ಬೆಂಗಳೂರು: ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಆಗಿದ್ದ ತಾಲೀಬ್ ಹುಸೇನ್ನನ್ನು ಜಮ್ಮು ಕಾಶ್ಮೀರ ಪೊಲೀಸರು ಹಾಗೂ ಕೇಂದ್ರ ಭದ್ರತಾ ಪಡೆ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಸ್ಥಳೀಯ ಪೊಲೀಸರ ಸಹಾಯ ಪಡೆದು ಈ ಉಗ್ರನನ್ನು ಹೆಡೆಮುರಿ ಕಟ್ಟಲಾಗಿದೆ. ಈತ ಪೊಲೀಸರ ಹಿಟ್ ಲಿಸ್ಟ್ ನಲ್ಲಿದ್ದ ಎಂದು ತಿಳಿದುಬಂದಿದೆ.
ಕಳೆದ ಎಂಟು ತಿಂಗಳಿನಿಂದ ನಗರದ ಶ್ರೀರಾಮಪುರದಲ್ಲಿ ನೆಲೆಸಿದ್ದ ಉಗ್ರ ತಾಲೀಬ್ ಹುಸೇನ್ ಬಂಧನವನ್ನು ಜಮ್ಮು ಕಾಶ್ಮೀರ ಡಿಜಿ ಅಧಿಕೃತಗೊಳಿಸಿದ್ದಾರೆ. ಅಲ್ಲದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಗ್ರನನ್ನು ಬಂಧಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ: ಕಾರು, ದ್ವಿಚಕ್ರ ವಾಹನ ಜಖಂ
ಬಂಧಿತ ಉಗ್ರನ ವಿಚಾರವಾಗಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಜಮ್ಮು ಕಾಶ್ಮೀರ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ. ಆದರೆ ನಮಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಇದರ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.