ETV Bharat / state

ಹೈಕೋರ್ಟ್, ಸುಪ್ರೀಂಕೋರ್ಟ್‌ನ ತೀರ್ಪುಗಳು ಕನ್ನಡದಲ್ಲಿ ಪ್ರಕಟ - ಈಟಿವಿ ಭಾರತ ಕನ್ನಡ

ಸುಪ್ರೀಂ ಕೋರ್ಟ್ ಮತ್ತು ಕರ್ನಾಟಕ ಹೈಕೋರ್ಟ್‌ನ ಪ್ರಮುಖ ತೀರ್ಪುಗಳನ್ನು ಕನ್ನಡೀಕರಿಸಿ ಹೈಕೋರ್ಟ್​ ವೆಬ್​ಸೈಟ್​ನಲ್ಲಿ ಪ್ರಕರಟಿಸಲಾಗಿದೆ.

ಹೈ ಕೋರ್ಟ್
ಹೈ ಕೋರ್ಟ್
author img

By

Published : Apr 20, 2023, 7:14 AM IST

ಬೆಂಗಳೂರು: ನ್ಯಾಯಾಂಗದ ಆದೇಶಗಳನ್ನು ಸಾಮಾನ್ಯ ಜನ ಮತ್ತು ದಾವೆದಾರರಿಗೆ ಅರ್ಥೈಸುವುದಕ್ಕಾಗಿ ಸುಪ್ರೀಂ ಕೋರ್ಟ್ ಮತ್ತು ಕರ್ನಾಟಕ ಹೈಕೋರ್ಟ್‌ನ ಒಟ್ಟು 197 ಪ್ರಮುಖ ತೀರ್ಪುಗಳನ್ನು ಕನ್ನಡೀಕರಿಸಿ ಹೈಕೋರ್ಟ್ ವೆಬ್ಸೈಟ್‌ನಲ್ಲಿ ಪ್ರಕಟಿಸಿದೆ. ಕೇರಳ, ಗುಜರಾತ್ ಮತ್ತು ಮಹಾರಾಷ್ಟ್ರ ಹೈಕೋರ್ಟ್‌ಗಳು ಈಗಾಗಲೇ ಸ್ಥಳೀಯ ಭಾಷೆಯಲ್ಲಿ ತೀರ್ಪುಗಳನ್ನು ಪ್ರಕಟಿಸಲು ಆರಂಭಿಸಿವೆ. ಆದರೆ, ಅತಿ ಹೆಚ್ಚು ತೀರ್ಪುಗಳನ್ನು ಕನ್ನಡದಲ್ಲಿ ಪ್ರಕಟಿಸಿರುವುದು ಕರ್ನಾಟಕ ಹೈಕೋರ್ಟ್ ಮಾತ್ರ ಎಂದು ತಿಳಿದು ಬಂದಿದೆ.

ಪ್ರಾರಂಭಿಕ ಹಂತದಲ್ಲಿ ಕರ್ನಾಟಕ ಹೈಕೋರ್ಟ್‌ನ 169 (https://karnatakajudiciary.kar.nic.in/hck_judgments.php) ಮತ್ತು ಸುಪ್ರೀಂ ಕೋರ್ಟ್‌ನ 28 (https://karnatakajudiciary.kar.nic.in/hck_judgments.php) ಕನ್ನಡೀಕರಿಸಿದ ತೀರ್ಪುಗಳನ್ನು ಪ್ರಕಟಿಸಲಾಗಿದೆ.

ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟಲಿಜೆನ್ಸ್) ಸಹಾಯದಿಂದ ತೀರ್ಪುಗಳು ಮತ್ತು ನ್ಯಾಯಾಂಗದ ದಾಖಲೆಗಳನ್ನು ಸ್ಥಳೀಯ ಭಾಷೆಗಳಲ್ಲಿ ಪ್ರಕಟಿಸುವ ಮೂಲಕ ನ್ಯಾಯದಾನ ಪಡೆಯುವಿಕೆ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಎರಡೂ ತೀರ್ಪುಗಳು ವೆಬ್‌ಪೇಜ್‌ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ರಾಜ್ಯಮಟ್ಟದಲ್ಲಿ ಈ ಉದ್ದೇಶ ಸಾಧಿಸಲು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದಲ್ಲಿ ಕರ್ನಾಟಕ ಹೈಕೋರ್ಟ್ ಸಮಿತಿ ರಚಿಸಿದೆ. ಸದರಿ ಸಮಿತಿಯಲ್ಲಿ ಕರ್ನಾಟಕ ಹೈಕೋರ್ಟ್‌ನ ಮತ್ತೊಬ್ಬ ನ್ಯಾಯಮೂರ್ತಿ ಸಿ ಎಂ ಜೋಶಿ ಅವರು ಸದಸ್ಯರಾಗಿದ್ದಾರೆ. ಕರ್ನಾಟಕ ಹೈಕೋರ್ಟ್‌ನಲ್ಲಿ ಹಾಲಿ ಇರುವ ಅನುವಾದಕರ ಸಹಾಯದಿಂದ ಅನುವಾದ ಪ್ರಾಜೆಕ್ಟ್ ಅನ್ನು ಆರಂಭಿಸಲಾಗಿದೆ.

ಕರ್ನಾಟಕ ಹೈಕೋರ್ಟ್, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಜನಸಾಮಾನ್ಯರಲ್ಲಿ ಕಾನೂನು ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಕನ್ನಡದಲ್ಲೇ ತೀರ್ಪುಗಳು ಲಭ್ಯವಾಗುವಂತೆ ಮಾಡುತ್ತಿರುವುದು ಜನಜಾಗೃತಿ ಕಾರ್ಯಕ್ರಮಕ್ಕೆ ಅನುಕೂಲವಾಗಲಿದೆ ಎಂದು ಹೈಕೋರ್ಟ್‌ನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬ್ಯಾಂಕ್ ಪಾಸ್‌ಬುಕ್‌ನಲ್ಲಿ ನಮೂದಾಗುವ ಮೊತ್ತವನ್ನು ವ್ಯಕ್ತಿಯ ಆದಾಯವೆಂದು ಪರಿಗಣಿಸಲಾಗದು: ಹೈಕೋರ್ಟ್

ಹೈಕೋರ್ಟ್‌ಗೆ ಬೇಸಿಗೆ ರಜೆ: ರಾಜ್ಯ ಹೈಕೋರ್ಟ್​ಗೆ ಏಪ್ರಿಲ್ 24ರಿಂದ ಮೇ 20ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರ್ಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲದ ಪೀಠಗಳನ್ನು ರಚಿಸಲಾಗಿದೆ. ಪ್ರಧಾನ ಪೀಠದಲ್ಲಿ ಏಪ್ರಿಲ್ 25, 27, ಮೇ 2, 4, 9, 11, 16, 18 ರಂದು ರಜಾಕಾಲದ ಪೀಠಗಳು ಕಾರ್ಯನಿರ್ವಹಣೆ ಮಾಡಲಿವೆ. ಈ ಅವಧಿಯಲ್ಲಿ ತಡೆಯಾಜ್ಞೆ, ಮಧ್ಯಂತರ ನಿರ್ದೇಶನ ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಇತ್ಯಾದಿ ಪ್ರಕರಣಗಳ ವಿಚಾರಣೆಯನ್ನು ಮಾತ್ರ ನಡೆಸಲಾಗುತ್ತದೆ. ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ ರೂಪದ ಅರ್ಜಿಗಳ ವಿಚಾರಣೆ ಇರುವುದಿಲ್ಲ. ಇ-ಫೈಲಿಂಗ್ ಪೋರ್ಟಲ್ ಮೂಲಕ ಇ-ಫೈಲಿಂಗ್ ಮಾಡಬಹುದಾಗಿದೆ ಎಂದು ರಿಜಿಸ್ಟ್ರಾರ್ (ಜುಡಿಷಿಯಲ್) ಎಂ ಚಂದ್ರಶೇಖರ್ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್​ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.