸಿದ್ದ ಕೃಷ್ಣರಾಜಪೇಟೆಯ ಜೆಎಂಎಫ್‌ಸಿ ನ್ಯಾಯಾಲಯ ಎರಡೂ ಸೆಕ್ಷನ್​ಗಳಲ್ಲಿ ಒಂದು ವರ್ಷ ಶಿಕ್ಷೆ ಮತ್ತು 3 ಸಾವಿರ ರೂಗಳನ್ನು ದಂಡ ವಿಧಿಸಿ 2009ರ ಏಪ್ರಿಲ್ 8 ರಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯನ್ನು ಮಂಡ್ಯದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹನುಮಂತ ರಾವ್​​ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ವಿಚಾರಣಾ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ಪ್ರಶ್ನಿಸಿಲ್ಲ. ಆದರೆ, ದುರ್ಬಳಕೆ ಆಗಿದೆ ಎನ್ನಲಾದ ಮೊತ್ತವನ್ನು 1987 ರಲ್ಲಿ ಸರ್ಕಾರಕ್ಕೆ ಅರ್ಜಿದಾರರ ವೇತನದಿಂದ ಪಡೆದುಕೊಂಡಿದೆ. ಅಲ್ಲದೆ, ಪ್ರಸ್ತುತ ಅರ್ಜಿದಾರರ 80 ವರ್ಷ ವಯಸ್ಸಿನವರಾಗಿದ್ದು, ವಿವಿಧ ಕಾಯಿಲೆಗಳಿಗೆ ತುತ್ತಾಗಿದ್ದಾರೆ.

ಅರ್ಜಿದಾರರು ಸರ್ಕಾರಿ ನೌಕರರಾಗಿದ್ದು, ಅವರ ವಿರುದ್ಧದಲ್ಲಿ ಇದೇ ಮೊದಲ ಆರೋಪವಾಗಿದೆ. ಹೀಗಾಗಿ ಅವರಿಗೆ ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡಬೇಕು ಎಂದು ಮನವಿ ಮಾಡಿದ್ದರು. ವಾದ ಆಲಿಸಿದ ನ್ಯಾಯಪೀಠ ಈ ಆದೇಶ ನೀಡಿದೆ.

ಇದನ್ನೂ ಓದಿ: ಪಿಎಫ್‌ಐ ಕಾರ್ಯಕರ್ತರ ಜಾಮೀನು ತಿರಸ್ಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಎತ್ತಿ ಹಿಡಿದ ಹೈಕೋರ್ಟ್

Last Updated : Apr 24, 2023, 7:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.