ಬೆಂಗಳೂರು : ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಇಂದು ಸಂಜೆ ಹಮ್ಮಿಕೊಂಡಿರುವ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಲಿರುವ ಹಿನ್ನೆಲೆ ವಿಧಾನಸೌಧದ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ರಾಷ್ಟ್ರಪತಿಯವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆ ಸುರಕ್ಷತೆ ಹಾಗೂ ಭದ್ರತೆ ದೃಷ್ಟಿಯಿಂದ ವಿಧಾನಸೌಧದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಆರ್ಥಿಕ ಇಲಾಖೆ, ಒಳಾಡಳಿತ ಇಲಾಖೆ, ಕಾನೂನು ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆಯ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಓದಿ: ರಾಷ್ಟ್ರಪತಿಗೆ ದೇವದಾಸಿಯರು ಹೊಲಿದ ಕೌದಿ, ಇಳಕಲ್ ಸೀರೆ ಕೊಟ್ಟ ಸುಧಾಮೂರ್ತಿ..!