ಶಿವಮೊಗ್ಗ: ಹಿಜಾಬ್ಗೆ ಅವಕಾಶ ನೀಡುವಂತೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳನ್ನು ಶಿಕಾರಿಪುರ ತಹಶೀಲ್ದಾರ್ ಕವಿರಾಜ್ ಅವರು ಮನವೊಲಿಸುವ ಯತ್ನ ಮಾಡಿದರು. ಆದರೂ, ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರೆಸಿದ್ದರಿಂದ ಸ್ಥಳದಲ್ಲಿ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ನಿನ್ನೆ ಕೂಡ ಶಿರಾಳಕೊಪ್ಪದ ಆರ್ ಎಂ ಎಸ್ ಶಾಲೆ ಮತ್ತು ಅಬ್ದುಲ್ ಕಲಾಂ ಆಜಾದ್ ಶಾಲೆಯಲ್ಲಿ ಪ್ರತಿಭಟನೆ ನಡೆದಿತ್ತು.
ಓದಿ: ತರಗತಿ ಬೇಡ, ಕ್ಯಾಂಪಸ್ನೊಳಗೆ ಬಿಡುವಂತೆ ಚಿಕ್ಕಮಗಳೂರಿನಲ್ಲಿ ವಿದ್ಯಾರ್ಥಿಗಳ ಪಟ್ಟು