ಬೆಂಗಳೂರು: ಬಿಜೆಪಿ ಜನಾಶೀರ್ವಾದ ಯಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಕರ್ತವ್ಯದಲ್ಲಿ ಲೋಪ ಎಸಗಿದ ಪೊಲೀಸರ ಮೇಲೆ ಕೂಡ ಕ್ರಮ ಜರುಗಿಸಲಾಗಿದೆ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳಿ ಎಂದು ತಿಳಿಸಿರುವುದಾಗಿ ಹೇಳಿದರು.
ಗಾಳಿಯಲ್ಲಿ ಗುಂಡು ಹಾರಿಸುವುದು ಆ ಭಾಗದ ವಾಡಿಕೆ. ಅದನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಮಲೆನಾಡಿನ ಭಾಗದಲ್ಲಿ ಕೂಡ ಈ ಪದ್ದತಿ ಇದೆ. ಅದರೆ ಈ ಸಂದರ್ಭದಲ್ಲಿ ಹೀಗೆ ಮಾಡಿರುವುದು ಸರಿಯಲ್ಲ ಎಂದರು.
ನಂತರ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಜನ್ಮ ದಿನಾಚರಣೆ ಅಂಗವಾಗಿ ಅರಸು ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಅವರ ಗುಣಗಾನ ಮಾಡಿದರು.