ETV Bharat / state

ಕಂಪ್ಲಿ ತಾಲೂಕು ಕೈಬಿಟ್ಚು ವಿಜಯನಗರ ಜಿಲ್ಲೆ ಸ್ಥಾಪನೆ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - ಬೆಂಗಳೂರು ಸುದ್ದಿ

ಕಂಪ್ಲಿ ಸೇರ್ಪಡೆ ಹೋರಾಟ ಸಮಿತಿ ಅಧ್ಯಕ್ಷ ಕೆ.ಎಸ್ ಚಾಂದ್ ಬಾಷಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲಾಗಿದ್ದು, ಈ ಸಂಬಂಧ ಸರ್ಕಾರದ ಕ್ರಮ ಪ್ರಶ್ನಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

Highcourt noticed govt
ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
author img

By

Published : Mar 25, 2021, 9:44 PM IST

ಬೆಂಗಳೂರು: ಬಳ್ಳಾರಿ ಜಿಲ್ಲೆ ವಿಭಜಿಸಿ ಹೊಸದಾಗಿ ರಚಿಸರುವ ವಿಜಯನಗರ ಜಿಲ್ಲೆಯಿಂದ ಕಂಪ್ಲಿ ತಾಲೂಕನ್ನು ಕೈಬಿಟ್ಟಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಕಂಪ್ಲಿ ಸೇರ್ಪಡೆ ಹೋರಾಟ ಸಮಿತಿ ಅಧ್ಯಕ್ಷ ಕೆ.ಎಸ್ ಚಾಂದ್ ಬಾಷಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲಕಾಲ ಅರ್ಜಿದಾರರ ಪರ ವಕೀಲ ಕೆ. ರಾಘವೇಂದ್ರ ರಾವ್ ವಾದ ಆಲಿಸಿದ ಪೀಠ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಂದಾಯ ಭೂಮಾಪನ ಇಲಾಖೆ ಕಾರ್ಯದರ್ಶಿ, ಕಲಬುರಗಿ ಪ್ರಾದೇಶಿಕ ಆಯುಕ್ತ, ಬಳ್ಳಾರಿ ಜಿಲ್ಲಾಧಿಕಾರಿ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು.

ಅಲ್ಲದೇ, 6 ವಾರಗಳಲ್ಲಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು.
ಇನ್ನು ಅರ್ಜಿ ಇತ್ಯರ್ಥವಾಗುವವರೆಗೆ ವಿಜಯನಗರ ಜಿಲ್ಲೆ ರಚನೆ ಅಧಿಸೂಚನೆಗೆ ತಡೆ ನೀಡಬೇಕು ಎಂಬ ಅರ್ಜಿದಾರರ ಪರ ವಕೀಲರ ಮಧ್ಯಂತರ ಮನವಿಯನ್ನು ಪುರಸ್ಕರಿಸಲು ಪೀಠ ನಿರಾಕರಿಸಿತು.

ಅರ್ಜಿದಾರರ ಕೋರಿಕೆ ಏನಾಗಿತ್ತು

ಬಳ್ಳಾರಿ ಜಿಲ್ಲೆ ವಿಭಜನೆ ಸಂಬಂಧ ಪ್ರಾಥಮಿಕ ಅಧಿಸೂಚನೆ ಹೊರಡಿಸಿ ಸಾರ್ವಜನಿಕರ ಆಕ್ಷೇಪಣೆ ಆಹ್ವಾನಿಸಲಾಗಿತ್ತು. ಈ ವೇಳೆ, ಕಂಪ್ಲಿ ತಾಲೂಕನ್ನು ಹೊಸ ಜಿಲ್ಲೆಗೆ ಸೇರಿಸಬೇಕು ಎಂದು ಸಾವಿರಾರು ಜನ ಒತ್ತಾಯಿಸಿ ಆಕ್ಷೇಪಣೆ ಸಲ್ಲಿಸಿದ್ದರು. ಆದರೆ, ಸರ್ಕಾರ 2021ರ ಫೆ.8ರಂದು ಅಧಿಸೂಚನೆ ಹೊರಡಿಸುವ ವೇಳೆ ಕಂಪ್ಲಿಯನ್ನು ನೂತನ ಜಿಲ್ಲೆಯಿಂದ ಕೈಬಿಟ್ಟಿದೆ.‘

ಸರ್ಕಾರದ ಅಧಿಸೂಚನೆ ಸಾರ್ವಜನಿಕ ಹಿತಾಸಕ್ತಿಯಿಂದ ಕೂಡಿರದೇ, ರಾಜಕೀಯ ಹಿತಾಸಕ್ತಿಯಿಂದ ಕೂಡಿದೆ. ಭೂಕಂದಾಯ ಕಾಯ್ದೆಯ ಸೆಕ್ಷನ್ 6ರ ಪ್ರಕಾರ ಸಾರ್ವಜನಿಕರ ಆಕ್ಷೇಪಣೆಗಳನ್ನು ಪರಿಗಣಿಸದೇ, ವಿಚಾರಣೆಯನ್ನೂ ಮಾಡದಿರುವ ಸರ್ಕಾರದ ಕ್ರಮ ಕಾನೂನು ಬಾಹಿರವಾಗಿದೆ. ಆದ್ದರಿಂದ, ಕಂಪ್ಲಿಯನ್ನು ಹೊಸ ಜಿಲ್ಲೆ ವಿಜಯನಗರಕ್ಕೆ ಸೇರಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಇದನ್ನೂ ಓದಿ: ಕಾವೇರಿ ಕೂಗು ಅಭಿಯಾನ: ಹೈಕೋರ್ಟ್ ಆದೇಶ ಪ್ರಶ್ನಿಸಿ ಈಶ ಫೌಂಡೇಶನ್ ಸುಪ್ರೀಂಗೆ ಮೇಲ್ಮನವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.