ETV Bharat / state

ಬೆಡ್ ಬ್ಲಾಕಿಂಗ್​ ದಂಧೆ: ತನಿಖಾ ವರದಿ ಕೇಳಿದ ಹೈಕೋರ್ಟ್ - ಬೆಂಗಳೂರು

ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಿರುವ ಎಫ್ಐಆರ್ ಮೇರೆಗೆ ಪೊಲೀಸರು ಕೈಗೊಂಡಿರುವ ತನಿಖಾ ವರದಿಯನ್ನು ಮುಂದಿನ ವಿಚಾರಣೆ ವೇಳೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.

Highcourt
ಹೈಕೋರ್ಟ್
author img

By

Published : May 6, 2021, 12:07 PM IST

ಬೆಂಗಳೂರು: ಬಿಬಿಎಂಪಿ ಕೋವಿಡ್ ವಾರ್ ರೂಮ್​ಗಳಲ್ಲಿ ಬೆಡ್ ಬ್ಲಾಕಿಂಗ್ ದಂಧೆಗೆ ಸಂಬಂಧಿಸಿದಂತೆ ದಾಖಲಿಸಿರುವ ಎಫ್ಐಆರ್ ಮೇರೆಗೆ ಪೊಲೀಸರು ಕೈಗೊಂಡಿರುವ ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಕೋವಿಡ್ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್ ಪೀಠಕ್ಕೆ ಮಾಹಿತಿ ನೀಡಿ, ಬಿಬಿಎಂಪಿ ಕೋವಿಡ್ ವಾರ್ ರೂಮ್​​ಗಳಲ್ಲಿ ಬೆಡ್ ಬ್ಲಾಕಿಂಗ್ ದಂಧೆ ನಡೆಯುತ್ತಿದೆ. ಬೆಡ್​​ಗಳಿಲ್ಲದೆ ರೋಗಿಗಳು ನರಳಾಡುತ್ತಿರುವ ಸಂದರ್ಭದಲ್ಲಿ ಇಂತದ್ದೊಂದು ದಂಧೆ ಆರಂಭವಾಗಿದೆ ಎಂದು ವಿವರಿಸಿದರು.

ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮಾಹಿತಿ ನೀಡಿ, ಬೆಡ್ ಬ್ಲಾಕಿಂಗ್ ಸಂಬಂಧ ಆರೋಪಗಳು ಕೇಳಿ ಬಂದಿವೆ. ಸಂಸದ ತೇಜಸ್ವಿ ಸೂರ್ಯ ಕೆಲವೊಂದು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಸಂಬಂಧ ಈಗಾಗಲೇ ಪೊಲೀಸರು ಎಫ್ಐಆರ್ ದಾಖಲಿಸಿ, ಕೆಲವು ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ಚುರುಕಾಗಿ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಿರುವ ಎಫ್ಐಆರ್ ಮೇರೆಗೆ ಪೊಲೀಸರು ಕೈಗೊಂಡಿರುವ ತನಿಖಾ ವರದಿಯನ್ನು ಮುಂದಿನ ವಿಚಾರಣೆ ವೇಳೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಮೌಖಿಕವಾಗಿ ಸೂಚಿಸಿತು.

ಓದಿ: 10% ಕಮಿಷನ್​ಗಾಗಿ ಬೆಡ್ ಬ್ಲಾಕಿಂಗ್ ದಂಧೆ: ಸಿಸಿಬಿ ಮುಂದೆ ಬಾಯ್ಬಿಟ್ಟ ವಂಚಕರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.