ETV Bharat / state

High Court: ಪಿಎಸ್‌ಐ ಮರುಪರೀಕ್ಷೆ ಪ್ರಶ್ನಿಸಿದ್ದ ಅರ್ಜಿ ಜುಲೈ 12ಕ್ಕೆ ವಿಚಾರಣೆ

ಪಿಎಸ್‌ಐ ಮರುಪರೀಕ್ಷೆಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದು ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜುಲೈ 12ರಂದು ನಡೆಸಲಿದೆ.

Etv Bharat
Etv Bharat
author img

By

Published : Jul 10, 2023, 8:10 PM IST

Updated : Jul 10, 2023, 9:04 PM IST

ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣ ಹಿನ್ನೆಲೆಯಲ್ಲಿ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದು ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯ ಕುರಿತು ವಿಚಾರಣೆ ನಡೆಸುವುದಕ್ಕಾಗಿ ಹೈಕೋರ್ಟ್ ಜುಲೈ 12ಕ್ಕೆ ದಿನಾಂಕ ನಿಗದಿಪಡಿಸಿದೆ.

ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿದ್ದವು.

ಇದರ ವಿಚಾರಣೆ ವೇಳೆ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ರೊಬೆನ್ ಜಾಕಬ್ ಹಾಜರಾಗಿ, ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಯಾವುದೇ ಆರೋಪಕ್ಕೆ ಗುರಿಯಾಗದ ಅಭ್ಯರ್ಥಿಗಳಿಗೆ ಮತ್ತೊಂದು ಪರೀಕ್ಷೆ ನಡೆಸದಿರಲು ಕೈಗೊಂಡಿರುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಪೂರಕವಾಗಿ ಕಾರಣಗಳನ್ನು ವಿವರಿಸಿ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಅರ್ಜಿದಾರರ ಪರ ವಕೀಲರು, ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಕಕ್ಷಿದಾರರ ವಿರುದ್ಧ ರಾಜ್ಯದ ಯಾವುದೇ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿಲ್ಲ. ಆರೋಪಿಗಳ ವಿರುದ್ಧ ಯಾವೆಲ್ಲಾ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಅವುಗಳ ಸ್ಥಿತಿಗತಿ ಕುರಿತ ಮಾಹಿತಿ ಒಳಗೊಂಡ ಪ್ರಮಾಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಈ ಅಂಶಗಳನ್ನು ದಾಖಲಿಸಿಕೊಂಡ ನ್ಯಾಯಪೀಠ, ಉಭಯ ಪಕ್ಷಕಾರರು ಸಲ್ಲಿಸಿರುವ ದಾಖಲೆಗಳನ್ನು ಪರಸ್ಪರ ಹಂಚಿಕೊಳ್ಳಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಜುಲೈ 12ಕ್ಕೆ ಮುಂದೂಡಿತು.

ಪಿಎಸ್‌ಐ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾಗಿರುವವರನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ ಮತ್ತೊಂದು ವಿಶೇಷ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿ ರಾಜ್ಯ ಸರ್ಕಾರವು ಕಳೆದ ಜುಲೈ 5ರಂದು ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿತ್ತು.

ಪ್ರಕರಣದ ಹಿನ್ನೆಲೆ: 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವುದಾಗಿ 2022ರ ಏಪ್ರಿಲ್​ 29ರಂದು ಅಂದಿನ ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶ ರದ್ದು ಪಡಿಸಬೇಕು. ಕಳಂಕರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಪ್ರಕಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಮೆಟ್ಟಿಲೇರಿದ್ದರು. ಆ ಅರ್ಜಿಗಳನ್ನು ಕೆಎಟಿ 2022ರ ಜುಲೈ 19ರಂದು ವಜಾಗೊಳಿಸಿತ್ತು. ಇದರಿಂದ, ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯನ್ನು 2022ರ ಸೆಪ್ಟೆಂಬರ್​​ 28ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಮರು ಪರೀಕ್ಷೆಗೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಈ ನಡುವೆ, ಕೆಲವರು ಮಾಡಿರುವ ತಪ್ಪಿಗೆ ಪರೀಕ್ಷೆ ಬರೆದಿರುವ ಎಲ್ಲರಿಗೂ ಶಿಕ್ಷೆ ಕೊಡುವುದು ಸರಿಯಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ 32 ಮಂದಿ ಕಳಂಕಿತರನ್ನು ಗುರುತಿಸಲಾಗಿದೆ. ಉಳಿದ ಅಭ್ಯರ್ಥಿಗಳ ವಿರುದ್ಧ ಯಾವುದೇ ಆರೋಪಗಳಿಲ್ಲ. ಕಳಂಕಿತರು ಹಾಗೂ ಕಳಂಕರಹಿತರನ್ನು ಪ್ರತ್ಯೇಕಿಸಲು ಅವಕಾಶವಿದ್ದರೂ, ಸರ್ಕಾರ ಆ ಪ್ರಯತ್ನವನ್ನೇ ಮಾಡದೆ, ಇಡೀ ಪ್ರಕ್ರಿಯೆ ರದ್ದುಪಡಿಸಿ, ಮರುಪರೀಕ್ಷೆ ನಡೆಸಲು ಮುಂದಾಗಿದೆ. ಇದು ಈಗಾಗಲೇ ಆಯ್ಕೆಯಾಗಿರುವ ಹಲವು ಅಭ್ಯರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಲಿದೆ. ಎಷ್ಟೋ ಅಭ್ಯರ್ಥಿಗಳಿಗೆ ವಯೋಮಿತಿ ಮೀರುತ್ತಿದ್ದು, ಅವರಿಗೆ ಉದ್ಯೋಗ ಲಭಿಸುವುದು ಕಷ್ಟಕರವಾಗಲಿದೆ. ಹೀಗಾಗಿ ಮರುಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತರನ್ನು ಪ್ರತ್ಯೇಕಿಸಿ ಉಳಿದವರಿಗೆ ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಕೋರಿದ್ದರು.

Last Updated : Jul 10, 2023, 9:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.