ETV Bharat / state

ಕೆಪಿಎಸ್​​ಸಿ ಅಧ್ಯಕ್ಷ, ಸದಸ್ಯರ ನೇಮಕ ರದ್ದು ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಕೆಪಿಎಸ್‌ಸಿ ಅಧ್ಯಕ್ಷ ಮತ್ತು ಇತರ 11 ಮಂದಿ ಸದಸ್ಯರ ನೇಮಕಾತಿ ಆದೇಶ ರದ್ದುಪಡಿಸುವಂತೆ ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ.

high-court-reserved-order-of-petition-against-appointment-of-kpsc-chairman
ಕೆಪಿಎಸ್​​ಸಿ ಅಧ್ಯಕ್ಷ, ಸದಸ್ಯರ ನೇಮಕ ರದ್ದು ಕೋರಿ ಪಿಐಎಲ್​ : ಆದೇಶ ಕಾಯ್ದಿರಿಸಿದ ಹೈಕೋರ್ಟ್
author img

By

Published : Apr 12, 2023, 7:46 PM IST

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಮತ್ತು ಇತರ 11 ಮಂದಿ ಸದಸ್ಯರ ನೇಮಕಾತಿ ಆದೇಶ ರದ್ದು ಮಾಡುವಂತೆ ಕೋರಿ ಸಲ್ಲಿಸಲಾಗಿರುವ ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ಈ ಬಗ್ಗೆ ಆದೇಶವನ್ನು ಕಾಯ್ದಿರಿಸಿತು.

ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ನೇಮಿಸಿದ ಆದೇಶ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಶಶಿ ಪ್ರಸಾದ್ ಗಾಂಧಿ ಮತ್ತು 11 ಮಂದಿ ಕೆಪಿಎಸ್‌ಸಿ ಸದಸ್ಯರ ನೇಮಕಾತಿ ಪ್ರಶ್ನಿಸಿ ಟಿ. ನರಸಿಂಹ ಮೂರ್ತಿ ಸಲ್ಲಿಸಿದ್ದ ಅರ್ಜಿಗಳ ಕುರಿತು ಸುದೀರ್ಘ ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಎಂಜಿಎಸ್ ಕಮಲ್ ಅವರಿದ್ದ ನ್ಯಾಯಪೀಠ ಅಂತಿಮ ಆದೇಶವನ್ನು ಕಾಯ್ದಿರಿಸಿದೆ.

ಅರ್ಜಿದಾರ ಟಿ. ನರಸಿಂಹಮೂರ್ತಿ ಪರ ವಕೀಲ ಎಸ್. ಉಮಾಪತಿ, ಕೆಪಿಎಸ್‌ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿಗೆ ನಿರ್ದಿಷ್ಟ ನಿಯಮಗಳನ್ನು ರೂಪಿಸಬೇಕು. ಆ ನಿಯಮಗಳನ್ನು ರೂಪಿಸುವವರೆಗೆ ಕೇಂದ್ರ ಲೋಕಸೇವಾ ಆಯೋಗದ ನಿವೃತ್ತ ಅಧ್ಯಕ್ಷ ಪಿ.ಸಿ. ಹೋಟಾ ಅವರ ನೇತೃತ್ವದ ಸಮಿತಿ ಶಿಫಾರಸುಗಳನ್ನು ಮಾಡಿದೆ. ಈ ಶಿಫಾರಸು ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು 2016ರಲ್ಲಿ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿತ್ತು. ಆದರೆ, ಹೋಟಾ ಸಮಿತಿ ಮಾರ್ಗಸೂಚಿಯಂತೆ ಶೋಧನಾ ಸಮಿತಿ ರಚಿಸದೆ ಮತ್ತು ಯಾವುದೇ ನಿಯಮ ರೂಪಿಸದೆ ರಾಜ್ಯ ಸರ್ಕಾರವು ಕೆಪಿಎಸ್‌ಎಸಿಗೆ ಸದಸ್ಯರನ್ನು ನೇಮಕ ಮಾಡಲಾಗಿದೆ. ಹಾಗಾಗಿ, ಕೆಪಿಎಸ್‌ಸಿ ಸದಸ್ಯರನ್ನು ನೇಮಕಾತಿ ಆದೇಶ ರದ್ದುಪಡಿಸಬೇಕು ಮತ್ತು ಹೋಟಾ ಸಮಿತಿ ಅನುಸಾರ ಹೊಸದಾಗಿ ಸದಸ್ಯರನ್ನು ನೇಮಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ನ್ಯಾಯಪೀಠವನ್ನು ಕೋರಿದರು.

