ETV Bharat / state

ದಂತ ವೈದ್ಯಕೀಯ ವಿದ್ಯಾರ್ಥಿನಿಗೆ ಪರೀಕ್ಷಾ ಪ್ರವೇಶ ಪತ್ರ ನಿರಾಕರಣೆ: ರಾಜೀವ್ ಗಾಂಧಿ ವಿವಿಗೆ ಹೈಕೋರ್ಟ್ ನೋಟಿಸ್ - bengaluru News

ಸುರತ್ಕಲ್‌ನ ಶ್ರೀನಿವಾಸ ದಂತ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿನಿಗೆ ಮೊದಲನೇ ವರ್ಷದ ಬಿಡಿಎಸ್ ಪರೀಕ್ಷೆ ಬರೆಯಲು ಪ್ರವೇಶ ಪತ್ರ ನೀಡದ ಸಂಬಂಧ ಆರ್‌ಜಿಯುಹೆಚ್‌ಎಸ್ ಪ್ರಾಧಿಕಾರಕ್ಕೆ ಹೈಕೋರ್ಟ್​ ನೋಟಿಸ್​ ನೀಡಿದೆ.

highcourt
ಹೈಕೋರ್ಟ್
author img

By

Published : Dec 9, 2020, 3:07 PM IST

ಬೆಂಗಳೂರು: ಮಂಗಳೂರು ಸುರತ್ಕಲ್‌ನ ಶ್ರೀನಿವಾಸ ದಂತ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿನಿಗೆ ಮೊದಲನೇ ವರ್ಷದ ದಂತ ವೈದ್ಯಕೀಯ ಪದವಿ (ಬಿಡಿಎಸ್) ಪರೀಕ್ಷೆ ಬರೆಯಲು ಪ್ರವೇಶ ಪತ್ರ ನೀಡದ ಸಂಬಂಧ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್‌ಜಿಯುಹೆಚ್‌ಎಸ್) ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ವಿವಿ ಪ್ರವೇಶ ಪತ್ರ ನೀಡದ ಕ್ರಮ ಪ್ರಶ್ನಿಸಿ ವಿದ್ಯಾರ್ಥಿನಿ ನಿಧಿ ಎಸ್. ಶೆಟ್ಟಿಗಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಅರವಿಂದ ಕುಮಾರ್ ನೇತೃತ್ವದ ವಿಭಾಗೀಯ ಪೀಠ ಈ ನೋಟಿಸ್ ಜಾರಿ ಮಾಡಿದೆ. ಜತೆಗೆ ಶ್ರೀನಿವಾಸ ದಂತ ವಿಜ್ಞಾನಗಳ ಸಂಸ್ಥೆ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಮತ್ತು ಭಾರತೀಯ ದಂತ ಪರಿಷತ್ತಿಗೂ ಇದೇ ವೇಳೆ ನೋಟಿಸ್ ಜಾರಿ ಮಾಡಿರುವ ಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿದೆ.

ಅರ್ಜಿದಾರರು 2019-20ನೇ ಸಾಲಿನಲ್ಲಿ ಸುರತ್ಕಲ್​ನ ಶ್ರೀನಿವಾಸ ದಂತ ವಿಜ್ಞಾನಗಳ ಸಂಸ್ಥೆಯಲ್ಲಿ ನಾಲ್ಕು ವರ್ಷದ ಬಿಡಿಎಸ್ ಕೋರ್ಸ್‌ಗೆ ಪ್ರವೇಶ ಪಡೆದಿದ್ದಾರೆ. 2020ರ ಅಕ್ಟೋಬರ್‌ನಲ್ಲಿ ನಡೆದ ಮೊದಲ ವರ್ಷದ ಬಿಡಿಎಸ್ ಪರೀಕ್ಷೆಗೆ ಪ್ರವೇಶ ಪತ್ರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ಪೋರ್ಟಲ್‌ನಲ್ಲಿ ಬಿಡಿಎಸ್‌ಗೆ ತಾನು ಪ್ರವೇಶ ಪಡೆದ ವಿವರ ಭರ್ತಿ ಮಾಡಿಲ್ಲ. ಇದೇ ಕಾರಣಕ್ಕೆ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಪ್ರವೇಶ ಪತ್ರ ವಿತರಿಸಿಲ್ಲ. ಆದ್ದರಿಂದ ಈಗ ಮತ್ತೆ ತನಗೆ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸುವಂತೆ ಆರ್‌ಜಿಯುಹೆಚ್‌ಎಸ್ ಮತ್ತು ಕೆಇಎಗೆ ನಿರ್ದೇಶಿಸುವಂತೆ ಕೋರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.