ETV Bharat / state

ಕೆಎಸ್‌ಪಿಸಿಬಿ ಅಧ್ಯಕ್ಷರ ಅಧಿಕಾರ ಮೊಟಕು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ - ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಂತ್ ಎ ತಿಮ್ಮಯ್ಯ ಅವರ ಅಧಿಕಾರಾವದಿ ಮೊಟಕುಗೊಳಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಹೈಕೋರ್ಟ್
ಹೈಕೋರ್ಟ್
author img

By ETV Bharat Karnataka Team

Published : Sep 7, 2023, 1:47 PM IST

Updated : Sep 7, 2023, 7:52 PM IST

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಸ್ಥಾನದಿಂದ ಶಾಂತ್ ಎ. ತಿಮ್ಮಯ್ಯ ಅವರನ್ನು ಬದಲಿಸುವ ಕುರಿತಂತೆ ಸರ್ಕಾರ ಹೊರಡಿಸಿದ್ದ ತಿದ್ದುಪಡಿ ಆದೇಶಕ್ಕೆ ಮುಂದಿನ ವಿಚಾರಣೆವರೆಗೂ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಆದರೆ, ಮಧ್ಯಂತರ ತಡೆ ನೀಡಿದೆ ಎಂದ ಮಾತ್ರಕ್ಕೆ ಅರ್ಜಿದಾರರನ್ನು ಅಧ್ಯಕ್ಷರ‌ ಹುದ್ದೆಯಲ್ಲಿ ಮುಂದುರೆಯಲು ಮುದ್ರೆ ಒತ್ತಿದೆ ಎಂದಾಗುವುದಿಲ್ಲ. ಜೊತೆಗೆ, ಅರ್ಜಿದಾರರು ಸೂಕ್ತ ಆಯ್ಕೆ ಎಂಬುದರ ಕುರಿತು ಮತ್ತಷ್ಟು ವಿಚಾರಣೆ ನಡೆಸಬೇಕಾಗಿದೆ ಎಂದು ನ್ಯಾಯಪೀಠ ತಿಳಿಸಿದೆ. ಈ ಹಿಂದೆ ನ್ಯಾಯಾಲಯ ಮಾಡಿರುವ ಆದೇಶದ ನಡುವೆ ಸಾಮ್ಯತೆ ಇದ್ದು, ಕೆಎಸ್‌ಪಿಸಿಬಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವುದಕ್ಕೂ ಮುನ್ನ ರಾಜ್ಯ ಸರ್ಕಾರವು ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ ಎಂದು ಪೀಠ ವಿವರಿಸಿದೆ.

ಅಲ್ಲದೆ, ಮುಂದಿನ ಶಾಂತ್ ಎ.ತಿಮ್ಮಯ್ಯ ಅವರು ಮುಂದಿನ ವಿಚಾರಣೆವರೆಗೂ ಕೆಎಸ್‌ಬಿಸಿಬಿ ಅಧ್ಯಕ್ಷರ ಹುದ್ದೆಯಲ್ಲಿ ಮುಂದುವರೆಯಬಹುದಾಗಿದೆ. ಆದರೆ, ಯಾವುದೇ ರೀತಿಯ ನೀತಿ ನಿರೂಪಗಳ ಕುರಿತು ಕ್ರಮಕ್ಕೆ ಮುಂದಾಗುವಂತಿಲ್ಲ ಎಂದು ಕೋರ್ಟ್​ ತಿಳಿಸಿದೆ. ಕೆಎಸ್‌ಪಿಸಿಬಿ ಅಧ್ಯಕ್ಷ ಸ್ಥಾನದಿಂದ ತಮ್ಮ ಅಧಿಕಾರವಧಿಯನ್ನು ಮೊಟಕುಗೊಳಿಸಿದ್ದ ಕ್ರಮವನ್ನು ಪ್ರಶ್ನಿಸಿ ಹಾಲಿ ಅಧ್ಯಕ್ಷ ಶಾಂತ್.ಎ. ತಿಮ್ಮಯ್ಯ ಸಲ್ಲಿಸಿರುವ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಮುಂದಿನ ವಿಚಾರಣೆ ವೇಳೆಗೆ ಅರ್ಜಿದಾರರು ಮತ್ತು ಸರ್ಕಾರ ತಮ್ಮ ಲಿಖಿತ ಹೇಳಿಕೆಗಳನ್ನು ಸಲ್ಲಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿತು.

ಪ್ರಕರಣದ ಹಿನ್ನೆಲೆ ಏನು? ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಶಾಂತ್ ಎ.ತಿಮ್ಮಯ್ಯ ಅವರ ಅವಧಿ ಮುಗಿದಿದೆ. ಹಾಗಾಗಿ, ಅವರ ಸ್ಥಾನಕ್ಕೆ ಹೊಸದಾಗಿ ನೇಮಕಾತಿ ನಡೆಸಬೇಕಿದೆ. ನೇಮಕಾತಿ ನಡೆಯುವವರೆಗೂ ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖೆ ಕಾರ್ಯದರ್ಶಿಯನ್ನು ಕೆಎಸ್‌ಪಿಸಿಬಿ ಅಧ್ಯಕ್ಷರಾಗಿ ಹೆಚ್ಚುವರಿ ಜವಾಬ್ದಾರಿ ಹೊರಿಸಲಾಗಿದೆ ಎಂದು ತಿಳಿಸಿ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿತ್ತು.

ಈ ಹಿಂದೆ ಅಧ್ಯಕ್ಷರಾಗಿದ್ದ ಜಯರಾಂ ಅವರು ರಾಜೀನಾಮೆ ನೀಡಿದ್ದರು. ಅವರ ಸ್ಥಾನಕ್ಕೆ ಶಾಂತ ತಿಮ್ಮಯ್ಯ ಅವರನ್ನು ನೇಮಕ ಮಾಡಲಾಗಿತ್ತು ಎಂದು ಸರ್ಕಾರ ತಿಳಿಸಿತ್ತು. ಅದನ್ನು ಪ್ರಶ್ನಿಸಿ ಶಾಂತ್ ಎ.ತಿಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇದೇ ವೇಳೆ, ಚಿಕ್ಕಳ್ಳಾಪುರದ ಮಾಜಿ ಶಾಸಕ ಡಾ.ಸುಧಾಕರ್ ಅವರನ್ನು ಕೆಎಸ್‌ಪಿಸಿಬಿ ಅಧ್ಯಕ್ಷರ ಸ್ಥಾನಕ್ಕೆ ನೇಮಕ ಮಾಡಿದ್ದ ಕ್ರಮವನ್ನು ಪ್ರಶ್ನಿಸಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ಸಲ್ಲಿಸಿದ್ದ ಅರ್ಜಿ ಮಾನ್ಯತೆ ಕಳೆದುಕೊಂಡ ಹಿನ್ನೆಲೆಯಲ್ಲಿ ಇತ್ಯರ್ಥ ಪಡಿಸಿ ಆದೇಶಿಸಿತು.

ಇದನ್ನೂ ಓದಿ: ಗೂಂಡಾ ಕಾಯ್ದೆಯಡಿ ಬಂಧಿಸುವಾಗ ಆರೋಪಿಗೆ ಅರ್ಥವಾಗುವ ಭಾಷೆಯಲ್ಲಿ ವಿವರಿಸಬೇಕು: ಹೈಕೋರ್ಟ್

Last Updated : Sep 7, 2023, 7:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.