ETV Bharat / state

ಹೆಚ್​ಡಿಕೆ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಆರಗ ಜ್ಞಾನೇಂದ್ರ ತಿರುಗೇಟು - ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯ

ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು ಎಂದು ಸ್ಯಾಂಟ್ರೋ ರವಿ ಬಂಧನ ಹಿನ್ನೆಲೆ ಹೇಳಿಕೆ ನೀಡಿದ್ದ ಕುಮಾರಸ್ವಾಮಿ ಅವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.

home minister araga jnanendra
ಆರಗ ಜ್ಞಾನೇಂದ್ರ
author img

By

Published : Jan 14, 2023, 8:12 AM IST

ಬೆಂಗಳೂರು: ಗುಜರಾತ್​ವರೆಗೂ ಚೇಸ್ ಮಾಡಿಕೊಂಡು ಹೋಗಿ ಸ್ಯಾಂಟ್ರೋ ರವಿಯನ್ನು ಬಂಧಿಸಿರುವ ನಮ್ಮ ಪೊಲೀಸರ ಕಾರ್ಯವನ್ನು ಶ್ಲಾಘಿಸುವ ಬದಲು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸ್ಯಾಂಟ್ರೋ ರವಿ ಬಂಧನ ಕುರಿತು ಕುಮಾರಸ್ವಾಮಿಯವರ ಪ್ರತಿಕ್ರಿಯೆ ನೋಡಿದೆ. ರಾಜ್ಯ ಪೊಲೀಸರು ಮಹಾರಾಷ್ಟ್ರದ ಪುಣೆಯಿಂದ ಸ್ಯಾಂಟ್ರೋ ರವಿಯ ಜಾಡು ಹಿಡಿದು ವಡೋದರವರೆಗೂ ಚೇಸ್ ಮಾಡಿಕೊಂಡು ಹೋಗಿ ಅಹಮದಾಬಾದ್, ಗುಜರಾತ್ ಪೊಲೀಸರ ಸಹಾಯ ಪಡೆದು ಬಂಧಿಸಿದ್ದಾರೆ. ರಾಜ್ಯ ಪೊಲೀಸರ ಕ್ಷಮತೆಯನ್ನು ಅಭಿನಂದಿಸಿ, ಹುರಿದುಂಬಿಸುವ ಬದಲು ಕುಮಾರಸ್ವಾಮಿಯವರು ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ನಡೆಸಿದ್ದಾರೆ. ಈ ಪ್ರವೃತ್ತಿ ಅವರಿಗೆ ಶೋಭೆ ತರುವುದಿಲ್ಲ ಎಂದು ಪತ್ರಿಕಾ ಹೇಳಿಕೆ ಮೂಲಕ ಗೃಹ ಸಚಿವರು ಟೀಕಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಸ್ಯಾಂಟ್ರೋ ರವಿ ಬಂಧನ ಖಚಿತಪಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಸ್ಯಾಂಟ್ರೋ ರವಿ ಬಂಧನ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಸ್ಯಾಂಟ್ರೋ ರವಿಯನ್ನು ಗುಜರಾತ್​ನಲ್ಲಿ ಯಾಕೆ ಬಂಧನ ಮಾಡಿದರು ಎಂದು ನನಗೆ ಗೊತ್ತಿಲ್ಲ, ಸ್ಯಾಂಟ್ರೋ ರವಿ ಬಂಧನದಿಂದ ಯಾರು ಯಾರು ಹಿಂದೆ ಇದ್ದಾರೆ ಎಂದು ಕಾದು ನೋಡಬೇಕು. ಯಾರೇ ತಪ್ಪು ಮಾಡಿದ್ದರೂ ಅವರನ್ನು ಬಿಡುವುದಿಲ್ಲ. ಕಾಂಗ್ರೆಸ್​ನವರು ಆರೋಪ ಮಾಡುವುದು ತಪ್ಪು. ಕಾನೂನಿನ ದೃಷ್ಟಿಯಲ್ಲಿ ಬಿಜೆಪಿ ಯಾವುದೇ ತಪ್ಪು ಮಾಡೋದಿಲ್ಲ. ಯಾರು ತಪ್ಪು ಮಾಡುತ್ತಾರೋ ಅವರನ್ನ ಬಂಧಿಸುವ ಕೆಲಸವನ್ನ ನಮ್ಮ ಪೊಲೀಸರು ಮಾಡಲಿದ್ದಾರೆ ಎಂದರು.

