ಬೆಂಗಳೂರು: ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು ಮತ್ತು ಇತರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಯುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆಯು ಕೇಂದ್ರದ ಸುಗ್ರೀವಾಜ್ಞೆಗೆ ತದ್ವಿರುದ್ಧವಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಿರುವ ಪಿಐಎಲ್ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ವಕೀಲರಾದ ಜಿ.ಆರ್. ಮೋಹನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ವಾದ ಆಲಿಸಿದ ಪೀಠ, ಅರ್ಜಿಗೆ ಮೇ 22ರ ಒಳಗೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತು. ಜತೆಗೆ ಅರ್ಜಿಯಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿವಾದಿ ಮಾಡಬೇಕೆಂದು ಅರ್ಜಿದಾರರಿಗೆ ಸೂಚಿಸಿ ವಿಚಾರಣೆಯನ್ನು ಮೇ 26 ಕ್ಕೆ ಮುಂದೂಡಿತು.
ಅರ್ಜಿಯಲ್ಲಿ ಕೋವಿಡ್-19 ಕರ್ತವ್ಯದಲ್ಲಿ ನಿರತರಾಗಿರುವ ವೈದ್ಯರು ಹಾಗೂ ಮತ್ತಿತರ ಮುಂಚೂಣಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದರೆ ಅದನ್ನು ಸಂಜ್ಞೆಯ (ಕಾಗ್ನಿಜೆಬಲ್) ಮತ್ತು ಜಾಮೀನು ರಹಿತ ಅಪರಾಧ ಕೃತ್ಯ ಎಂದು ಪರಿಗಣಿಸಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಜತೆಗೆ, ತಪ್ಪಿತಸ್ಥರ ವಿರುದ್ಧ ದಂಡ ಸಹಿತ 7 ವರ್ಷ ಕಠಿಣ ಜೈಲು ಶಿಕ್ಷೆ ನಿಗದಿಪಡಿಸಿದೆ. ಆದರೆ, ರಾಜ್ಯ ಸರ್ಕಾರ ಏ.22ರಂದು ಹೊರಡಿಸಿರುವ ಸುಗ್ರೀವಾಜ್ಞೆಯಲ್ಲಿ ಕೋವಿಡ್-19 ಕರ್ತವ್ಯ ನಿರತ ವೈದ್ಯರು ಹಾಗೂ ಸಿಬ್ಬಂದಿ ಮೇಲಿನ ಹಲ್ಲೆ ಪ್ರಕರಣವನ್ನು ಅಸಂಜ್ಞೇಯ (ನಾನ್ ಕಾಗ್ನಿಜೆಬಲ್) ಹಾಗೂ ಜಾಮೀನು ಸಹಿತ ಅಪರಾಧ ಕೃತ್ಯ ಎಂದು ಪರಿಗಣಿಸಲಾಗಿದೆ. ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯಲ್ಲಿ ತಪ್ಪಿತಸ್ಥರಿಗೆ 3 ವರ್ಷ ಶಿಕ್ಷೆ, 50,000 ರೂ. ದಂಡ ವಿಧಿಸುವ ಅವಕಾಶ ನೀಡಲಾಗಿದೆ. ಇದು ಕೇಂದ್ರ ಸರ್ಕಾರದ ಸುಗ್ರಿವಾಜ್ಞೆಗೆ ತದ್ವಿರುದ್ಧ ಮತ್ತು ದುರ್ಬಲವಾಗಿದೆ ಎಂದು ಅರ್ಜಿದಾರರು ದೂರಿದ್ದಾರೆ.
ರಾಜ್ಯದ ಸುಗ್ರೀವಾಜ್ಞೆ ಪ್ರಶ್ನಿಸಿ ಪಿಐಎಲ್: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಕೊರೊನಾ ವಾರಿಯರ್ಸ್ ಮೇಲಿನ ಹಲ್ಲೆ ಕುರಿತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆಯನ್ನು ಆಕ್ಷೇಪಿಸಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಲಾಗಿದೆ.