ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೆ ಎಡೆ ಮಾಡಿಕೊಟ್ಟಿದ್ದ ಹಿಜಾಬ್ - ಕೇಸರಿ ವಿವಾದ ಸಂಬಂಧ ಇಂದು ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಕೋರಮಂಗಲದಲ್ಲಿರುವ ಕೆಎಸ್ಆರ್ಪಿ ಕ್ರೀಡಾಕೂಟ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಹಿಜಾಬ್ ಸಂಬಂಧ ಹೈಕೋರ್ಟ್ ನಲ್ಲಿ ನಡೆಯುತ್ತಿದ್ದ ವಿಚಾರಣೆ ಮುಂದಕ್ಕೆ ಹೋಗಿದೆ. ಯಾವುದೇ ಧಾರ್ಮಿಕ ಗುರುತುಗಳನ್ನು ಬಳಸಬಾರದು ಎಂದು ಹೇಳಿದೆ.
ಅಂದರೆ, ಸರ್ಕಾರದ ಆದೇಶವನ್ನು ಮುಂದುವರೆಸಿದೆ. ನಾಳೆಯಿಂದ ರಾಜ್ಯದಲ್ಲಿ ಯಥಾಸ್ಥಿತಿ ಮುಂದುವರೆಯಬಹುದು. ಪೊಲೀಸರಿಗೆ ಕೆಲಸ ಕೊಡದಂತೆ ಶಾಂತಿಯುತವಾಗಿ ಇರಬೇಕು. ನಾಳೆಯಿಂದ ಶಾಲಾ - ಕಾಲೇಜುಗಳಲ್ಲಿ ಯಥಾಸ್ಥಿತಿ ಇರಲಿದೆ. ಹಂತ ಹಂತವಾಗಿ ಶಾಲೆಗಳನ್ನು ತೆರೆಯಲಾಗುತ್ತದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಇದೆ. ಅದರ ಗಮನ ಕೊಡಬೇಕಿದೆ. ಸಂಜೆ ಸಿಎಂ ಜೊತೆ ಸಭೆಯಿದ್ದು, ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ಧರಿಸುತ್ತೇವೆ ಎಂದರು.
ಓದಿ: ಶಾಲಾ- ಕಾಲೇಜು ಪುನಾರಂಭದ ಬಗ್ಗೆ ಸಿಎಂ ನೇತೃತ್ವದಲ್ಲಿ ಸಭೆ: ಸಚಿವ ನಾಗೇಶ್