ಬೆಂಗಳೂರು: ನಿವೃತ್ತ ಇನ್ಸ್ಪೆಕ್ಟರ್ ಒಬ್ಬರಿಗೆ ವೈದ್ಯಕೀಯ ರಶೀದಿ ಕೊಡಿಸುವುದಾಗಿ ಸುಳ್ಳು ಹೇಳಿ 20 ಸಾವಿರ ರೂ. ಲಂಚ ಪಡೆಯುತ್ತಿದ್ದ ಗೃಹ ರಕ್ಷಕನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಸತೀಶ್ ಬಂಧಿತ ಆರೋಪಿ.
ನಿವೃತ್ತ ಇನ್ಸ್ಪೆಕ್ಟರ್ ಪಿ.ಎನ್ ಗಣೇಶ್ ಅವರು ತಮ್ಮ ವೈದ್ಯಕೀಯ ವೆಚ್ಚದ ಮರುಪಾವತಿಗಾಗಿ ಗೃಹ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ವಿಷಯ ತಿಳಿದ ಗೃಹ ರಕ್ಷಕ ಸತೀಶ್, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡಿ ಬಿಲ್ ಮೊತ್ತವನ್ನು ಕೊಡಿಸುವುದಾಗಿ ನಂಬಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದಾನೆ. ಇದರಿಂದ ಬೇಸತ್ತ ಗಣೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ದೂರಿನ ಅನ್ವಯ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಪೊಲೀಸರು ಗೃಹ ಇಲಾಖೆ ಕಚೇರಿಯಲ್ಲಿ ದೂರುದಾರ ಗಣೇಶ್ ಅವರಿಂದ ಲಂಚ ಪಡೆಯುತ್ತಿದ್ದಾಗ ಸತೀಶ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇದನ್ನೂ ಓದಿ: ಸರ್ಕಾರಿ ಕಚೇರಿಯಲ್ಲೇ ಲಂಚ ಸ್ವೀಕಾರ ಆರೋಪ: ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