ETV Bharat / state

ಕೇವಲ ಒಂದು ಜೊತೆ ಸಮವಸ್ತ್ರ ನೀಡುತ್ತಿರುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತರಾಟೆ..

ಹೈಕೋರ್ಟ್ ಹೊರಡಿಸಿರುವ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಮಾಸ್ಟರ್ ಮಂಜುನಾಥ್ ಎಂಬುವವರಿಂದ ನ್ಯಾಯಾಂಗ ನಿಂದನೆ ಅರ್ಜಿ - ಶಾಲಾ ಮಕ್ಕಳಿಗೆ ಸಮವಸ್ತ್ರ ಕಲ್ಪಿಸಲು ಎರಡು ವಾರಗಳ ಕಾಲಾವಕಾಶ ನೀಡಿದ ನ್ಯಾಯಪೀಠ.

author img

By

Published : Jan 31, 2023, 10:52 PM IST

High Court strongly criticized the government
ಕೇವಲ ಒಂದು ಜೊತೆ ಸಮವಸ್ತ್ರ ನೀಡುತ್ತಿರುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಬ್ಯಾಸ ಮಾಡುತ್ತಿರುವ ಮಕ್ಕಳಿಗೆ ಒಂದು ಜೊತೆ ಮಾತ್ರ ಸಮವಸ್ತ್ರ ಮತ್ತು ಶೂಗಳನ್ನು ಒದಗಿಸುತ್ತಿರುವ ಕ್ರಮಕ್ಕೆ ಹೈಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ. ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲು ಚೀಲ ನೀಡಬೇಕು ಎಂದು 2018ರ ಆಗಸ್ಟ್‌ನಲ್ಲಿ ಹೈಕೋರ್ಟ್ ಹೊರಡಿಸಿರುವ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಕೊಪ್ಪಳ ಜಿಲ್ಲೆಯ ಮಾಸ್ಟರ್ ಮಂಜುನಾಥ್ ಎಂಬುವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ನೇತೃತ್ವದ ವಿಭಾಗೀಯ ಪೀಠ ಸರ್ಕಾರ ಮತ್ತು ಅಧಿಕಾರಿಗಳ ಕಾರ್ಯವೈಕರಿಗೆ ಅತೃಪ್ತಿ ಹೊರ ಹಾಕಿದೆ. ಅಲ್ಲದೆ, ಸರ್ಕಾರ ಹಮ್ಮಿಕೊಳ್ಳುತ್ತಿರುವ ಉತ್ಸವ ನಡೆಸಲು ಕೋಟ್ಯಂತರ ಹಣ ಖರ್ಚು ಮಾಡಲಾಗುತ್ತದೆ. ಆದರೆ, ಶಾಲಾ ಮಕ್ಕಳಿಗೆ ಅಗತ್ಯವಾದ ಸಮವಸ್ತ್ರ ನೀಡುವುದಕ್ಕೆ ಮುಂದಾಗಿಲ್ಲ. ಸರ್ಕಾರಕ್ಕೆ ಆತ್ಮಸಾಕ್ಷಿ ಇಲ್ಲವಾಗಿದೆ. ಸರ್ಕಾರಿ ಶಾಲಾ ಮಕ್ಕಳ ಕುರಿತು ಮಾನವೀಯತೆ ತೋರುತ್ತಿಲ್ಲ. ಸರ್ಕಾರ ಈಗಲಾದರೂ ಕಣ್ಣು ತೆರೆದು ಅಗತ್ಯವಾದ ಸಮವಸ್ತ್ರ ಒದಗಿಸಬೇಕು ಎಂದು ಸೂಚನೆ ನೀಡಿದೆ.

ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ವೀರಪ್ಪ:ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಸರ್ಕಾರ ಸಲ್ಲಿಸಿದ್ದ ಪ್ರಮಾಣ ಪತ್ರ ಪರಿಶೀಲನೆ ನಡೆಸಿದ ನ್ಯಾಯಪೀಠ, 2019-20 ಮತ್ತು 2020-21ನೇ ಶಾಲಿನಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಕೇವಲ ಒಂದು ಜೊತೆ ಸಮವಸ್ತ್ರ ಕೊಟ್ಟಿದ್ದು, ಎರಡನೇ ಜೊತೆ ಖರೀದಿಗೆ ಶಾಲಾ ಮುಖ್ಯಸ್ಥರ ಎಸ್‌ಡಿಎಂಎಂಸಿ ಖಾತೆ ಹಣ ವರ್ಗಾಯಿಸಿರುವ ಅಂಶ ಬಹಿರಂಗವಾಗಿತ್ತು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ವೀರಪ್ಪ ಅವರು, ಸರ್ಕಾರ ಎರಡು ಜೊತೆ ಸಮವಸ್ತ್ರಕ್ಕೆ ಹಣ ಕಳುಹಿಸಿರುವುದಾಗಿ ಹೇಳುತ್ತಿದೆ. ಆದರೆ, ಇಲ್ಲಿ ಒಂದು ಜೊತೆಗೆ ಮಾತ್ರ ಇದೆ. ಬಹುಶಃ ಒಂದು ಜತೆಯಲ್ಲಿ ಒಂದು ಬಟ್ಟೆಯಿರುವುದಿಲ್ಲ. ಮೇಲಿನದ್ದು ಇದ್ದರೆ, ಕೆಳಗಿನದ್ದು ಇರುವುದಿಲ್ಲ. ಒಂದು ಕಾಲುಚೀಲ ಮತ್ತು ಒಂದು ಶೂಗೆ ಹಣ ಕಳುಹಿಸಿರಬೇಕು. ಫಲಾನುಭವಿ ಮಕ್ಕಳಿಗೆ ಸಮವಸ್ತ್ರ, ಶೂ, ಕಾಲು ಚೀಲ ಸಿಕ್ಕದೆಯೇ ಎಂಬುದು ಯಾರಿಗೆ ಗೊತ್ತು ಎಂದು ಪ್ರಶ್ನಿಸಿದರು.

ಅಲ್ಲದೆ, ಏಕೆ ಸರಿಯಾದ ರೀತಿಯಲ್ಲಿ ಸಮವಸ್ತ್ರ ನೀಡಿಲ್ಲ? ಸಮವಸ್ತ್ರ, ಶೂ-ಕಾಲುಚೀಲ ವಿತರಣೆ ಹೊಣೆ ಹೊತ್ತಿರುವ ಅಧಿಕಾರಿ ಯಾರು? ಎಂಬುದನ್ನು ತಿಳಿಸಿ. ನ್ಯಾಯಾಲಯ ಅವರ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ನಿಗದಿ ಮಾಡಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರದ ಪರ ವಕೀಲರಿಗೆ ಎಚ್ಚರಿಕೆ ನೀಡಿದರು.

ಮಕ್ಕಳ ವಿಚಾರದಲ್ಲಿ ಮಲತಾಯಿ ಧೋರಣೆಯನ್ನು ಸಹಿಸುವುದಿಲ್ಲ:ಸಮವಸ್ತ್ರವಿಲ್ಲದಿದ್ದರೆ ಮಕ್ಕಳಿಗೆ ಬಹಳ ನೋವಾಗುತ್ತದೆ ಎಂಬುದು ಅಧಿಕಾರಿಗಳಿಗೆ ಗೊತ್ತೇ? ಒಂದು ಬಾರಿ ಮಕ್ಕಳ ಮನಸ್ಸು ಹಾಳಾದರೆ ಜೀವನಪೂರ್ತಿ ಅವರು ಯಾತನೆಗೆ ಸಿಲುಕುತ್ತಾರೆ. ಮಕ್ಕಳ ಶೈಕ್ಷಣಿಕ ಬದುಕನ್ನು ಹೀಗೆ ಮಾಡಿದರೆ ಏನು ಕತೆ? ಕೊಡುವುದಾದರೆ ಸೂಕ್ತ ರೀತಿಯಲ್ಲಿ ಸಮವಸ್ತ್ರ ಕೊಡಿ. ಇಲ್ಲವಾದರೆ ಬೇಡ. ಪೂರ್ತಿಯಾಗಿ ಸಾಯಿಸಿಬಿಡಿ. ಅರ್ಧಂಬರ್ಧ ಸಾಯಿಸಬೇಡಿ. ನಿಜಕ್ಕೂ ಅಧಿಕಾರಿಗಳಿಗೆ ಸರ್ಕಾರಿ ಶಾಲಾ ಮಕ್ಕಳ ಬಗ್ಗೆ ಮಾನವೀಯತೆ ಇಲ್ಲ. ಅದೇ ಸಮಸ್ಯೆ ಮೂಲ. ಅವರ ಮಕ್ಕಳು ಸರ್ಕಾರಿ ಶಾಲೆಗೆ ಹೋಗುವುದಿಲ್ಲ. ಅಧಿಕಾರಿಗಳ ಮಕ್ಕಳು ಖಾಸಗಿ ಶಾಲೆಗೆ ಕಾರಿನಲ್ಲಿ ಹೋಗಿ, ಬರುತ್ತಾರೆ. ಮಕ್ಕಳ ವಿಚಾರದಲ್ಲಿ ಮಲತಾಯಿ ಧೋರಣೆಯನ್ನು ಸಹಿಸುವುದಿಲ್ಲ ಎಂದು ನ್ಯಾಯಮೂರ್ತಿ ಹೇಳಿದರು.