ಇದನ್ನೂ ಓದಿ: Santro Ravi arrest: ಗುಜರಾತ್​ನಲ್ಲಿ ಸ್ಯಾಂಟ್ರೋ ರವಿ ಬಂಧನ: ಎಡಿಜಿಪಿ ಅಲೋಕ್​ ಕುಮಾರ್​

ಆರಗ ತಂಡಕ್ಕೆ ಪ್ರಾತ್ಯಕ್ಷಿಕೆ: ರಾಜ್ಯದಲ್ಲಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಸಂಬಂಧ ಅಹಮದಾಬಾದ್​ನಲ್ಲಿರುವ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಸಂಕೀರ್ಣದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದ ನಿಯೋಗಕ್ಕೆ ಪ್ರಾತ್ಯಕ್ಷಿಕೆ ನೀಡಲಾಯಿತು. ವಿಶ್ವವಿದ್ಯಾಲಯದ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ಗುಜರಾತ್ ರಾಜ್ಯ ಪೊಲೀಸ್ ಮುಖ್ಯ ಕಚೇರಿಗೂ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇನ್ನು ವಿಧಿ ವಿಜ್ಞಾನ ಸಂಶೋಧನೆಗಳ ಅಧ್ಯಯನಕ್ಕೆ ಅವಕಾಶಗಳ ಬಾಗಿಲು ತೆರೆಯಲಿರುವ ನಿಯೋಜಿತ ವಿಶ್ವವಿದ್ಯಾಲಯದ ಅಕಾಡೆಮಿಕ್ ಚಟುವಟಿಕೆಗಳು ಇದೇ ವರ್ಷದಲ್ಲಿಯೇ ಕರ್ನಾಟಕದಲ್ಲಿ ಆರಂಭಗೊಳ್ಳಲಿವೆ. ರಾಜ್ಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಎಡಿಜಿಪಿ ಹಿತೇಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಗುಜರಾತ್​ನಲ್ಲಿ ಸ್ಯಾಂಟ್ರೋ ರವಿ ಬಂಧನ: ಹಲವು ಪ್ರಕರಣಗಳಲ್ಲಿ ಸಿಲುಕಿ ಸುದ್ದಿಯಾಗಿದ್ದ ಸ್ಯಾಂಟ್ರೋ ರವಿಯನ್ನು ಗುಜರಾತ್​ನಲ್ಲಿ ರಾಜ್ಯ ಪೊಲೀಸರು ಶುಕ್ರವಾರ ಬಂಧಿಸಿದ್ದರು. ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಅಲೋಕ್ ಕುಮಾರ್ ಖಚಿತಪಡಿಸಿದ್ದರು. ಪ್ರಕರಣ ದಾಖಲಾಗಿ 11 ದಿನಗಳ ನಂತರ ಸ್ಯಾಂಟ್ರೋ ರವಿಯನ್ನು ಬಂಧಿಸಿದ್ದೇವೆ. ಮೈಸೂರು ರಾಮನಗರ ಪೊಲೀಸರ ನಾಲ್ಕೈದು ಟೀಂಗಳು ಕಾರ್ಯಾಚರಣೆ ನಡೆಸಿ, ಬಂಧಿಸಿದ್ದಾರೆ ಎಂದು ಶುಕ್ರವಾರ ಗೃಹ ಸಚಿವರು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ರಾಜ್ಯಕ್ಕೆ ವಿಧಿ ವಿಜ್ಞಾನ ವಿವಿ ನೀಡುವಂತೆ ಅಮಿತ್ ಶಾಗೆ ಮನವಿ: ಗೃಹ ಸಚಿವ ಆರಗ ಜ್ಞಾನೇಂದ್ರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.