ಮತ್ತೊಂದು ಅರ್ಜಿ ಕುರಿತು ವಾದ ಮಂಡಿಸಿ ವಕೀಲರು, ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರ್ ಎಸ್. ಸಾಹುಕಾರ್ ಅವರು ಹಿಂದೆ ಸದಸ್ಯರಾಗಿದ್ದರು. ಅವರನ್ನೇ 2021 ರಲ್ಲಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಆದರೆ, ನೇಮಕಾತಿಯ ವೇಳೆ ಹೈಕೋರ್ಟ್ ಆದೇಶದಂತೆ ಯಾವುದೇ ನಿರ್ದಿಷ್ಟ ನಿಯಮವಾಗಲಿ ಅಥವಾ ಹೋಟಾ ಸಮಿತಿಯ ಮಾರ್ಗಸೂಚಿಯಾಗಲಿ ಪಾಲಿಸಿಲ್ಲ. ಆದ್ದರಿಂದ ಅವರ ನೇಮಕಾತಿ ರದ್ದು ಪಡಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ಇದನ್ನೂ ಓದಿ : 'ನಿವೃತ್ತಿಗೂ ಒಂದು ದಿನ ಮುನ್ನ ಘೋಷಣೆಯಾಗುವ ವಾರ್ಷಿಕ ವೇತನ ಹೆಚ್ಚಳಕ್ಕೆ ನೌಕರರು ಅರ್ಹ'

ರಾಜ್ಯ ಸರ್ಕಾರದ ಪರ ವಕೀಲರು, ಸಂವಿಧಾನದ ಪರಿಚ್ಛೇದ 306 ರ ಪ್ರಕಾರ ಲೋಕಸೇವಾ ಆಯೋಗದ ಅಧ್ಯಕ್ಷ ಹಾಗೂ ಸದಸ್ಯರ ನೇಮಕಾತಿಗೆ ಯಾವುದೇ ರೀತಿಯ ಮಾನದಂಡ ಹಾಗೂ ನಿಯಮ ನಿಗದಿಪಡಿಸಿಲ್ಲ. ಹಾಗಾಗಿ, ನಿರ್ದಿಷ್ಟ ವ್ಯಕ್ತಿಯನ್ನೇ ಅಥವಾ ನಿರ್ದಿಷ್ಟ ವಿಧಾನದಲ್ಲಿ ಕೆಪಿಎಸ್‌ಸಿ ಅಧ್ಯಕ್ಷ ಹಾಗೂ ಸದಸ್ಯರಾಗಿ ನೇಮಕ ಮಾಡುವಂತೆ ನ್ಯಾಯಾಲಯಗಳು ನಿರ್ದೇಶಿಸಲು ಅವಕಾಶ ಇಲ್ಲವಾಗಿದೆ ಎಂದು ತಿಳಿಸಿದರು. ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ವಿಭಾಗೀಯ ಪೀಠವು ಆದೇಶ ಕಾಯ್ದಿರಿಸಿದೆ.

ಇದನ್ನೂ ಓದಿ : ಕೆ.ಜೆ ಹಳ್ಳಿ ಡಿ.ಜೆ ಹಳ್ಳಿ ಗಲಭೆ: ಆರೋಪಿಗಳ ವಿರುದ್ಧದ ಆದೇಶ ರದ್ದತಿಗೆ ಹೈಕೋರ್ಟ್ ನಿರಾಕರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.