ಶಿಕ್ಷಣ ವಿಚಾರದಲ್ಲಿ ಸರ್ಕಾರ ತನ್ನ ಸಾಂವಿಧಾನಿಕ ಹೊಣೆಗಾರಿಕೆಯನ್ನು ನಿರ್ವಹಿಸಬೇಕಲ್ಲವೇ?:ಇತ್ತಿಚೆಗೆ ಸರ್ಕಾರಿ ಶಾಲೆಗೆ ಭೇಟಿ ನೀಡಿದ್ದೆ. ಅಲ್ಲಿ ಕಲಿಯುವ ಒಟ್ಟು 520 ಮಕ್ಕಳಿಗೆ ಒಂದೇ ಒಂದು ಶೌಚಾಲಯ ಇತ್ತು. ಅದರಲ್ಲೂ ಗಿಡ-ಗಂಟಿ ಬೆಳೆದು ಮಕ್ಕಳು ಅದನ್ನು ಬಳಸಲು ಹೆದರುತ್ತಿದ್ದರು. ಹಾವು ಬರುತ್ತದೆ ಎನ್ನುತ್ತಿದ್ದರು. ಕೊನೆಗೆ ನಾವೇ ಅದನ್ನು ಸ್ವಚ್ಛಗೊಳಿಸಿದೆವು. ಇದು ದುರದೃಷ್ಟಕರ. ಇಂತಹ ಪರಿಸ್ಥಿತಿಯಿದ್ದರೆ ಸರ್ಕಾರಕ್ಕೆ ನಾಚಿಕೆ ಉಂಟು ಮಾಡುವುದಿಲ್ಲವೇ? ಸರ್ಕಾರ ಉತ್ಸವ ನಡೆಸುತ್ತದೆ. ಬೇರೆ ಕಾರ್ಯಕ್ರಮಗಳಿಗೆ ಕೋಟಿ ಗಟ್ಟಲೇ ಖರ್ಚು ಮಾಡುತ್ತದೆ. ಮಕ್ಕಳ ಹಕ್ಕು, ಶಿಕ್ಷಣ ವಿಚಾರದಲ್ಲಿ ಸರ್ಕಾರ ತನ್ನ ಸಾಂವಿಧಾನಿಕ ಹೊಣೆಗಾರಿಕೆಯನ್ನು ನಿರ್ವಹಿಸಬೇಕಲ್ಲವೇ? ಎಂದು ನ್ಯಾಯಪೀಠ ಪ್ರಶ್ನಿಸಿತು.

ಈ ಕುರಿತು ಎರಡು ವಾರಗಳ ಕಾಲಾವಕಾಶ ನೀಡಿದ ನ್ಯಾಯಪೀಠ ಅಷ್ಟರಲ್ಲಿ ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ಕಲ್ಪಿಸಬೇಕು. ಇಲ್ಲವಾದರೆ ಸಂಬಂಧಿತ ಅಧಿಕಾರಿಯ ವಿರುದ್ಧ ಆರೋಪ ನಿಗದಿ ಮಾಡಲಾಗುತ್ತದೆ. ಅಂದು ಅವರು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ತಿಳಿಸಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ಕರ್ನಾಟಕ ಸಮಗ್ರ ಶಿಕ್ಷಣ ಯೋಜನೆಯ ನಿರ್ದೇಶಕಿ ಪ್ರಮಾಣ ಪತ್ರ ಸಲ್ಲಿಸಿ 2021ರ ಆ.28ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ 2021-22ರ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಒಂದು ಜೊತೆ ಸಮವಸ್ತ್ರ ನೀಡಲಾಗಿದೆ. ಇದರಲ್ಲಿ ಎರಡನೇ ಜೊತೆ ಸಮವಸ್ತ್ರ ಖರೀದಿಸಲು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಂಬಂಧಿತ ಎಸ್‌ಡಿಎಂಸಿಯ ಖಾತೆಗೆ ಹಣ ವರ್ಗಾಯಿಸಲಾಗಿದೆ. 2019-20ನೇ ಸಾಲಿನಲ್ಲಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲು ಚೀಲ ಖರೀದಿಸಲು ಸಂಬಂಧಿತ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಎಸ್‌ಡಿಎಂಸಿಯ ಜಂಟಿ ಖಾತೆಗೆ ಅಗತ್ಯ ಹಣ ವರ್ಗಾಯಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ:ಯುಜಿಸಿ ನಿಗದಿಪಡಿಸಿದ ಅರ್ಹತೆಯಿದ್ದವರನ್ನು ಮಾತ್ರ ಅತಿಥಿ ಉಪನ್ಯಾಸಕರನ್ನಾಗಿ ನೇಮಿಸಿ : ಹೈಕೋರ್ಟ್ ನಿರ್ದೇಶನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.