ETV Bharat / state

ವಿಧಾನಸಭೆ: ಹೈಕೋರ್ಟ್‌ ಆದೇಶ ಧಿಕ್ಕರಿಸಿ ಪ್ರತಿಭಟಿಸುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

'ಹಿಜಾಬ್ ಬಗ್ಗೆ ಹೈಕೋರ್ಟ್‌ ತೀರ್ಪು ಬಂದಿದೆ. ಈ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಹೋಗಲು ಅವಕಾಶ ಇದೆ, ಅವರು ಹೋಗಬಹುದು. ಆದರೆ ಈಗ ಬಂದ್ ಮಾಡೋದು ಕೋರ್ಟ್ ತೀರ್ಪಿನ ಮೇಲೆ ಪ್ರಭಾವ ಬೀರಿದಂತಾಗುತ್ತದೆ. ಇಂತಹವರ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು'- ಶಾಸಕ ರಘುಪತಿ ಭಟ್‌

author img

By

Published : Mar 17, 2022, 2:44 PM IST

Hijab controversy discussion in assembly. Karnataka assembly session 2022, Karnataka budget session, ವಿಧಾನಸಭೆಯಲ್ಲಿ ಹಿಜಾಬ್ ವಿವಾದ ಪ್ರಸ್ತಾಪ, ಕರ್ನಾಟಕ ವಿಧಾನಸಭೆ ಅಧಿವೇಶನ 2022, ಕರ್ನಾಟಕ ಬಜೆಟ್​ ಅಧಿವೇಶನ,
ವಿಧಾನಸಭೆಯಲ್ಲಿ ಹಿಜಾಬ್ ವಿವಾದ ಪ್ರಸ್ತಾಪ

ಬೆಂಗಳೂರು: ಹಿಜಾಬ್ ಸಂಬಂಧ ಹೈಕೋರ್ಟ್ ಆದೇಶ ಬಂದ ನಂತರವೂ ಅದನ್ನು ಧಿಕ್ಕರಿಸಿ ಪ್ರತಿಭಟನೆ ಮಾಡುತ್ತಿರುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಇದರ ಜೊತೆಗೆ, ಕಳೆದ ಬಾರಿ ಪರೀಕ್ಷೆ ತಪ್ಪಿಸಿಕೊಂಡಿದ್ದು, ಈಗ ಹಿಜಾಬ್ ತೆಗೆದಿಟ್ಟು ಹೋಗಲು ಮುಂದಾಗುವ ವಿದ್ಯಾರ್ಥಿನಿಯರಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕೊಡಬಹುದು ಎಂದು ಬಿಜೆಪಿ ಶಾಸಕ ರಘುಪತಿ ಭಟ್ ವಿಧಾನಸಭೆಯಲ್ಲಿ ಸರ್ಕಾರಕ್ಕೆ ಮನವಿ ಮಾಡಿದರು.

ಹಿಜಾಬ್ ವಿವಾದದ ಕುರಿತು ಇಂದು ಸದನದಲ್ಲಿ ಪ್ರಸ್ತಾಪಿಸಿದ ಅವರು, ಹಿಜಾಬ್ ಬಗ್ಗೆ ತೀರ್ಪು ಬಂದಿದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಹೋಗಲು ಅವಕಾಶ ಇದೆ, ಅವರು ಹೋಗಬಹುದು. ಆದರೆ ಈಗ ಬಂದ್ ಮಾಡೋದು ಕೋರ್ಟ್ ತೀರ್ಪಿನ ಮೇಲೆ ಪ್ರಭಾವ ಬೀರಿದಂತಾಗುತ್ತದೆ. ಇಂತಹವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಬೆಂಬಲ ವ್ಯಕ್ತಪಡಿಸಿದ ಮಾಜಿ ಸಚಿವ ಜಗದೀಶ್ ಶೆಟ್ಟರ್, ಕೋರ್ಟ್ ತೀರ್ಪಿನ ವಿರುದ್ದ ಪ್ರತಿಭಟನೆ ಬಂದ್ ಮಾಡುವುದು ಸರಿಯಲ್ಲ. ಹೈಕೋರ್ಟ್ ನಿರ್ಧಾರವನ್ನು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸಲು ಅವಕಾಶ ಇದೆ. ರಘುಪತಿ ಬಟ್ ಅಭಿಪ್ರಾಯಕ್ಕೆ ಸಂಪೂರ್ಣ ಬೆಂಬಲ ಇದೆ. ಆದರೆ ತೀರ್ಪನ್ನು ಬಹಿರಂಗವಾಗಿ ವಿರೋಧಿಸುವುದು, ಬಂದ್ ಕರೆ ಕೊಡುತ್ತಾರೆ ಅಂದರೆ ನ್ಯಾಯಾಲಯದ ಆದೇಶಕ್ಕೆ ಕಿಮ್ಮತ್ತು ಇಲ್ಲವೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ನಟ ದಿಲೀಪ್​​​​ ಮೇಲಿನ ಕೊಲೆ ಸಂಚು ಪ್ರಕರಣದ ತನಿಖೆಗೆ ತಡೆ ನೀಡಲು ಕೇರಳ ಹೈಕೋರ್ಟ್​ ನಕಾರ

