ETV Bharat / state

ನ್ಯಾಯಾಲಯದ ಆದೇಶ ದುರ್ಬಳಕೆ.. ಜಾಹೀರಾತಿಗೆ ನೀಡಿದ್ದ ಅನುಮತಿ ಹಿಂಪಡೆದ ಹೈಕೋರ್ಟ್

author img

By

Published : Sep 25, 2020, 8:52 PM IST

ಇಂದು ನಡೆದ ವಿಚಾರಣೆ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಓಂಪ್ರಕಾಶ್ ಪಾಟೀಲ್ ಸಿದ್ದಪಡಿಸಿದ್ದ ಪ್ರಮಾಣಪತ್ರವನ್ನು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದರು. ಪ್ರಮಾಣಪತ್ರದಲ್ಲಿ ಜಾಹೀರಾತು ಸಂಸ್ಥೆ ಸಹಾಯ ಮಾಡುವುದಾಗಿ ಪ್ರಸ್ತಾವನೆ ಸಲ್ಲಿಸಿದ್ದರಿಂದ ಹೋರ್ಡಿಂಗ್ಸ್ ಅಳವಡಿಸಲು ಅನುಮತಿ ನೀಡಲಾಗಿತ್ತು..

Highcourt
Highcourt

ಬೆಂಗಳೂರು : ನ್ಯಾಯಾಲಯದ ಆದೇಶ ದುರ್ಬಳಕೆ ಮಾಡಿಕೊಂಡ ಹಿನ್ನೆಲೆ ಕೊರೊನಾ ಸೋಂಕು ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸರ್ಕಾರದ ಕೋರಿಕೆ ಮೇರೆಗೆ ಜಾಹೀರಾತು ಫಲಕ ಅಳವಡಿಸಲು ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಹಿಂಪಡೆದಿದೆ.

ಜಾಹೀರಾತು ಫಲಕಗಳನ್ನು ಅಳವಡಿಸಲು ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ನ್ಯಾಯಾಲಯ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ವಕೀಲ ಜಿ ಆರ್ ಮೋಹನ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಕೊರೊನಾ ಸೋಂಕಿನ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜಾಹೀರಾತು ಫಲಕಗಳಲ್ಲಿ ಖಾಸಗಿ ಜಾಹೀರಾತುಗಳು ಇರಕೂಡದು ಎಂಬ ಷರತ್ತು ವಿಧಿಸಿ ಹೈಕೋರ್ಟ್ ಹೋರ್ಡಿಂಗ್ಸ್ ಅಳವಡಿಸಲು ಜುಲೈ 15ರಂದು ಅನುಮತಿ ನೀಡಿ ಆದೇಶಿಸಿತ್ತು. ಆದರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಫಲಕಗಳಲ್ಲಿ ಖಾಸಗಿ ಜಾಹೀರಾತು ಪ್ರದರ್ಶನಕ್ಕೂ ಅವಕಾಶ ನೀಡಿದ್ದರು. ಈ ವಿಚಾರವನ್ನು ಜಿಆರ್ ಮೋಹನ್ ಹೈಕೋರ್ಟ್ ಗಮನಕ್ಕೆ ತಂದಿದ್ದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಾಲಯ ಈ ಕುರಿತು ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು.

ಇಂದು ನಡೆದ ವಿಚಾರಣೆ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಓಂಪ್ರಕಾಶ್ ಪಾಟೀಲ್ ಸಿದ್ದಪಡಿಸಿದ್ದ ಪ್ರಮಾಣಪತ್ರವನ್ನು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದರು. ಪ್ರಮಾಣಪತ್ರದಲ್ಲಿ ಜಾಹೀರಾತು ಸಂಸ್ಥೆ ಸಹಾಯ ಮಾಡುವುದಾಗಿ ಪ್ರಸ್ತಾವನೆ ಸಲ್ಲಿಸಿದ್ದರಿಂದ ಹೋರ್ಡಿಂಗ್ಸ್ ಅಳವಡಿಸಲು ಅನುಮತಿ ನೀಡಲಾಗಿತ್ತು ಎಂದು ತಿಳಿಸಿದ್ದರು.

ಆರೋಗ್ಯ ಇಲಾಖೆ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ ಪೀಠ, ಜಾಹೀರಾತು ಫಲಕ ಅಳವಡಿಕೆಗೆ ಸಂಬಂಧಿಸಿದಂತೆ ಸರ್ಕಾರ ನ್ಯಾಯಾಲಯದ ಆದೇಶವನ್ನು ದುರ್ಬಳಕೆ ಮಾಡಿಕೊಂಡಿದೆ. ಯಾವುದೇ ಖಾಸಗಿ ಸಂಸ್ಥೆ ಅಥವಾ ಸೇವೆಗಳ ಜಾಹೀರಾತು ಇರದಂತೆ ಸರ್ಕಾರಕ್ಕೆ ಸ್ಪಷ್ಟವಾಗಿ ಸೂಚಿಸಿದ್ದರೂ, ಈ ರೀತಿ ನಡೆದುಕೊಂಡಿರುವುದು ಸರಿಯಲ್ಲ. ಹೀಗಾಗಿ ಜಾಹೀರಾತು ಫಲಕಗಳ ಅಳವಡಿಕೆಗೆ ನೀಡಿದ್ದ ಅನುಮತಿ ಆದೇಶವನ್ನು ಪಡೆಯಲಾಗುವುದು ಎಂದು ಸ್ಪಷ್ಟಪಡಿಸಿತು.

ಇದೇ ವೇಳೆ ಅಧಿಕಾರಿಗಳು ಖಾಸಗಿ ಜಾಹೀರಾತು ಸಂಸ್ಥೆಯಿಂದ ಹಣ ಪಡೆದಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿತು. ಇಲಾಖೆ ಪರ ವಕೀಲರು ನಯಾಪೈಸೆ ಪಡೆದಿಲ್ಲ ಎಂದು ಸಮರ್ಥಿಸಿಕೊಂಡರು. ಬಳಿಕ ನ್ಯಾಯಾಲಯ ಜಾಹೀರಾತು ಅಳವಡಿಸಿದ ಖಾಸಗಿ ಸಂಸ್ಥೆಯಿಂದ ತೆರಿಗೆ ವಸೂಲಿ ಮಾಡಬೇಕು ಹಾಗೂ ಖಾಸಗಿ ಜಾಹೀರಾತು ಸಂಸ್ಥೆಗೆ ಹೋರ್ಡಿಂಗ್ಸ್ ಅಳವಡಿಸಲು ಅನುಮತಿ ನೀಡಿರುವ ಕುರಿತು ಉನ್ನತ ಹಂತದ ಅಧಿಕಾರಿಗಳಿಂದ ತನಿಖೆ ನಡೆಸಿ ನ್ಯಾಯಾಲಕ್ಕೆ ವರದಿ ಸಲ್ಲಿಸಬೇಕು ಎಂದು ಸೂಚಿಸಿ ವಿಚಾರಣೆ ಮುಂದೂಡಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.