ETV Bharat / state

JP Nadda: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ - ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ವಿರುದ್ಧದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ BJP President J P Nadda case
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ
author img

By

Published : Jul 8, 2023, 10:58 AM IST

Updated : Jul 8, 2023, 12:53 PM IST

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ವಿಜಯನಗರ ಹರಪ್ಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದ ಬಿಜೆಪಿ ಪ್ರಚಾರದ ವೇಳೆ ಮತದಾರರಿಗೆ ಆಮಿಷ ನೀಡುವ ರೀತಿಯಲ್ಲಿ ಭಾಷಣ ಮಾಡಿದ್ದ ಆರೋಪ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ.

ತಮ್ಮ ವಿರುದ್ಧ ಹರಪನಹಳ್ಳಿ ಠಾಣಾ ಪೊಲೀಸರು ದಾಖಲಿಸಿರುವ ಪ್ರಕರಣ ಹಾಗೂ ಅದರ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ನಡ್ಡಾ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಮಧ್ಯಂತರ ಆದೇಶ ಮಾಡಿ ವಿಚಾರಣೆಯನ್ನು ಜುಲೈ 21ಕ್ಕೆ ಮಂದೂಡಿದೆ.

ಪ್ರಕರಣದ ಹಿನ್ನೆಲೆ ಏನು? ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 2023ರ ಮೇ 7ರಂದು ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದ ಐ.ಬಿ. ವೃತ್ತದಲ್ಲಿ ಬಿಜೆಪಿ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಜೆ.ಪಿ.ನಡ್ಡಾ ಮಾತನಾಡಿ, ಡಬಲ್ ಇಂಜಿನ್ ಸರ್ಕಾರ ಬಂದ್ರೆ ಕೇಂದ್ರದ ಯೋಜನೆಗಳೆಲ್ಲ ರಾಜ್ಯದಲ್ಲಿ ಮಂದುವರಿಯುತ್ತವೆ. ಚುನಾವಣೆಯಲ್ಲಿ ಬಿಜೆಪಿ ಸೋತರೆ ಕೇಂದ್ರ ಸರ್ಕಾರದಿಂದ ಸಿಗುವ ಯೋಜನೆಗಳಿಂದ ಮತದಾರರು ವಂಚಿತರಾಗಲಿದ್ದೀರಿ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ ಸೇರಿದಂತೆ ಕೇಂದ್ರದ ಹಲವು ಯೋಜನೆಗಳು ಬಂದ್ ಆಗಲಿವೆ. ನಮಗೆ ಅಭಿವೃದ್ಧಿ ಬೇಕಾದ್ರೆ ಬಿಜೆಪಿ ಗೆಲ್ಲಿಸಬೇಕು ಎಂದು ಹೇಳಿಕೆ ನೀಡಿದ್ದರು.

ಇದರಿಂದ ಚುನಾವಣಾ ವಿಚಕ್ಷಣಾ ದಳದ ಅಧಿಕಾರಿಗಳು ಹರಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿ, ಮತದಾರರಿಗೆ ಆಮಿಷ ಹಾಗೂ ಬೆದರಿಕೆ ಒಡ್ಡುವ ರೀತಿಯಲ್ಲಿ ನಡ್ಡಾ ಭಾಷಣ ಮಾಡಿದ್ದಾರೆ. ಆ ಮೂಲಕ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಇದರಿಂದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು. ಈ ತನಿಖೆ ರದ್ದುಪಡಿಸುವಂತೆ ಕೋರಿ ನಡ್ಡಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪರಿಶಿಷ್ಟ ಜಾತಿ ಮತ್ತು ಪಂಡಗಳ ಮೀಸಲಾತಿ, ಲಿಂಗಾಯತ, ಒಕ್ಕಲಿಗರ ಮೀಸಲಾತಿಯನ್ನು ಬಿಜೆಪಿ ಸರ್ಕಾರ ಹೆಚ್ಚಿಸಿದೆ. ಕಾಂಗ್ರೆಸ್ ಸರ್ಕಾರ ಬಂದ್ರೆ ಮೀಸಲಾತಿಯನ್ನು ರದ್ದುಪಡಿಸಲಿದೆ. ಕಾಂಗ್ರೆಸ್​ನವರಿಗೆ ಕೊಡುವುದು ಗೊತ್ತಿಲ್ಲ, ವಾಪಸ್ ಮಾತ್ರ ಪಡೆಯುತ್ತಾರೆ. ಇನ್ನು ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಆದ್ರೆ ಅವರ ಆಡಳಿತ ಅವಧಿಯಲ್ಲೇ ಸಾಕಷ್ಟು ಹಗರಣಗಳಿವೆ ಎಂದು ಚುನಾವಣಾ ಪ್ರಚಾರದ ವೇಳೆ ಹರಪನಹಳ್ಳಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ: ಜೆ.ಪಿ ನಡ್ದಾ ಮೇಲಿಂದ ಮೇಲೆ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ: ಸಿದ್ದರಾಮಯ್ಯ ಆರೋಪ

Last Updated : Jul 8, 2023, 12:53 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.