ETV Bharat / state

ಸರ್ಕಾರಿ ನೌಕರರ ವರ್ಗಾವಣೆ ವಿಚಾರ: ಮಧ್ಯಪ್ರವೇಶಿಸಲು ನಿರಾಕರಿಸಿದ ಹೈಕೋರ್ಟ್ - ಹೈಕೋರ್ಟ್ ಸುದ್ದಿ

ಕೊರೊನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ನೌಕರರನ್ನು ವರ್ಗಾವಣೆ ಮಾಡದಂತೆ ನಿರ್ದೇಶಿಸಲು ಕೋರಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿರುವ ಹೈಕೋರ್ಟ್, ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

highcourt
ಹೈಕೋರ್ಟ್
author img

By

Published : Jun 29, 2020, 6:21 PM IST

ಬೆಂಗಳೂರು: ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡದಂತೆ ನಿರ್ದೇಶನ ಕೋರಿ ವಕೀಲ ಡಿ.ಜಿ.ಅಶೋಕ್ ಕುಮಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರ ವಕೀಲರು ವಾದಿಸಿ, 2020-21ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಈಗಾಗಲೇ ಕೈಬಿಡಲಾಗಿದೆ. ವಿರಳ ಪ್ರಕರಣಗಳಲ್ಲಿ ಮಾತ್ರ ಸಿಎಂ ಅನುಮೋದನೆ ಪಡೆದು ವರ್ಗಾವಣೆ ಮಾಡುವ ಸಂಬಂಧ ಜೂ. 18ರಂದು ಆದೇಶ ಹೊರಡಿಸಲಾಗಿದೆ. ಜತೆಗೆ ಜೂ. 26ರಂದು ಮತ್ತೊಂದು ಆದೇಶ ಹೊರಡಿಸಿ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ವರ್ಗದ ಅಧಿಕಾರಿ ಹಾಗೂ ನೌಕರರಿಗೆ ಅನ್ವಯವಾಗುವಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖೆಗಳ ಸಚಿವರಿಗೆ ಅಧಿಕಾರ ನೀಡಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಹೇಳಿಕೆ ದಾಖಲಿಸಿಕೊಂಡ ಪೀಠ, ವರ್ಗಾವಣೆ ಸರ್ಕಾರದ ಆಡಳಿತಕ್ಕೆ ಸಂಬಂಧಿಸಿದ ವಿಚಾರ. ಇದರಲ್ಲಿ ನ್ಯಾಯಾಲಯ ನೇರವಾಗಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ವರ್ಗಾವಣೆಯಿಂದ ಬಾಧಿತರಾಗುವ ಅಧಿಕಾರಿಗಳು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳ ಮೊರೆ ಹೋಗಲು ಮುಕ್ತ ಅವಕಾಶವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಪಿಐಎಲ್ ಇತ್ಯರ್ಥಪಡಿಸಿತು.

ಪ್ರಕರಣದ ಹಿನ್ನೆಲೆ:

ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಸಂದರ್ಭದಲ್ಲಿ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡಿದರೆ ಅವರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗಬೇಕಾಗುತ್ತದೆ. ಇದರಿಂದ ನೌಕರರು ಮತ್ತವರ ಕುಟುಂಬ ಕೊರೊನಾ ಅಪಾಯಕ್ಕೆ ಸಿಲುಕುವ ಸಾಧ್ಯತೆಯಿರುತ್ತದೆ. ಆದ್ದರಿಂದ 2020-21ನೇ ಸಾಲಿನ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ನಡೆಸದಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.