ಬೆಂಗಳೂರು: ಹಿಟ್ ಆ್ಯಂಡ್ ರನ್ ಕೇಸ್ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ಅಪರಾಧಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ರಘುನಾಥ್ ಪಾಸ್ವಾನ್ ತಲೆಮರೆಸಿಕೊಂಡಿದ್ದ ಅಪರಾಧಿ.
ಕ್ಯಾಬ್ ಚಾಲಕನಾಗಿದ್ದ ಈತ 2009 ರಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಐಆರ್ ಲೇಔಟ್ ಬಳಿ ಪಾದಚಾರಿಯೋರ್ವರಿಗೆ ಗುದ್ದಿ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಕೂಡ ಸಲ್ಲಿಸಿಯಾಗಿತ್ತು. ಆರೋಪ ಸಾಬೀತು ಹಿನ್ನೆಲೆ ಆರು ತಿಂಗಳ ಶಿಕ್ಷೆ ಹಾಗೂ 5 ಸಾವಿರ ರೂಪಾಯಿ ದಂಡ ವಿಧಿಸಿತ್ತು.
ಇದರಿಂದ ಕೆಳಹಂತದ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ರಘುನಾಥ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿ ವಾದ-ಪ್ರತಿವಾದ ಆಲಿಸಿ 5ನೇ ಸಂಚಾರ ನ್ಯಾಯಾಲಯ ಆರೋಪಿ ವಿರುದ್ಧ ತೀರ್ಪು ಎತ್ತಿ ಹಿಡಿದಿತ್ತು. ಹಾಗಾಗಿ ಒಂದು ತಿಂಗಳೊಳಗಾಗಿ ನ್ಯಾಯಾಲಯದ ಮುಂದೆ ಹಾಜರಾಗಬೇಕೆಂದು ಆದೇಶಿಸಿತ್ತು. ಈ ಸಂಬಂಧ ಅಪರಾಧಿ ತಲೆಮರೆಸಿಕೊಂಡಿದ್ದ. ಆದರೆ ಇವರನ್ನು ಪುನಃ ಹಲಸೂರು ಗೇಟ್ ಸಂಚಾರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಇದನ್ನೂ ಓದಿ: ದೇವನಹಳ್ಳಿ: ಡಾಬಾದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಏಳು ಜನ ಪೊಲೀಸ್ ವಶಕ್ಕೆ