ETV Bharat / state

ಆದೇಶ ಪಾಲಿಸದ ಮಂಗಳೂರು ಪಾಲಿಕೆ : ಸೂಪರ್ ಸೀಡ್ ಎಚ್ಚರಿಕೆ ನೀಡಿದ ಹೈಕೋರ್ಟ್

ಮಂಗಳೂರು ಮಹಾನಗರ ಪಾಲಿಕೆ ಘನತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ಹೀಗಾಗಿಯೇ, ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ, ಕುಡುಪು ಹಾಗೂ ಮಂದಾರ ಪ್ರದೇಶದಲ್ಲಿ ಘನತ್ಯಾಜ್ಯ ಭೂಭರ್ತಿ ಘಟಕ ಕುಸಿದು ದೊಡ್ಡಮಟ್ಟದಲ್ಲಿ ಹಾನಿ ಸೃಷ್ಟಿಸಿದೆ..

ಹೈಕೋರ್ಟ್
ಹೈಕೋರ್ಟ್
author img

By

Published : Jun 14, 2021, 8:56 PM IST

ಬೆಂಗಳೂರು : ಘನ ತ್ಯಾಜ್ಯ ನಿರ್ವಹಣೆ ಸಂಬಂಧ ನ್ಯಾಯಾಲಯದ ಆದೇಶಗಳನ್ನು ಪಾಲಿಸದ ಮಂಗಳೂರು ಮಹಾನಗರ ಪಾಲಿಕೆ ನಡವಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಸರ್ಕಾರ ಪಾಲಿಕೆಯನ್ನು ಸೂಪರ್ ಸೀಡ್ ಮಾಡುವ ಕುರಿತು ಗಂಭೀರವಾಗಿ ಚಿಂತನೆ ನಡೆಸಬೇಕು ಎಂದು ಅಭಿಪ್ರಾಯಪಟ್ಟಿದೆ.

ಮಂಗಳೂರಿನ ಪಚ್ಚನಾಡಿಯಲ್ಲಿ ನಡೆದ ಘನತ್ಯಾಜ್ಯ ಭೂಭರ್ತಿ ಘಟಕ ಕುಸಿತ ದುರ್ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ಪಾಲಿಕೆಗೆ ಈ ಎಚ್ಚರಿಕೆ ನೀಡಿದೆ.

ವಿಚಾರಣೆ ವೇಳೆ ಪಾಲಿಕೆ ಸಲ್ಲಿಸಿದ ಮಧ್ಯಂತರ ವರದಿ ಪರಿಶೀಲಿಸಿದ ಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಆದೇಶಗಳಲ್ಲಿ ಪಾಲಿಕೆ ಒಂದನ್ನೂ ಕೂಡ ಪಾಲನೆ ಮಾಡಿಲ್ಲ. ನ್ಯಾಯಾಲಯದ ಆದೇಶಗಳಿಗೆ ಬೆಲೆ ಇಲ್ಲವೇ? ಪಾಲಿಕೆಯ ವರ್ತನೆ ಸಹಿಸುವಂತದ್ದಲ್ಲ. ಈ ಪರಿ ನಿರ್ಲಕ್ಷ್ಯ ವಹಿಸುತ್ತಿರುವ ಪಾಲಿಕೆಯನ್ನು ರಾಜ್ಯ ಸರ್ಕಾರ ಸೂಪರ್ ಸೀಡ್ ಮಾಡುವ ಕುರಿತು ಗಂಭೀರವಾಗಿ ಯೋಚಿಸಬೇಕು ಎಂದು ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿತು.

ಹಾಗೆಯೇ, ನ್ಯಾಯಾಲಯದ ಹಿಂದಿನ ಆದೇಶದಂತೆ ಭೂ ಭರ್ತಿ ಜಾಗದಲ್ಲಿ ಸಂಭವಿಸಿದ ಆಗ್ನಿ ಆಕಸ್ಮಿಕದ ಬಗ್ಗೆ ಸಮಗ್ರ ವರದಿ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಜೂನ್ 21ಕ್ಕೆ ಮುಂದೂಡಿತು. ಇದಕ್ಕೂ ಮುನ್ನ ಕಾನೂನು ಸೇವಾ ಪ್ರಾಧಿಕಾರದ ಪರ ವಕೀಲ ಶ್ರೀಧರ್ ಪ್ರಭು ವಾದ ಮಂಡಿಸಿ, ಪಾಲಿಕೆ ನ್ಯಾಯಾಲಯದ ಯಾವ ಆದೇಶವನ್ನೂ ಪಾಲನೆ ಮಾಡಿಲ್ಲ. ಆಗ್ನಿ ಆಕಸ್ಮಿಕದ ಕುರಿತಂತೆಯೂ ನ್ಯಾಯಾಲಯಕ್ಕೆ ವರದಿ ಸಲ್ಲಿಸಿಲ್ಲ ಎಂದು ವಿವರಿಸಿದರು.

ಮಂಗಳೂರು ಮಹಾನಗರ ಪಾಲಿಕೆ ಘನತ್ಯಾಜ್ಯ ನಿರ್ವಹಣೆಯಲ್ಲಿ ವಿಫಲವಾಗಿದೆ. ಹೀಗಾಗಿಯೇ, ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ, ಕುಡುಪು ಹಾಗೂ ಮಂದಾರ ಪ್ರದೇಶದಲ್ಲಿ ಘನತ್ಯಾಜ್ಯ ಭೂಭರ್ತಿ ಘಟಕ ಕುಸಿದು ದೊಡ್ಡಮಟ್ಟದಲ್ಲಿ ಹಾನಿ ಸೃಷ್ಟಿಸಿದೆ. ಈ ಅನಾಹುತದ ಸಂತ್ರಸ್ತ ಕುಟುಂಬಗಳಿಗೆ ಪರಿಹಾರಿ ನೀಡುವ ವಿಚಾರವಾಗಿ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಪೀಠ, ಮಂಗಳೂರು ಮಹಾನಗರ ಪಾಲಿಕೆಗೆ ಕಾಲ ಕಾಲಕ್ಕೆ ಹಲವು ನಿರ್ದೇಶನಗಳನ್ನು ನೀಡಿದೆ. ಆದರೆ, ಪಾಲಿಕೆ ಅವುಗಳನ್ನು ಪಾಲಿಸಿಲ್ಲ ಎಂಬುದು ಹೈಕೋರ್ಟ್ ಅಸಮಾಧಾನಕ್ಕೆ ಕಾರಣವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.