ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿರುವ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆದಿದ್ದ ಉನ್ನತ ಮಟ್ಟದ ಸಮಿತಿ ಸಭೆ ಆರಂಭಗೊಂಡಿದೆ.
ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಮಿತಿ ಕೊಠಡಿಯಲ್ಲಿ ಸಿಎಂ ಬಿಎಸ್ವೈ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ ಡಾ.ಸುಧಾಕರ್, ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.
ಕೊರೊನಾ ನಿಯಂತ್ರಣ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗುತ್ತಿದೆ. ನೆರೆ ರಾಜ್ಯಗಳಲ್ಲಿ ರಾಜ್ಯಕ್ಕೆ ಸೋಂಕಿತರು ಬರುತ್ತಿರುವುದಕ್ಕೆ ಕಡಿವಾಣ ಹಾಕಬೇಕು, ಗಡಿಯನ್ನು ಭದ್ರಪಡಿಸಿಕೊಳ್ಳಬೇಕು ಎನ್ನುವ ಕುರಿತು ಚರ್ಚೆ ನಡೆಸಲಾಗುತ್ತಿದೆ, ತಮಿಳುನಾಡು, ಕೇರಳ,ಮಹಾರಾಷ್ಟ್ರ ಗಡಿಗಳ ಮೇಲೆ ಹೆಚ್ಚಿನ ನಿಗಾ ಇರಿಸುವ ಕುರಿತು ಮಾತುಕತೆ ನಡೆಸಲಾಗುತ್ತಿದೆ.
ರಾಜ್ಯದಲ್ಲಿಯೂ ಮಾಸ್ಕ್ ಧರಿಸುವಿಕೆ, ಅಂತರ ಕಾಯ್ದುಕೊಳ್ಳುವುದು, ಸಭೆ-ಸಮಾರಂಭಗಳಿಗೆ ಕಠಿಣ ಕೋವಿಡ್ ನಿಯಮ ಹೇರುವುದು ಸೇರಿದಂತೆ ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಕುರಿತು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತಿದೆ.
ಕರ್ಫ್ಯೂ ಚಿಂತನೆ?
ಬೆಂಗಳೂರು, ತುಮಕೂರು, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದು, ಅಲ್ಲಿ ರಾತ್ರಿ ಕರ್ಫ್ಯೂ ಜಾರಿ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಹೆಚ್ಚು ಸೋಂಕಿರುವ ರಾಜ್ಯದಿಂದ ಬರುವವರಿಗೆ ಕೊರೊನಾ ಟೆಸ್ಟ್ ಕಡ್ಡಾಯ
- ಮಹಾರಾಷ್ಟ್ರ, ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ
- ಅಪಾರ್ಟ್ಮೆಂಟ್ಗಳಲ್ಲೂ ವ್ಯಾಕ್ಸಿನೇಷನ್ಗೆ ವ್ಯವಸ್ಥೆ ಮಾಡಿ
- 6ರಿಂದ 9ನೇ ತರಗತಿಯನ್ನ ಆನ್ಲೈನ್ ಕ್ಲಾಸ್ ಮಾಡುವಂಎ ಸರ್ಕಾರಕ್ಕೆ ಸಲಹೆ
- ಮಾರ್ಚ್ 17ರಂದು ಪ್ರಧಾನಿ ಮೋದಿ ಜತೆ ಸಿಎಂ ವಿಡಿಯೋ ಸಂವಾದ
- ಲಸಿಕೆ ಪಡೆಯಲು ಇರುವ ವಯೋಮಿತಿ ಸಡಿಲಗೊಳಿಸಲು ಕೇಂದ್ರಕ್ಕೆ ಪತ್ರ ಬರೆಯುವಂತೆ ಸಲಹೆ
- ಮಾಸ್ಕ್ ಕಡ್ಡಾಯ ಮಾಡಿರುವುದನ್ನ ಹೆಚ್ಚು ಪ್ರಚಾರಗೊಳಿಸಲು ಸಲಹೆ
ಇದನ್ನೂ ಓದಿ: ವ್ಯಕ್ತಿ ಮೇಲೆ ಯುವತಿ-ಯುವಕರಿಂದ ಅಮಾನವೀಯ ರೀತಿ ಹಲ್ಲೆ: ವಿಡಿಯೋ ವೈರಲ್