ಸರ್ಕಾರ ನಿರ್ಧಾರದ ವಿರುದ್ಧ ಹೋರಾಟ ಬೇರೆ. ಆದರೆ ನ್ಯಾಯಾಲಯದ ತೀರ್ಪಿಗೂ ಹೋರಾಟ ಮಾಡುತ್ತಾರೆ ಎಂದರೆ ಇದಕ್ಕೆ ಅಂತ್ಯ ಇಲ್ಲ. ಅರಾಜಕತೆ ಸೃಷ್ಟಿ ಆಗುತ್ತದೆ. ಇದಕ್ಕೆ ಯಾರೂ ಬೆಂಬಲ ಸೂಚಿಸಬಾರದು. ಸರ್ಕಾರ ಬಿಗಿ ಕ್ರಮ ಕೈಗೊಳ್ಳಬೇಕು. ಹೈಕೋರ್ಟ್ ತೀರ್ಪು ಪಾಲನೆ ಮಾಡಬೇಕು. ಪ್ರತಿಭಟನೆ, ಬಂದ್ ಸರಿಯಲ್ಲ. ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ಶಾಂತಿಯುತ ಪ್ರತಿಭಟನೆ ಸಾಂವಿಧಾನಿಕ ಹಕ್ಕು- ಸಿದ್ಧರಾಮಯ್ಯ: ಈ ವೇಳೆ ಪ್ರತಿಭಟನಾಕಾರರ ಸಮರ್ಥನೆಗೆ ಮುಂದಾದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ ಇದ್ದರೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಅದರ ಜೊತೆಗೆ ಶಾಂತಿಯುತವಾಗಿ ಬಂದ್, ಪ್ರತಿಭಟನೆ ಮಾಡುವುದು ಅವರ ಸಂವಿಧಾನಾತ್ಮಕ ಹಕ್ಕು. ಅದನ್ನು ಸರ್ಕಾರ ಹೇಗೆ ತಡೆಯಲು ಸಾಧ್ಯ. ಬಂದ್, ಪ್ರತಿಭಟನೆ ಮಾಡಲು ಬಿಡಿ ಎಂದು ಹೇಳಿದರು.

ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ಮಾತನಾಡಿ, ನ್ಯಾಯಾಲಯಕ್ಕೆ ಅಗೌರವ ತೋರಿಸಬೇಕು ಎಂಬ ಕಾರಣಕ್ಕೆ ಬಂದ್​ಗೆ ಕರೆ ಕೊಟ್ಟಿಲ್ಲ. ಅಸಮಾಧಾನದ ಕಾರಣಕ್ಕೆ ಧಾರ್ಮಿಕ ಮುಖಂಡರು ಬಂದ್​ಗೆ ಕರೆ ಕೊಟ್ಟಿದ್ದಾರೆ ಎಂದು ಸಮರ್ಥನೆ ಮಾಡಿಕೊಂಡರು.

