ETV Bharat / state

ಲಂಚ ಪ್ರಕರಣ: ಲೋಕಾಯುಕ್ತ ಶಿಫಾರಸು ಜಾರಿ ಮಾಡದ ಸರ್ಕಾರದ ಕ್ರಮ ಎತ್ತಿ ಹಿಡಿದ ಹೈಕೋರ್ಟ್

ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ ಸಿಬ್ಬಂದಿಗೆ ಕಡ್ಡಾಯ ನಿವೃತ್ತಿ ಕೊಡುವಂತೆ ಲೋಕಾಯುಕ್ತ ಇಲಾಖೆ ನೀಡಿದ್ದ ಶಿಫಾರಸಿನ ಬದಲು ಹಿಂಬಡ್ತಿ ನೀಡಿದ್ದ ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

author img

By

Published : Mar 4, 2023, 7:20 AM IST

high-court-upholds-government-action-in-bribery-case
ಲಂಚ ಪ್ರಕರಣ: ಲೋಕಾಯುಕ್ತ ಶಿಫಾರಸು ಜಾರಿ ಮಾಡದ ಸರ್ಕಾರದ ಕ್ರಮ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು : ಭ್ರಷ್ಟಾಚಾರ ಆರೋಪದಲ್ಲಿ ಸಿಬ್ಬಂದಿಯೊಬ್ಬರನ್ನು ಕಡ್ಡಾಯ ನಿವೃತ್ತಿಗೆ ಲೋಕಾಯುಕ್ತ ನೀಡಿದ್ದ ಶಿಫಾರಸಿನ ಬದಲಿಗೆ ಹಿಂಬಡ್ತಿ ನೀಡಿದ್ದ ಶಿಸ್ತು ಪ್ರಾಧಿಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಲೋಕಾಯುಕ್ತರ ಶಿಫಾರಸಿನ ಮೇರೆಗೆ ಕ್ರಮ ಕೈಗೊಳ್ಳದ ಸರ್ಕಾರದ ಕ್ರಮ ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ರಿಜಿಸ್ಟ್ರಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಅಲ್ಲದೆ, ಸೇವೆಯಲ್ಲಿ ಕರ್ತವ್ಯಲೋಪ ಎಸಗಿದ ಸರ್ಕಾರಿ ಸೇವಕರಿಗೆ ಲೋಕಾಯುಕ್ತರು ನಿರ್ದಿಷ್ಟ ಶಿಕ್ಷೆ ವಿಧಿಸಲು ಶಿಫಾರಸು ಮಾಡಿದ್ದಾರೆ ಎಂಬ ಕಾರಣಕ್ಕೆ ತಪ್ಪಿತಸ್ಥ ನೌಕರನ ವಿರುದ್ಧ ವಿವೇಚನೆ ಬಳಸಿ ಕ್ರಮ ಕೈಗೊಳ್ಳಲು ಸರ್ಕಾರದ ಶಿಸ್ತು ಪ್ರಾಧಿಕಾರಕ್ಕೆ ಇರುವ ಅಧಿಕಾರ ಕಸಿದುಕೊಳ್ಳಲಾಗುವುದಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟು ಲೋಕಾಯುಕ್ತರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ ಏನು ? : 2009ರಲ್ಲಿ 700 ರೂಪಾಯಿ ಲಂಚ ಸ್ವೀಕರಿಸಿದ ಆರೋಪದಲ್ಲಿ ಬೀದರ್ ಜಿಲ್ಲೆಯ ಔರಾದ್‌ನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿದ್ದ ಚಂದ್ರಶೇಖರ್ ಎಂಬುವರ ವಿರುದ್ಧ ಲೋಕಾಯುಕ್ತ ಸಂಸ್ಥೆ ತನಿಖೆ ನಡೆಸಿತ್ತು. ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಆರೋಪಿಯು ಲಂಚ ಕೇಳಿರುವ ವ್ಯಕ್ತಿಯ ಯಾವುದೇ ಕೆಲಸ ಬಾಕಿ ಉಳಿಸಿಕೊಂಡಿಲ್ಲ. ಹೀಗಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಂಬುದಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಆರೋಪಿಯನ್ನು ಖುಲಾಸೆಗೊಳಿಸಿತ್ತು. ಆದರೆ, ಲೋಕಾಯುಕ್ತ ಕಾಯ್ದೆ 1984 ಸೆಕ್ಷನ್ 12(3)ರನ್ನು ಬಳಸಿ ಆರೋಪಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ ನೀಡುವಂತೆ ಲೋಕಾಯುಕ್ತ ಸಂಸ್ಥೆಯು ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ, ಸರ್ಕಾರ ಕಡ್ಡಾಯ ನಿವೃತ್ತಿ ನೀಡದೆ, ಹಿಂಬಡ್ತಿ ನೀಡಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಲೋಕಾಯುಕ್ತ ರಿಜಿಸ್ಟ್ರಾರ್ ಹೈಕೋರ್ಟ್ ಮೆಟ್ಟಿಲೇರಿತ್ತು.

ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು, ಪ್ರಕರಣದ ಪ್ರತಿವಾದಿಯಾಗಿರುವ ಚಂದ್ರಶೇಖರ್ ಅವರು ತಪ್ಪಿತಸ್ಥ ಎಂದು ಪರಿಗಣಿಸಿ ಕಡ್ಡಾಯ ನಿವೃತ್ತಿ ನೀಡುವಂತೆ ಶಿಫಾರಸು ಮಾಡಲಾಗಿದೆ. ಆದರೆ, ಶಿಸ್ತು ಪ್ರಾಧಿಕಾರ ಶಿಫಾರಸು ಅನುಷ್ಠಾನಗೊಳಿಸದೆ ಹಿಂಬಡ್ತಿ ನೀಡಿದ್ದು, ಇದಕ್ಕೆ ಯಾವುದೇ ಸಕಾರಣವನ್ನು ನೀಡಿಲ್ಲ ಎಂದು ವಾದಿಸಿದ್ದರು. ಹೀಗಾಗಿ ಸರ್ಕಾರದ ಕ್ರಮ ರದ್ದು ಪಡಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

'ಸರ್ಕಾರದ ಶಿಸ್ತು ಪ್ರಾಧಿಕಾರವು ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಅಧಿಕಾರವಿದೆ. ಅಲ್ಲದೆ, ಲೋಕಾಯುಕ್ತರ ಶಿಫಾರಸನ್ನು ಪಾಲನೆ ಮಾಡಿಲ್ಲ ಎಂಬ ಕಾರಣಕ್ಕೆ ಲೋಕಾಯುಕ್ತ ಸಂಸ್ಥೆಯು ನೊಂದ ವ್ಯಕ್ತಿ ಎಂಬುದಾಗಿ ಪರಿಗಣಿಸಲಾಗುವುದಿಲ್ಲ. ಜೊತೆಗೆ, ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ ಆರೋಪಿಯನ್ನು ಖುಲಾಸೆಗೊಳಿಸಿದೆ. ಹೀಗಾಗಿ ಕಡ್ಡಾಯ ನಿವೃತ್ತಿ ನೀಡಲಾಗಿಲ್ಲ' ಎಂದು ಸರ್ಕಾರದ (ಶಿಸ್ತು ಪ್ರಾಧಿಕಾರ) ಪರ ವಕೀಲರು ನ್ಯಾಯಪೀಠಕ್ಕೆ ವಿವರಿಸಿದ್ದರು. ವಾದ - ಪ್ರತಿವಾದ ಆಲಿಸಿರುವ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿ ಸರ್ಕಾರದ ಕ್ರಮ ಎತ್ತಿ ಹಿಡಿದಿದೆ.

ಇದನ್ನೂ ಓದಿ: ಸರ್ಕಾರದ ಭೊಕ್ಕಸಕ್ಕೆ ನಷ್ಟ ಮಾಡಿದ್ದ ಆರೋಪ: ಹಾವೇರಿ ಶಾಸಕ ನೆಹರು ಓಲೇಕಾರ್​ಗೆ ಹೈಕೋರ್ಟ್ ಜಾಮೀನು

25 ವರ್ಷಗಳ ಹಿಂದಿನ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್ : ಪ್ರತ್ಯೇಕ ಪ್ರಕರಣದಲ್ಲಿ ಬೆಂಗಳೂರಿನ ಬೆಳ್ಳಂದೂರು ಕೆರೆ ಮಾಲಿನ್ಯವನ್ನುಂಟು ಮಾಡುವ ಕೆಲ ಚಟುವಟಿಕೆಗಳನ್ನು ನಿಯಂತ್ರಿಸಲು ಸೂಚನೆ ನೀಡುವಂತೆ ಕೋರಿ ಕಳೆದ 25 ವರ್ಷಗಳ ಹಿಂದೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದೆ. ಬೆಳ್ಳಂದೂರು ಗ್ರಾಮ ಪಂಚಾಯತ್ ಕಾರ್ಯಾಲಯ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್. ಕಿಣಗಿ ಅವರಿದ್ದ ನ್ಯಾಯಪೀಠ, ಅರ್ಜಿಯನ್ನು ಇತ್ಯರ್ಥಪಡಿಸಿ ಆದೇಶಿಸಿದೆ.

ಅಲ್ಲದೆ, ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಕುರಿತಂತೆ ಯಾವುದೇ ನಿರ್ದಿಷ್ಟ ಕಾನೂನುಗಳು ಇರಲಿಲ್ಲ. ಕಾಲ ಬದಲಾದಂತೆ ಈ ಸಂಬಂಧ ಹಲವು ಕಾನೂನುಗಳನ್ನು ರಚನೆ ಮಾಡಲಾಗಿದೆ. ಪರಿಸರ ಸಮತೋಲನ ಕಾಪಾಡುವುದಕ್ಕಾಗಿ ಹಲವು ವೇದಿಕೆಗಳು ಪ್ರಾರಂಭವಾಗಿವೆ. ತಪ್ಪಿತಸ್ಥರಿಗೆ ಶಿಕ್ಷೆಯನ್ನೂ ವಿಧಿಸಲಾಗುತ್ತಿದೆ. ಹೀಗಾಗಿ ಅರ್ಜಿ ಇತ್ಯರ್ಥಪಡಿಸುತ್ತಿರುವುದಾಗಿ ಪೀಠ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.