ETV Bharat / state

ಒಕ್ಕಲಿಗ ಸಂಘದ ಕಾರ್ಯಕಾರಿ ಸಮಿತಿ ಸಭೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಯ ಸಭೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಪೂರ್ಣಗೊಳಿಸಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Jul 5, 2023, 6:55 AM IST

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ. ಕೆಂಚಪ್ಪಗೌಡರ ಅಧ್ಯಕ್ಷತೆಯಲ್ಲಿ ಜು.5ರಂದು ನಡೆಯಬೇಕಿದ್ದ ಸಂಘದ ಕಾರ್ಯಕಾರಿ ಸಮಿತಿ ಸಭೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿತು. ಸಂಘದ ಸದಸ್ಯರಾದ ಹಾಸನ ಜಿಲ್ಲೆಯ ಸಂಕ್ಲಾಪುರದ ಎಸ್.ಎಸ್. ರಘುಗೌಡ, ಸೇರಿದಂತೆ ನಾಲ್ವರು ಸದಸ್ಯರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ಪೂರ್ಣಗೊಳಿಸಿತು. ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲರು, ಕೆಂಚಪ್ಪಗೌಡ ನೇತೃತ್ವದ ಸಮಿತಿ ಕರೆದಿದೆ ಎನ್ನಲಾಗುವ 2023ರ ಜುಲೈ 5ರ ಕಾರ್ಯಕಾರಿ ಸಮಿತಿಯ ಸಭೆ ಬಗ್ಗೆ ಆಡಳಿತ ಮಂಡಳಿಯ ಇತರೆ ಸದಸ್ಯರಿಗೆ ಯಾವುದೇ ಪೂರ್ವ ನೋಟಿಸ್ ನೀಡಿಲ್ಲ. ಹೀಗಾಗಿ, ಈ ಸಭೆಯನ್ನು ಮುಂದೂಡಬೇಕು ಎಂದು ಕೋರಿದರು.

ಪ್ರತಿವಾದಿಗಳ ಪರ ವಾದ ಮಂಡಿಸಿ ವಕೀಲರು, ಸಭೆಯನ್ನು ಮುಂದೂಡುವಂತೆ ಹೈಕೋರ್ಟ್ ಮೆಟ್ಟಿಲೇರಿರುವ ಮೇಲ್ಮನವಿದಾರರ ಮೂಲ ಉದ್ದೇಶವೇ ಬೇರೆ ಇದೆ. ಸಂಘವು ನೂರು ವರ್ಷಗಳಿಗೂ ಹೆಚ್ಚಿನ ಇತಿಹಾಸದ ಹೆಗ್ಗಳಿಕೆ ಹೊಂದಿದ್ದು ಹಲವಾರು ಶೈಕ್ಷಣಿಕ ವಿದ್ಯಾಸಂಸ್ಥೆಗಳು, ಸಾವಿರಾರು ನೌಕರರು ಇದ್ದಾರೆ. ಕಳೆದ ಮೂರು ತಿಂಗಳಿಂದ ಸಭೆ ನಡೆದಿಲ್ಲ. ಹೀಗಾಗಿ, ಸಂಘದ ದೈನಂದಿನ ಚಟುವಟಿಕೆಗಳ ನಿರ್ವಹಣೆಗಾಗಿ ಸಭೆ ನಡೆಯುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಪ್ರಕರಣದ ಹಿನ್ನೆಲೆ: ಸಂಘದ ನಿಕಟಪೂರ್ವ ಅಧ್ಯಕ್ಷ ಸಿ.ಎನ್. ಬಾಲಕೃಷ್ಣ ಮತ್ತು ಕಾರ್ಯದರ್ಶಿ ಕೋನಪ್ಪ ರೆಡ್ಡಿ ನೇತೃತ್ವದ ಕಾರ್ಯಕಾರಿ ಸಮಿತಿಯ ವಿರುದ್ಧ ಬಿ.ಕೆಂಚಪ್ಪಗೌಡರ ಗುಂಪು 2023ರ ಮೇ 29ರಂದು ಅವಿಶ್ವಾಸ ಗೊತ್ತುವಳಿ ಮಂಡಿಸಿತ್ತು. ಈ ಗೊತ್ತುವಳಿಯನ್ನು ಬಾಲಕೃಷ್ಣ ನೇತೃತ್ವದ ಸಮಿತಿ ಬಲವಾಗಿ ವಿರೋಧಿಸಿ, ಯಾರಿಗೂ ಪೂರ್ವ ನೋಟಿಸ್ ನೀಡದೇ ಕಾನೂನುಬಾಹಿರವಾಗಿ ಸಭೆ ಕರೆಯಲಾಗಿದೆ ಎಂದು ಆಕ್ಷೇಪಿಸಿತ್ತು. ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿಲಾಗಿತ್ತು.
ನೂತನ ಸಮಿತಿ 2023ರ ಜುಲೈ 5ರಂದು ಕಾರ್ಯಕಾರಿ ಸಮಿತಿಯ ಸಭೆ ಕರೆದಿತ್ತು. ಈ ಸಭೆಗೆ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು.

ಇದನ್ನೂ ಓದಿ: ವಿಚ್ಛೇದನ ಅರ್ಜಿಗೆ ಆಕ್ಷೇಪಣೆ ಸಲ್ಲಿಸದ ಕಾರಣ ನೀಡಿ ಅರ್ಜಿ ವಜಾಗೊಳಿಸುವಂತಿಲ್ಲ: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.