ETV Bharat / state

ಕೋವಿಡ್ 3ನೇ ಅಲೆ ಎದುರಿಸಲು ಸಿದ್ಧತೆ ಮಾಡಿಕೊಳ್ಳಿ : ರಾಜ್ಯಕ್ಕೆ ಹೈಕೋರ್ಟ್ ನಿರ್ದೇಶನ - Covid 3rd Wave

ಕೋವಿಡ್ ನಿರ್ವಹಣೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ಪೀಠವು ವಿಚಾರಣೆ ನಡೆಸಿತು.

high-court-says-get-ready-to-face-covid-third-wave
ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ಧತೆ ಮಾಡಿಕೊಳ್ಳಿ : ಹೈಕೋರ್ಟ್ ನಿರ್ದೇಶನ
author img

By

Published : Aug 28, 2021, 4:46 PM IST

ಬೆಂಗಳೂರು : ಕೋವಿಡ್ ಮೂರನೇ ಅಲೆ ಎದುರಿಸಲು ಯಾವೆಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿರುವ ಹೈಕೋರ್ಟ್, ಸೋಂಕು ತಡೆಯಲು ಈಗನಿಂದಲೇ ಎಲ್ಲ ರೀತಿಯ ಕ್ರಮ ಕೈಗೊಳ್ಳುತಂತೆ ನಿರ್ದೇಶಿಸಿದೆ. ಕೋವಿಡ್ ನಿರ್ವಹಣೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ಪೀಠ ಈ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಪೀಠ, ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ಎದುರಿಸಲು ಮಾಡಿಕೊಂಡಿರುವ ಸಿದ್ಧತೆಗಳೇನು? ಆಮ್ಲಜನಕ(ಆಕ್ಸಿಜನ್​) ದಾಸ್ತಾನು ಎಷ್ಟಿದೆ? ತುರ್ತು ಪರಿಸ್ಥಿತಿ ಎದುರಿಸಲು ಆಮ್ಲಜನಕ ದಾಸ್ತಾನು ಇದೆಯೇ ಎಂದು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿತು.

ಇದಕ್ಕೆ ಉತ್ತರಿಸಿದ ಸರ್ಕಾರದ ಪರ ಅಡ್ವೊಕೇಟ್ ಜನರಲ್​ ಪ್ರಭುಲಿಂಗ ನಾವದಗಿ, ಕೋವಿಡ್ ಲಸಿಕೀಕರಣ ಚುರುಕಾಗಿ ನಡೆಯುತ್ತಿದೆ. ಕೋವಿಡ್ ನಿಯಂತ್ರಣಕ್ಕೆ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಮೂರನೇ ಅಲೆ ಎದುರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆಮ್ಲಜನಕ ಪೂರೈಕೆ ಹೆಚ್ಚಿಸಲು ರಾಜ್ಯದಲ್ಲಿ 245 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಆರಂಭಿಸಲಾಗುತ್ತಿದೆ. ಈಗಾಗಲೇ 121 ಘಟಕಗಳು ಸ್ಥಾಪನೆಯಾಗಿದ್ದು, 96 ಘಟಕಗಳು ಉತ್ಪಾದನೆಯಲ್ಲಿ ತೊಡಗಿವೆ ಎಂದು ತಿಳಿಸಿದರು.

ಅಮೈಕಸ್ ಕ್ಯೂರಿ ಪೀಠಕ್ಕೆ ಮಾಹಿತಿ ನೀಡಿ, ಕೋವಿಡ್ ಎರಡನೇ ಅಲೆ ಉತ್ತಂಗುದಲ್ಲಿದ್ದ ವೇಳೆ ದಿನಕ್ಕೆ 1200 ಮೆಟ್ರಿಕ್ ಟನ್ ಆಮ್ಲಜನಕ ಅಗತ್ಯತೆ ಇತ್ತು. ಅದರಂತೆ ಘಟಕಗಳನ್ನು ಆರಂಭಿಸಲಾಗಿದೆ ಎಂದರು.

ವಾದ ಆಲಿಸಿದ ಪೀಠ, ಮೂರನೇ ಅಲೆ ಎದುರಿಸಲು ಅಗತ್ಯವಿರುವ ಆಮ್ಲಜನಕ ಪ್ರಮಾಣವೆಷ್ಟು? ದಾಸ್ತಾನು ಎಷ್ಟಿದೆ? ಉತ್ಪಾದನೆ ಎಷ್ಟಿದೆ? ಎಂಬುದರ ನಿಖರ ಲೆಕ್ಕ ಸಿದ್ದಪಡಿಸಿಟ್ಟುಕೊಳ್ಳಬೇಕು. ಕೋವಿಡ್ ಮೂರನೇ ಅಲೆ ಎದುರಿಸಲು ಕೈಗೊಂಡ ಕ್ರಮಗಳ ಕುರಿತು ವಿವರವಾದ ವರದಿಯನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿತು.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್​ ಬ್ಯಾನರ್ಜಿ ದಂಪತಿಗೆ ಇಡಿ ಸಮನ್ಸ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.