ETV Bharat / state

ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ: ಎಚ್.ಕೆ.ಪಾಟೀಲ್ ಸಲಹೆ - ಉಪಚುನಾವಣೆ ಫಲಿತಾಂಶದ ಬಗ್ಗೆ ಎಚ್​​ ಕೆ ಪಾಟೀಲ್​​ ಪ್ರತಿಕ್ರಿಯೆ ಸುದ್ದಿ

ಉಪ ಸಮರದಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಮಾಜಿ ಸಚಿವ ಎಚ್.ಕೆ ಪಾಟೀಲ್ ತಿಳಿಸಿದರು.

patil
ಎಚ್.ಕೆ.ಪಾಟೀಲ್ ಹೇಳಿಕೆ
author img

By

Published : Dec 10, 2019, 2:49 PM IST

ಬೆಂಗಳೂರು: ಉಪಸಮರದಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಮಾಜಿ ಸಚಿವ ಎಚ್.ಕೆ ಪಾಟೀಲ್ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಪಕ್ಷಾಂತರ ವಿಷಯ ಮೂಲ ವಸ್ತುವಾಗಿತ್ತು. ಜನ ವಿಶೇಷ ತೀರ್ಪು ಕೊಡ್ತಾರೆ ಎಂಬ ನಿರೀಕ್ಷೆ ಇತ್ತು. ನಿರೀಕ್ಷೆ ಹುಸಿಯಾಗಿದೆ, ಜನರ ಮನಸ್ಸು ವಿಚಿತ್ರವಾಗಿದೆ ಎಂದು ಅಭಿಪ್ರಾಯ ಪಟ್ಟರು.

ಜನರ ಮನಸ್ಸು ಘಾಸಿಗೊಳಿಸುವ ವಾಮಮಾರ್ಗ ನಡೆಯಿತು. ಚುನಾವಣಾ ಆಯೋಗ ಮೂಕ ಪ್ರೇಕ್ಷಕವಾಯ್ತು. ಒಟ್ಟು ವ್ಯವಸ್ಥೆ ಬಗ್ಗೆ ನಿರಾಸೆಯ ವಾತಾವರಣ ಸೃಷ್ಟಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಈ ರೀತಿ ರಾಜೀನಾಮೆ ನೀಡಿದ್ದು ಸ್ವಾಭಾವಿಕ. ಮುಂದೆ ಹೈಕಮಾಂಡ್ ಏನು ಮಾಡುತ್ತೋ ನೋಡೋಣ. ಸಿದ್ದರಾಮಯ್ಯ ಅವರನ್ನು ಭೇಟಿಯಾದಾಗ ಏನು ಹೇಳಬೇಕೋ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು.

ಎಚ್.ಕೆ.ಪಾಟೀಲ್ ಹೇಳಿಕೆ

ಚುನಾವಣೆ ನಡೆಸಿದ್ದೆ ಅನೈತಿಕ:

ಚುನಾವಣೆ ನಡೆಸಿದ್ದೇ ಅನೈತಿಕವಾಗಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಹೀಗಾಗಿ ನೈತಿಕ ಹೊಣೆ ಹೊರುವ ಪ್ರಶ್ನೆಯೇ ಬರುವುದಿಲ್ಲ. ಜನ ಒಂದು ತೀರ್ಮಾನ ಮಾಡಿದ್ದಾರೆ. ಮುಂದೇನು ಎಂದು ಪಕ್ಷದ ಆಂತರಿಕ ವಲಯದಲ್ಲಿ ಕುಳಿತು ಚರ್ಚೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಸಿದ್ದರಾಮಯ್ಯ, ಖರ್ಗೆ ಮತ್ತು ನಾವೆಲ್ಲಾ ಒಟ್ಟಿಗೆ ಕೆಲಸ ಮಾಡಿದ್ದೇವೆ. ಸಿದ್ದರಾಮಯ್ಯ ಅವರ ಜೊತೆಗೆ ನಾವೆಲ್ಲಾ ಇದ್ದೇವೆ. ಮುಂದೇನು ಎಂಬುದು ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ನಾವೆಲ್ಲ ಒಟ್ಟಾಗಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

Intro:Body:KN_BNG_01_HKPATILKHANDRE_BYTE_SCRIPT_720195

ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ: ಎಚ್.ಕೆ.ಪಾಟೀಲ್

ಬೆಂಗಳೂರು: ಉಪಸಮರದಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಪಕ್ಷಾಂತರ ವಿಷಯ ಮೂಲ ವಸ್ತುವಾಗಿತ್ತು. ಜನರ ಮನದಲ್ಲಿ ಏನಿದೆ ಅನ್ನೋದನ್ನು ಕಾತರರಾಗಿ ನೋಡುತ್ತಿದ್ದೇವೆ. ವಿಶೇಷ ತೀರ್ಪನ್ನ ಕೊಡ್ತಾರೆ ಎಂಬ ನಿರೀಕ್ಷೆ ಇತ್ತು. ನಿರೀಕ್ಷೆ ಹುಸಿಯಾಗಿದೆ, ಜನರ ಮನಸ್ಸು ವಿಚಿತ್ರವಾಗಿದೆ ಎಂದು ಅಭಿಪ್ರಾಯ ಪಟ್ಟರು.

ಜನರ ಮನಸ್ಸನ್ನು ಘಾಸಿಗೊಳಿಸುವ ವಾಮಮಾರ್ಗ ನಡೆಯಿತು. ಚುನಾವಣಾ ಆಯೋಗ ಮೂಕ ಪ್ರೇಕ್ಷಕವಾಯ್ತು. ಒಟ್ಟು ವ್ಯವಸ್ಥೆ ಬಗ್ಗೆ ನಿರಾಸೆಯ ವಾತಾವರಣ ಸೃಷ್ಟಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಈ ರೀತಿ ರಾಜೀನಾಮೆ ನೀಡಿದ್ದು ಸ್ವಾಭಾವಿಕ. ಮುಂದೆ ಹೈಕಮಾಂಡ್ ಏನು ಮಾಡುತ್ತೋ ನೋಡೋಣ. ಸಿದ್ದರಾಮಯ್ಯ ಅವರನ್ನು ಭೇಟಿಯಾದಾಗ ಏನು ಹೇಳಬೇಕೋ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು.

ಚುನಾವಣೆ ನಡೆಸಿದ್ದೇ ಅನೈತಿಕ:

ಅವರು ಚುನಾವಣೆ ನಡೆಸಿದ್ದೇ ಅನೈತಿಕವಾಗಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಹೀಗಾಗಿ ನೈತಿಕ ಹೊಣೆ ಹೊರುವ ಪ್ರಶ್ನೆಯೇ ಬರುವುದಿಲ್ಲ. ಜನ ಒಂದು ತೀರ್ಮಾನ ಮಾಡಿದ್ದಾರೆ. ಮುಂದೇನು ಎಂದು ಪಕ್ಷದ ಆಂತರಿಕ ವಲಯದಲ್ಲಿ ಕುಳಿತು ಚರ್ಚೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ, ಖರ್ಗೆ ಮತ್ತು ನಾವೆಲ್ಲಾ ಒಟ್ಟಿಗೇ ಕೆಲಸ ಮಾಡಿದ್ದೇವೆ. ಸಿದ್ದರಾಮಯ್ಯ ಅವರ ಜೊತೆಗೆ ನಾವೆಲ್ಲಾ ಇದ್ದೇವೆ. ಮುಂದೇನು ಅಂತಾ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ನಾವೆಲ್ಲಾ ಒಟ್ಟಾಗಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.