ETV Bharat / state

ನಿವೃತ್ತ ಯೋಧರಿಗೆ ಜಮೀನು ಮಂಜೂರು ವಿಳಂಬ : ಮೈಸೂರು ಜಿಲ್ಲಾಧಿಕಾರಿ ರೋಹಿಣಿಗೆ ಹೈಕೋರ್ಟ್ ತರಾಟೆ - ಮೈಸೂರು ಜಿಲ್ಲಾಧಿಕಾರಿ ರೋಹಿಣಿಗೆ ಹೈಕೋರ್ಟ್ ತರಾಟೆ

ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶ ಮಾಡಿದ ನಂತರವೂ ತಮಗೆ ಜಮೀನು ಮಂಜೂರು ಮಾಡಿಲ್ಲವೆಂದು ಎಂದು ಮೈಸೂರಿನ ನಿವೃತ್ತ ಯೋಧರಾದ ಕೆ.ಬಿ.ನಾಣಯ್ಯ, ಬಿ.ಎನ್. ಶಿವಲಿಂಗಪ್ಪ, ಕೆ.ಬಿ.ಭೀಮಯ್ಯ ಮತ್ತು ಇಕ್ಬಾಲ್ ಹುಸೈನ್ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

high-court-slams-mysore-district-collector-rohini-sindhuri
ನಿವೃತ್ತ ಯೋಧರಿಗೆ ಜಮೀನು ಮಂಜೂರು ವಿಳಂಬ
author img

By

Published : Mar 30, 2021, 11:47 PM IST

ಬೆಂಗಳೂರು : ನ್ಯಾಯಾಲಯದ ಆದೇಶವಿದ್ದರೂ ನಾಲ್ವರು ನಿವೃತ್ತ ಯೋಧರಿಗೆ ಜಮೀನು ಮಂಜೂರು ಮಾಡಲು ವಿಳಂಬ ಮಾಡಿರುವ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಕೂಡಲೇ ಭೂಮಿ ಹಂಚಿಕೆ ಮಾಡಲು ಕ್ರಮ ಕೈಗೊಳ್ಳದಿದ್ದರೆ, ನ್ಯಾಯಾಂಗ ನಿಂದನೆ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ.

ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶ ಮಾಡಿದ ನಂತರವೂ ತಮಗೆ ಜಮೀನು ಮಂಜೂರು ಮಾಡಿಲ್ಲವೆಂದು ಎಂದು ಮೈಸೂರಿನ ನಿವೃತ್ತ ಯೋಧರಾದ ಕೆ.ಬಿ.ನಾಣಯ್ಯ, ಬಿ.ಎನ್. ಶಿವಲಿಂಗಪ್ಪ, ಕೆ.ಬಿ.ಭೀಮಯ್ಯ ಮತ್ತು ಇಕ್ಬಾಲ್ ಹುಸೈನ್ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲಕಾಲ ವಾದ ಆಲಿಸಿದ ಪೀಠ, ಅರ್ಜಿದಾರರಿಗೆ ಜಮೀನು ಮಂಜೂರು ಮಾಡುವಂತೆ ಹೈಕೋರ್ಟ್ ಏಕಸದಸ್ಯ ಪೀಠ 2013ರಲ್ಲೇ ಸರ್ಕಾರಕ್ಕೆ ನಿರ್ದೇಶಿಸಿದೆ. ಆದರೂ, ಈವರೆಗೂ ಜಮೀನು ನೀಡಿಲ್ಲವೇಕೆ. ಯೋಧರು ನಿಮ್ಮ ದಾಕ್ಷಿಣ್ಯದಲ್ಲಿ ಇರಬೇಕೇ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಪ್ರಶ್ನಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿತು. ಅಲ್ಲದೆ, ಮಾಜಿ ಯೋಧರಿಗೆ ಜಮೀನು ನೀಡಲು ಸಾಧ್ಯವಿಲ್ಲವಾದರೆ ಆ ಕುರಿತು ಸರ್ಕಾರ ತನ್ನ ನೀತಿ ಬದಲಿಸಲಿ. ಅದು ಬಿಟ್ಟು ಕೆಲ ಯೋಧರಿಗೆ ಜಮೀನು ಮಂಜೂರು ಮಾಡಿ, ಉಳಿದವರಿಗೆ ನೀಡದೇ ತಾರತಮ್ಯ ಮಾಡುವುದನ್ನು ಕೋರ್ಟ್ ಸಹಿಸುವುದಿಲ್ಲ ಎಂದಿತು.

ಇದನ್ನೂ ಓದಿ : ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ ವಿವಾದ : ಅಡ್ಡಗೋಡೆ ಮೇಲೆ ದೀಪವಿಟ್ಟ ಸಿಎಟಿ

ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿದ್ದ ರೋಹಿಣಿ ಸಿಂಧೂರಿ ವಿವರಣೆ ನೀಡಲು ಯತ್ನಿಸಿದರು. ಕಾರಣಗಳನ್ನು ಒಪ್ಪಲು ನಿರಾಕರಿಸಿದ ಪೀಠ, ನಿಮ್ಮ ಮನಸ್ಸಿಗೆ ಬಂದಂತೆ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಅರ್ಜಿದಾರ ಯೋಧರಿಗೆ ನೀಡಲು ತಕ್ಷಣವೇ ಜಮೀನು ಗುರುತಿಸಿ, ಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಅಡಿ ಆರೋಪ ನಿಗದಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ, ವಿಚಾರಣೆ ಮುಂದೂಡಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.