ಶಾಸಕ ಸಿ.ಟಿ.ರವಿ ಮಧ್ಯಪ್ರವೇಶಿಸಿ ಮಾತನಾಡಿ, ಇದರಲ್ಲಿ ಓಟ್ ಬ್ಯಾಂಕ್ ರಾಜಕಾರಣ ಮಾಡುವುದು ಮಹಾ ಪಾಪದ ಕೆಲಸ‌. ಶಾಲೆಗಳಲ್ಲಿ ಸಮವಸ್ತ್ರ ಏಕಿರಬೇಕು‌. ಕೋರ್ಟ್​ನಲ್ಲಿ ಹತ್ತು ದಿನ ವಿವರವಾದ ವಿಚಾರಣೆ ನಡೆದು ಬಳಿಕ ಕೋರ್ಟ್ ತೀರ್ಪು ಕೊಟ್ಟಿದೆ‌. ಅದನ್ನು ಧಿಕ್ಕರಿಸಿ ಪ್ರತಿಭಟನೆ, ಬಂದ್ ಮಾಡೋದು ಎಷ್ಟು ಸರಿ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ನಿಮ್ ಕೈಯಾಗಿನ ಗುಲಾಮನಾಗಿದ್ದೀನಾ; ಬಿಜೆಪಿ ಸದಸ್ಯರ ವಿರುದ್ಧ ಸಭಾಪತಿ ಗರಂ..!

ಈ ವೇಳೆ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಕೋರ್ಟ್ ತೀರ್ಪು ಕೊಟ್ಟ ಮೇಲೆ ಅದನ್ನು ಒಪ್ಪಿಕೊಂಡು ಜಾರಿ ಮಾಡಲೇಬೇಕು. ಈಗ ಸುಪ್ರೀಂಕೋರ್ಟ್​ನಲ್ಲಿ ತೀರ್ಮಾನ ಪ್ರಕಟಿಸುವವರೆಗೆ ಸರ್ಕಾರ ಹೈಕೋರ್ಟ್ ಆದೇಶವನ್ನು ಜಾರಿ ಮಾಡಲೇಬೇಕು‌ ಎಂದು ಹೇಳಿದರು.

ಕೋರ್ಟ್ ಆದೇಶದ ನಂತರವೂ ಕೆಲವು ವಿದ್ಯಾರ್ಥಿನಿಯರು ಪರೀಕ್ಷೆ ತಪ್ಪಿಸಿಕೊಂಡಿದ್ದರೆ, ಈಗ ಅವರಿಗೆ ಎರಡನೇ ಅವಕಾಶ ಕೊಡುವ ಬಗ್ಗೆ ಸರ್ಕಾರ ವಿಮರ್ಶೆ ಮಾಡಬಹುದು. ಆದರೆ ನಾವು ಇದನ್ನೇ ಬೆಳೆಸಿಕೊಂಡು‌ಹೋದರೆ ಮುಂದೆ ಬೇರೆ ರೀತಿಯ ಪರಿಣಾಮಗಳಾಗುತ್ತವೆ. ಯಾರು ಯಾವಾಗ ಬೇಕಾದಗಲೆಲ್ಲಾ ಪರೀಕ್ಷೆ ಬರೆಯಲು ಅವಕಾಶ ಕೇಳಿದ್ರೆ ಅದಕ್ಕೆ ಅವಕಾಶ ಕೊಡುತ್ತಾ ಹೋದರೆ ಪರೀಕ್ಷಾ ವ್ಯವಸ್ಥೆ ಉಳಿಯುತ್ತಾ?. ಪರೀಕ್ಷೆ ಅಂದ್ರೆ ಎಲ್ಲರಿಗೂ ಒಮ್ಮೆ ಮಾತ್ರ ಅವಕಾಶ ಕೊಡಲಾಗುತ್ತದೆ ಎಂದರು.

ಇದಕ್ಕೂ ಮುನ್ನ ಶಾಸಕ ಕೃಷ್ಣಬೈರೇಗೌಡ, ಯು.ಟಿ.ಖಾದರ್ ಸೇರಿದಂತೆ ಕೆಲವು ಸದಸ್ಯರು ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.