ETV Bharat / state

ಪದವಿ ಪರೀಕ್ಷೆಯನ್ನು ಒಂದು ತಿಂಗಳು ಮುಂದೂಡಿ: ಉನ್ನತ ಶಿಕ್ಷಣ ಇಲಾಖೆಯಿಂದ ವಿವಿಗಳಿಗೆ ಸೂಚನೆ.. - ಪದವಿ ಪರೀಕ್ಷೆ ಮುಂದೂಡಿಕೆ

ಕೆಲವು ವಿ.ವಿಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದವು. ಆದರೆ, ಮೇಲೆ ಉಲ್ಲೇಖಿಸಿದ ಕಾರಣಗಳನ್ನು ನೀಡಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದವು.

karnataka govt
ಕರ್ನಾಟಕ ಸರ್ಕಾರ
author img

By

Published : Feb 16, 2022, 10:36 PM IST

ಬೆಂಗಳೂರು: ಕೊರೊನಾ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ ಪ್ರವಚನಗಳು ಮುಗಿಯದಿರುವ ಹಿನ್ನಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ್ ನಾಯಕ್ ವಿವಿಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ನೀಡಿ ಕೆಲವು ವಿ.ವಿಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದವು. ಆದರೆ, ಮೇಲೆ ಉಲ್ಲೇಖಿಸಿದ ಕಾರಣಗಳನ್ನು ನೀಡಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು. ಹೀಗಾಗಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನಿಸಿ, ಪರೀಕ್ಷೆಯನ್ನು ಮುಂದೂಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಓದಿ: ರಾಷ್ಟ್ರ ಧ್ವಜ ಹಿಡಿದು ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಸದನದ ಬಾವಿಗಿಳಿದು ಕೈ ಶಾಸಕರ ಪ್ರತಿಭಟನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.