ETV Bharat / state

ವಿಪ್ ಉಲ್ಲಂಘನೆ : ಕೊಳ್ಳೇಗಾಲ ನಗರಸಭೆ ಸದಸ್ಯರನ್ನು ಅನರ್ಹಗೊಳಿಸಿದ್ದ ಡಿಸಿ ಆದೇಶ ಎತ್ತಿ ಹಿಡಿದ ಹೈಕೋರ್ಟ್ - ಕೋಳ್ಳೆಗಾಲ ನಗರಸಭೆ ಸದಸ್ಯರನ್ನು ಅನರ್ಹಗೊಳಿಸಿದ್ದ ಡಿಸಿ

2020ರ ಅಕ್ಟೋಬರ್ 29ರಂದು ಕೊಳ್ಳೇಗಾಲ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿತ್ತು. ಇದನ್ನು ಉಲ್ಲಂಘಿಸಿ ಬಿಎಸ್​​​​ಪಿ 7 ಮಂದಿ ಸದಸ್ಯರು ಬಿಜೆಪಿ ಪರ ಮತ ಚಲಾಯಿಸಿದ್ದರು..

ಜ್ಞಾನಪೀಠ ಪುರಸ್ಕೃತರು ಓದಿದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ

author img

By

Published : Sep 25, 2021, 7:01 PM IST

Updated : Sep 25, 2021, 7:13 PM IST

ಬೆಂಗಳೂರು : ಬಹುಜನ ಸಮಾಜ ಪಕ್ಷದ ವಿಪ್(ಬಿಎಸ್​​​​​ಪಿ) ಉಲ್ಲಂಘಿಸಿ ಬಿಜೆಪಿ ಬೆಂಬಲಿಸಿದ್ದ ಕೊಳ್ಳೇಗಾಲ ನಗರಸಭೆಯ 7ಮಂದಿ ಸದಸ್ಯರನ್ನು ಅನರ್ಹಗೊಳಿಸಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ತಮ್ಮನ್ನು ನಗರಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ ಜಿಲ್ಲಾಧಿಕಾರಿ ಆದೇಶ ರದ್ದುಪಡಿಸಬೇಕು ಎಂದು ಕೋರಿ ಕೊಳ್ಳೇಗಾಲ ನಗರಸಭೆ ಸದಸ್ಯರಾಗಿದ್ದ ಪವಿತ್ರ ಹಾಗೂ ಇತರ 6 ಮಂದಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿರುವ ಹೈಕೋರ್ಟ್, ಜಿಲ್ಲಾಧಿಕಾರಿ ಆದೇಶ ಎತ್ತಿ ಹಿಡಿದಿದೆ.

ಪ್ರಕರಣದ ಹಿನ್ನೆಲೆ : 2020ರ ಅಕ್ಟೋಬರ್ 29ರಂದು ಕೊಳ್ಳೇಗಾಲ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿತ್ತು. ಇದನ್ನು ಉಲ್ಲಂಘಿಸಿ ಬಿಎಸ್​​​ಪಿ​ 7 ಮಂದಿ ಸದಸ್ಯರು ಬಿಜೆಪಿ ಪರ ಮತ ಚಲಾಯಿಸಿದ್ದರು. ಪಕ್ಷದ ವಿಪ್ ಉಲ್ಲಂಘಿಸಿದ್ದ ಸದಸ್ಯರನ್ನು ಹುದ್ದೆಯಿಂದ ಅನರ್ಹಗೊಳಿಸುವಂತೆ ಕೋರಿ ಬಿಎಸ್​​​​ಪಿ ನಗರಸಭೆ ಸದಸ್ಯೆ ಜಿ. ಜಯಮರಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ದೂರಿನ ವಿಚಾರಣೆ ನಡೆಸಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂಆರ್ ರವಿ ಅವರು, ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ (ಪಕ್ಷಾಂತರ ನಿಷೇಧ) ಕಾಯ್ದೆ 1987ರ ಅಡಿ 7 ಮಂದಿ ಸದಸ್ಯರನ್ನು ಅನರ್ಹಗೊಳಿಸಿ ಇದೇ ಸೆಪ್ಟೆಂಬರ್ 6ರಂದು ಆದೇಶಿಸಿದ್ದರು. ಜಿಲ್ಲಾಧಿಕಾರಿ ಆದೇಶದಿಂದ ನಗರಸಭೆ ಸದಸ್ಯ ಸ್ಥಾನ ಕಳೆದುಕೊಂಡ ಗಂಗಮ್ಮ, ನಾಗಮಣಿ, ನಾಗಸುಂದ್ರಮ್ಮ, ಪ್ರಕಾಶ್, ರಾಮಕೃಷ್ಣ, ನಾಸಿರ್ ಷರೀಫ್ ಹಾಗೂ ಪವಿತ್ರಾ ಹೈಕೋರ್ಟ್ ಮೆಟ್ಟಿಲೇರಿದ್ದರು.

Last Updated : Sep 25, 2021, 7:13 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.