ETV Bharat / state

ಕೆಎಸ್​ಪಿಸಿಬಿ ಅಧ್ಯಕ್ಷರ ಅಧಿಕಾರವಧಿ ಮೊಟಕು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್ - ಕೆಎಸ್​ಪಿಸಿಬಿ ಅಧ್ಯಕ್ಷರ ಅಧಿಕಾರವಧಿ

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ಅಧಿಕಾರಾವಧಿ ಮೊಟಕುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.

High Court
ಹೈಕೋರ್ಟ್
author img

By ETV Bharat Karnataka Team

Published : Nov 8, 2023, 9:07 AM IST

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್​ಪಿಸಿಬಿ) ಅಧ್ಯಕ್ಷ ಶಾಂತ್ ಎ. ತಿಮ್ಮಯ್ಯ ಅವರ ಅಧಿಕಾರವಧಿಯನ್ನು ಮೊಟಕುಗೊಳಿಸಿ ತಿದ್ದುಪಡಿ ಮಾಡಿರುವ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿರುವುದು ಮತ್ತು ಪರಿಸರ ಮಾಲಿನ್ಯ ನಿಯಂತ್ರಣಾ ಮಂಡಳಿಗೆ ಅಧ್ಯಕ್ಷರ ನೇಮಕ ಸಂಬಂಧ ಮಾರ್ಗಸೂಚಿ ರಚನೆ ಮಾಡುವ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿತು.

ಕೆಎಸ್​ಪಿಸಿಬಿ ಅಧ್ಯಕ್ಷರ ಅಧಿಕಾರವಧಿ ಮೊಟಕುಗೊಳಿಸಿ ಸರ್ಕಾರ 2023ರ ಆಗಸ್ಟ್ 31ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಶಾಂತ್ ಎ.ತಿಮ್ಮಯ್ಯ, ಮಂಡಳಿಗೆ ಅಧ್ಯಕ್ಷರ ನೇಮಕ ಕುರಿತು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ಪೂರ್ಣಗೊಳಿಸಿದೆ.

ವಿಚಾರಣೆಯಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, 2024ಕ್ಕೆ ಶಾಂತ್ ತಿಮ್ಮಯ್ಯ ಅವಧಿ ಮುಕ್ತಾಯವಾಗಬೇಕಿತ್ತು. ಇದನ್ನು 2022ಕ್ಕೆ ಸೀಮಿತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಹೈಕೋರ್ಟ್ ಹಿಂದೆ ಮಾರ್ಗಸೂಚಿ ಸರಿಯಿರಲಿಲ್ಲ ಎಂದು ಆದೇಶಿಸಿತ್ತು. ಮಾರ್ಗಸೂಚಿಯನ್ನು ಪುನರ್‌ರಚಿಸಿ, ನಿಯಮ ರೂಪಿಸಲಾಗಿದೆ. ಇದರ ಅನ್ವಯ ತಿದ್ದುಪಡಿ ಆದೇಶ ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಅರ್ಜಿದಾರರ ಪರ ವಕೀಲ ಡಿ.ಆರ್.ರವಿಶಂಕರ್, ಶಾಂತ್ ತಿಮ್ಮಯ್ಯ ಅವರ ನೇಮಕಾತಿಯಲ್ಲಿ ನಿಯಮ ಪಾಲಿಸಲಾಗಿದೆ. ಯಾವುದೇ ನಿಯಮಗಳು ಉಲ್ಲಂಘನೆಯಾಗಿಲ್ಲ. ಈ ನಿಟ್ಟಿನಲ್ಲಿ ಅಧಿಕಾರ ಮೊಟಕುಗೊಳಿಸಿ ಹೊರಡಿಸಿರುವ ಆದೇಶ ರದ್ದುಮಾಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ಸರ್ಕಾರದ ತಿದ್ದುಪಡಿ ಆದೇಶ: ಕೆಎಸ್​ಪಿಸಿಬಿ ಅಧ್ಯಕ್ಷರನ್ನಾಗಿ 05-03-2019ರಂದು ಜಯರಾಂ ಎಂಬವರನ್ನು 04-03-2022ರವರೆಗೆ ನೇಮಕ ಮಾಡಲಾಗಿತ್ತು. ಜಯರಾಂ ಅವರು 20-06-2019 ರಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷರ ಹುದ್ದೆಗೆ ಉಸ್ತುವಾರಿ ಅಧ್ಯಕ್ಷರನ್ನು ನೇಮಕ ಮಾಡಲಾಗಿತ್ತು. ಆನಂತರ ನೇಮಕಗೊಂಡವರು ಮೂರರಿಂದ ಆರು ತಿಂಗಳವರೆಗೆ ಹುದ್ದೆಯಲ್ಲಿದ್ದರು. 15-11-2021ರಂದು ಶಾಂತ್ ತಿಮ್ಮಯ್ಯ ಅವರನ್ನು ಕೆಎಸ್​ಪಿಸಿಬಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಅವರ ಅವಧಿಯು 04-03-2022ಕ್ಕೆ ಬದಲಾಗಿ 14-11-2024ಕ್ಕೆ ಮುಗಿಯುತ್ತದೆ ಎಂದು ತಪ್ಪಾಗಿ ಉಲ್ಲೇಖಿಸಲಾಗಿತ್ತು. ಈ ಪ್ರಮಾದವನ್ನು ಸರಿಪಡಿಸಲಾಗಿದ್ದು, ಶಾಂತ್ ತಿಮ್ಮಯ್ಯ ಅವರ ಅಧ್ಯಕ್ಷ ಅವಧಿಯು 04-03-2022ಕ್ಕೆ ಅಂತ್ಯವಾಗಿದೆ ಎಂದು ತಿದ್ದುಪಡಿಯಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: ಜೀವಿತಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗೆ ಮಗಳೊಂದಿಗಿರಲು ಒಂದು ತಿಂಗಳು ಪೆರೋಲ್ ಮಂಜೂರು ಮಾಡಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.