ETV Bharat / state

ಸಮರ್ಪಕವಾಗಿ ಸಮವಸ್ತ್ರ ನೀಡದ ಸರ್ಕಾರ: ಹಿರಿಯ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸುವುದಾಗಿ ಹೈಕೋರ್ಟ್ ಎಚ್ಚರಿಕೆ

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಮವಸ್ತ್ರ, ಶೂ ಮತ್ತು ಕಾಲು ಚೀಲ ವಿತರಿಸಿರುವ ಬಗ್ಗೆ ಅಗತ್ಯ ಮಾಹಿತಿ ನೀಡದ ರಾಜ್ಯ ಸರ್ಕಾರ - ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್.

High Court warns
ಶಾಲಾ ಮಕ್ಕಳಿಗೆ ಸಮರ್ಪಕವಾಗಿ ಸಮವಸ್ತ್ರ ನೀಡಿದ ಸರ್ಕಾರ: ಹಿರಿಯ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸುವುದಾಗಿ ಹೈಕೋರ್ಟ್ ಎಚ್ಚರಿಕೆ
author img

By

Published : Feb 14, 2023, 10:48 PM IST

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಮವಸ್ತ್ರ, ಶೂ ಮತ್ತು ಕಾಲು ಚೀಲ ವಿತರಿಸಿರುವ ಬಗ್ಗೆ ಅಗತ್ಯ ಮಾಹಿತಿ ನೀಡದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್​ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಉನ್ನತ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ಎಲ್ಲರಿಗೂ ಬುದ್ದಿ ಬರಲಿದೆ ಎಂದು ಇದೇ ವೇಳೆ ಸರ್ಕಾರಕ್ಕೆ ಕೋರ್ಟ್​ ಎಚ್ಚರಿಕೆ ನೀಡಿದೆ.

ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲು ಚೀಲ ನೀಡಬೇಕು ಎಂದು 2019ರ ಆ.28ರಂದು ಹೈಕೋರ್ಟ್ ಹೊರಡಿಸಿರುವ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಕೊಪ್ಪಳ ಜಿಲ್ಲೆಯ ಮಾಸ್ಟರ್ ಮಂಜುನಾಥ್ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಎರಡು ವಾರದಲ್ಲಿ ವರದಿ ಸಲ್ಲಿಸಬೇಕು: ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಮತ್ತು ನ್ಯಾಯಮೂರ್ತಿ ರಾಜೇಶ್​ ರೈ ಅವರಿದ್ದ ವಿಭಾಗೀಯ ಪೀಠ ಸರ್ಕಾರ ಮತ್ತು ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತ ಪಡಿಸಿತು. ಅಲ್ಲದೇ, ರಾಜ್ಯದ ಎಲ್ಲ ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರು(ಡಿಡಿಪಿಐ), ಸಮವಸ್ತ್ರ ಖರೀದಿಸಲು ರಾಜ್ಯ ಸರ್ಕಾರ ಎಷ್ಟು ಹಣ ಬಿಡುಗಡೆ ಮಾಡಿದೆ.

ಅದರಲ್ಲಿ ಎಷ್ಟು ಹಣ ಸದ್ಭಳಕೆಯಾಗಿದೆ ಎಂಬ ಬಗ್ಗೆ ವೈಯಕ್ತಿಕವಾಗಿ ಪರಿಶೀಲನೆ ನಡೆಸಬೇಕು. ಹಾಗೆಯೇ, 2019-20ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಎರಡು ಜೊತೆ ಸವವಸ್ತ್ರ ಮತ್ತು ಶೂ, ಕಾಲು ಚೀಲ ವಿತರಣೆ ಮಾಡುವ ಮೂಲಕ ಸರ್ಕಾರವು ಹೈಕೋರ್ಟ್‌ನ 2019ರ ಆ.28ರ ತೀರ್ಪು ಪಾಲಿಸಿದೆಯೇ ಅಥವಾ ಇಲ್ಲವೇ ಎಂಬುದನ್ನು ಖಾತರಿಪಡಿಸಿ ಎರಡು ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.

ಇದಕ್ಕೂ ಮುನ್ನ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ನಿರ್ದೇಶಕರು ಸಲ್ಲಿಸಿರುವ ಪ್ರಮಾಣ ಪತ್ರವನ್ನು ಸರ್ಕಾರಿ ವಕೀಲರು ನ್ಯಾಯಪೀಠಕ್ಕೆ ಒದಗಿಸಿದರು. ಸಮವಸ್ತ್ರ ಖರೀದಿಸಲು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. 2019-20, 2020-21, 2021-22, 2022-23ನೇ ಶೈಕ್ಷಣಿಕ ಸಾಲಿನಲ್ಲಿ ಎಲ್ಲ 35 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೂ ಮತ್ತು ಕಾಲುಚೀಲ ನೀಡಲಾಗಿದೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

