ಬೆಂಗಳೂರು: ಪೊಲೀಸ್ ಇಲಾಖೆ ಮಲಗಬಾರದು. ಜನರ ರಕ್ಷಣೆಯನ್ನು ಅವರೇ ಮಾಡಬೇಕು. ಗೃಹ ಸಚಿವರಾಗಿ ಇಲಾಖೆಯ ನ್ಯೂನ್ಯತೆಗಳನ್ನು ಪರಿಹರಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ವಿಕಾಸಸೌಧದಲ್ಲಿ ಗೃಹ ಸಚಿವರಾಗಿ ಆರಗ ಜ್ಞಾನೇಂದ್ರ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಮೊದಲ ಸಭೆ ಇಂದು ನಡೆಸಲಾಗಿದೆ. ಇಲಾಖೆಯ ಬಗ್ಗೆ ಅರ್ಥ ಮಾಡಿಕೊಳ್ಳುವ ಬಗೆಗಿನ ಸಭೆ ಇದಾಗಿದೆ. ಶಾಂತಿ ಸುವ್ಯವಸ್ಥೆ ಮತ್ತಷ್ಟು ಹೆಚ್ಚಾಗಬೇಕು. ಆಧುನಿಕ ತಂತ್ರಜ್ಞಾನ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಜ್ಯದ ಪೊಲೀಸರು ಚೆನ್ನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಸಚಿವ ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆಗೆ ಸುಮೊಟೋ ಕೇಸ್ ದಾಖಲಿಸುತ್ತೀರಾ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಈಶ್ವರಪ್ಪ ಯಾವ ಹಿನ್ನೆಲೆಯಲ್ಲಿ ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ. ಅವರ ಹೇಳಿಕೆ ಬಗ್ಗೆ ಗಮನಿಸಿ ಪ್ರತಿಕ್ರಿಯಿಸುವುದಾಗಿ ತಿಳಿಸಿದರು.
ಓದಿ: ಲಿಬೇರಿಯಾ ದೇಶದಲ್ಲಿ ಕನ್ನಡಿಗನಿಗೆ ಸಂಕಷ್ಟ: ತಾಯ್ನಾಡಿಗೆ ಮರಳದಂತೆ ಬೆದರಿಕೆ