ಆನೇಕಲ್: ಸೇವಾ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಹಿಟ್ ಆ್ಯಂಡ್ ರನ್ ಪ್ರಕರಣ ನಡೆದಿದ್ದು, ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದ ಹೆದ್ದಾರಿ ಪಕ್ಕದ ಸೇವಾ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಕಡೆಯಿಂದ ಹೊಸೂರು ಹೋಗುವ ಮಾರ್ಗದಲ್ಲಿ ಬೆಳಗಿನ ಜಾವ ಸುಮಾರು 5 ಗಂಟೆಗೆ ಘಟನೆ ಸಂಭವಿಸಿದ್ದು, ಅಪರಿಚಿತ ವ್ಯಕ್ತಿಯ ಪ್ರಾಣಪಕ್ಷಿ ಹಾರಿಹೋಗಿದೆ.
ಅಪಘಾತದಲ್ಲಿ ವ್ಯಕ್ತಿಯ ತಲೆ ಹಾಗು ಕೈ ಜಜ್ಜಿ ಹೋಗಿದ್ದು, ರಸ್ತೆಯಲ್ಲಿಯೇ ವ್ಯಕ್ತಿ ಅನಾಥ ಶವವಾಗಿ ಬಿದ್ದಿದ್ದಾನೆ. ಯಾವ ವಾಹನ?, ವ್ಯಕ್ತಿ ಯಾರು? ಎಂಬ ಬಗ್ಗೆ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ಕೈಗೊಂಡಿದ್ದಾರೆ.
ಈ ಘಟನೆ ಕುರಿತು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.