ಆ ಪ್ರಮಾಣ ಪತ್ರ ಪರಿಶೀಲಿಸಿದ ನ್ಯಾಯಪೀಠ, ಸಮವಸ್ತ್ರ, ಶೂ ಮತ್ತು ಕಾಲುಚೀಲ ನೀಡಿರುವುದನ್ನು ಪುಷ್ಠೀಕರಿಸುವ ದಾಖಲೆ ಒದಗಿಸಿಲ್ಲ. ವಿದ್ಯಾರ್ಥಿಗಳಿಗೆ ಸಮವಸ್ತ್ರ ತಲುಪಿರುವುದು ದೇವರಿಗೆ ಮಾತ್ರ ಗೊತ್ತಾಗಬೇಕು. ಸರ್ಕಾರವು ಕೋರ್ಟ್ ಆದೇಶ ಪಾಲಿಸಿಲ್ಲ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಒದಗಿಸಬೇಕು ಎಂಬ ಮನೋಭಾವ ಸರ್ಕಾರಕ್ಕೆ ಇದ್ದರೆ, ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ನ್ಯಾಯಾಂಗ ನಿಂದನೆ ಆರೋಪದಿಂದ ತಪ್ಪಿಕೊಳ್ಳಬೇಕೆಂದು ಕೋರ್ಟ್‌ಗೆ ಸುಮ್ಮನೆ ಪ್ರಮಾಣಪತ್ರ ಸಲ್ಲಿಸಿದರೆ ಸಾಲದು ಎಂದು ಕಿಡಿಕಾರಿತು. ಅಲ್ಲದೇ, ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಹೊರಿಸಲಾಗುವುದು ಎಂದು ತಿಳಿಸಿತು.

ಸರ್ಕಾರದ ಮೇಲೆ ನಂಬಿಕೆ ಹೊರಟು ಹೋಗಿದೆ:ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರಿ ವಕೀಲರು, ಹಾಗೆ ಮಾಡಿದರೆ ಏನು ಬರುತ್ತದೆ ಎಂದು ನ್ಯಾಯಪೀಠವನ್ನು ಕೇಳಿಕೊಂಡರು. ಇದಕ್ಕೆ ಬೇಸರ ವ್ಯಕ್ತ ಪಡಿಸಿದ ನ್ಯಾಯಪೀಠ, ಏನು ಬರುತ್ತದೆ ಎಂದರೆ ಅಧಿಕಾರಿಯನ್ನು ಜೈಲಿಗೆ ಕಳುಸುತ್ತೇವೆ. ಆಗ ಮಕ್ಕಳಿಗೆ ಸಮವಸ್ತ್ರ ಹೇಗೆ ಬರುವುದಿಲ್ಲ ಎನ್ನುವುದು ನೋಡುತ್ತೇವೆ. ಸರ್ಕಾರದ ಉನ್ನತ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ನಮ್ಮನ್ನು ಕಾಪಾಡಲು ನ್ಯಾಯಾಲಯವಿದೆ ಎಂಬುದು ಜನರಿಗೆ ಗೊತ್ತಾಗುತ್ತದೆ. ಆದರೆ, ಮಾನ ಮಾರ್ಯದೆ ಇಲ್ಲದಿದ್ದರೆ ಅಧಿಕಾರಿಗಳಿಗೆ ಆರು ತಿಂಗಳು ಜೈಲಿಗೆ ಹೋಗಿಬರುತ್ತಾರೆ. ಆಗ ಏನೂ ಮಾಡೋಕೆ ಆಗಲ್ಲ. ಕೋರ್ಟ್‌ಗೂ ಸಹ ಎಲ್ಲೋ ಒಂದು ಕಡೆ ಸರ್ಕಾರದ ಮೇಲೆ ನಂಬಿಕೆ ಹೊರಟು ಹೋಗಿದೆ ಎಂದು ತಿಳಿಸಿತು.

ಸಮವಸ್ತ್ರ ವಿತರಣೆಗೆ ಸಂಬಂಧಿಸಿದಂತೆ ಸರ್ಕಾರದ ಪ್ರಮಾಣ ಪತ್ರವು ನ್ಯಾಯಾಲಯಕ್ಕೆ ತೃಪ್ತಿಯಿಲ್ಲ. ರಾಜ್ಯದ ಎಲ್ಲ 35 ಜಿಲ್ಲೆಗಳಲ್ಲಿ ಸಮವಸ್ತ್ರ ವಿತರಣೆಗೆ ಹಣ ಸರ್ಕಾರ ಬಿಡುಗಡೆ ಮಾಡಲಾಗಿದೆಯೇ? ಅದರಲ್ಲಿ ಎಷ್ಟು ಬಳಕೆಯಾಗಿದೆ ಎಂಬ ಬಗ್ಗೆ ಡಿಡಿಪಿಐಗಳು ದಾಖಲೆಗಳನ್ನು ಪಡೆದು ಪರಿಶೀಲಿಸಿ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಸೂಚಿಸಿದ ನ್ಯಾಯಪೀಠ, ಅದನ್ನು ಕಾನೂನು ಸೇವಾ ಪ್ರಾಧಿಕಾರದ ಮೂಲಕ ನ್ಯಾಯಾಲಯ ಮರು ಪರಿಶೀಲನೆಗೆ ಒಳಪಡಿಸಲಾಗುವುದು ಎಂದು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ:ಸ್ಥಳೀಯ ಸಂಸ್ಥೆಗಳ ಚುನಾವಣೆ:10 ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ ಹೊರಡಿಸಲಾಗುವುದು ಎಂದ ಸರ್ಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.