ETV Bharat / state

ಪರಪ್ಪನ‌ ಅಗ್ರಹಾರ ಜೈಲಿಗೆ ಗೃಹ ಸಚಿವ ದಿಢಿರ್​ ಭೇಟಿ: ಅತ್ಯಾಧುನಿಕ ಮೊಬೈಲ್ ಜಾಮರ್ ಅಳವಡಿಕೆಗೆ ನಿರ್ಧಾರ ಎಂದ ಜ್ಞಾನೇಂದ್ರ - ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಭೇಟಿಗೆ ಬರುವ ಕುಟುಂಬ ಸದಸ್ಯರ ಹಾಗೂ ಇತರರಿಂದ ಅಕ್ರಮವಾಗಿ ಹಣ ವಸೂಲಿ ಆಗುತ್ತಿದೆ ಎಂಬ ಆರೋಪದ ಬಗ್ಗೆಯೂ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು.

home-minister-araga-jnanendra-surprise-visit-to-parappana-agrahara-jail
ಪರಪ್ಪನ‌ ಅಗ್ರಹಾರ ಜೈಲಿಗೆ ಗೃಹ ಸಚಿವ ದಿಢಿರ್​ ಭೇಟಿ: ಅತ್ಯಾಧುನಿಕ ಮೊಬೈಲ್ ಜಾಮರ್ ಅಳವಡಿಕೆಗೆ ನಿರ್ಧಾರ ಎಂದ ಜ್ಞಾನೇಂದ್ರ
author img

By

Published : Jul 12, 2022, 4:41 PM IST

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಢೀರ್ ಭೇಟಿ ನೀಡಿ, ವ್ಯವಸ್ಥೆ ಬಗ್ಗೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೊತೆ ಸಮಾಲೋಚನೆ ನಡೆಸಿ, ಜೈಲಿನಲ್ಲಿ ಕೈದಿಗಳು ಎದುರಿಸುತ್ತಿರುವ ಸಮಸ್ಯೆಗಳು, ರಕ್ಷಣಾ ವ್ಯವಸ್ಥೆ, ವೈದ್ಯಕೀಯ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.

ಅಲ್ಲದೇ, ಕಾರಾಗೃಹಗಳಲ್ಲಿ ನಡೆಯುವ ಯಾವುದೇ ಅಕ್ರಮ ಚಟುವಟಿಕೆ ಸಹಿಸುವುದಿಲ್ಲ ಹಾಗೂ ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ, ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

home-minister-araga-jnanendra-surprise-visit-to-parappana-agrahara-jail
ಪರಪ್ಪನ‌ ಅಗ್ರಹಾರ ಜೈಲಿಗೆ ಗೃಹ ಸಚಿವ ದಿಢಿರ್​ ಭೇಟಿ: ಅತ್ಯಾಧುನಿಕ ಮೊಬೈಲ್ ಜಾಮರ್ ಅಳವಡಿಕೆಗೆ ನಿರ್ಧಾರ ಎಂದ ಜ್ಞಾನೇಂದ್ರ

ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿಗಳು ಜೈಲಿನಲ್ಲಿ ಮೊಬೈಲ್ ಫೋನ್ ಬಳಕೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಗಂಭೀರವಾದ ತನಿಖೆ ನಡೆಯುತ್ತಿದ್ದು, ಈವರೆಗೆ ಒಬ್ಬನನ್ನು ಬಂಧಿಸಲಾಗಿದೆ ಎಂದರು. ಅಲ್ಲದೇ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ಅಕ್ರಮ ಚಟುವಟಿಕೆಗಳ ಬಗ್ಗೆ‌ ಐಪಿಎಸ್ ಅಧಿಕಾರಿ ಮುರುಗನ್ ಸಮಿತಿ ನೀಡಿದ ಶಿಫಾರಸುಗಳನ್ನು ಅನುಷ್ಠಾನಗೊಳಿಸಿ ಹಲವಾರು ಅಧಿಕಾರಿಗಳು ಜೈಲಿನಿಂದ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಕೆಲವು ಅಧಿಕಾರಿಗಳ ಸೇವೆ ಅಮಾನತಿನಲ್ಲಿಡಲು ಸಹ ಶಿಫಾರಸು ಮಾಡಲಾಗಿದೆ ಎಂದರು.

ಕೇಂದ್ರ ಕಾರಾಗೃಹಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಮೊಬೈಲ್ ಜಾಮರ್​ಗಳನ್ನು ಅಳವಡಿಸಲು ನಿರ್ಧರಿಸಲಾಗಿದ್ದು, 5ಜಿ ಸಾಮರ್ಥ್ಯದವರೆಗಿನ ಮೊಬೈಲ್ ಕರೆಗಳನ್ನು ನಿಷ್ಕ್ರಿಯಗೊಳಿಸುವಂತೆ ಕ್ರಮ ಕೈಗೊಳ್ಳಲಾಗುವುದು. ಜೈಲಿನೊಳಗಡೆ ಅಕ್ರಮವಾಗಿ ಮಾದಕ ವಸ್ತುಗಳ ಪೂರೈಕೆ, ಕಾನೂನು ಬಾಹಿರವಾಗಿ ಕೈದಿಗಳಿಗೆ ವಿಶೇಷ ಸವಲತ್ತುಗಳನ್ನು ನೀಡುವುದು ಹಾಗೂ ಮೊಬೈಲ್ ಬಳಕೆಯಂತಹ ಅಕ್ರಮ ಚಟುವಟಿಕೆಗಳಿಗೆ ಅಂಕುಶ ಹಾಕಲು ಸೂಚಿಸಿದ್ದೇನೆ ಎಂದು ತಿಳಿಸಿದರು.

ಇದೇ ವೇಳೆ, ಇತ್ತೀಚೆಗೆ ಜೈಲಿನೊಳಗೆ ಫುಟ್​ಬಾಲ್​ನಲ್ಲಿ ಮಾದಕ ವಸ್ತುಗಳನ್ನು ತುಂಬಿಸಿ ಜೈಲಿನೊಳಕ್ಕೆ ಎಸೆದ ಘಟನೆ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಜೈಲಿಗೆ ಕರೆತರಲಾದ ವ್ಯಕ್ತಿಯೊಬ್ಬ ಕಾಲಿಗೆ ಬ್ಯಾಂಡೇಜ್ ಜೊತೆ ಕಟ್ಟಿಕೊಂಡಿದ್ದ ಮೊಬೈಲ್​ ವಶಪಡಿಸಿಕೊಳ್ಳಲಾಗಿದೆ ಹಾಗೂ ಈ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂದಿಯನ್ನೂ ಬಂಧಿಸಲಾಗಿದೆ ಎಂದೂ ಅಧಿಕಾರಿಗಳು ವಿವರಿಸಿದರು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಹಿಂದೂ ಯುವಕರ ಮೇಲೆ ಹಲ್ಲೆ: ಆಸ್ಪತ್ರೆಗೆ ದಾಖಲು

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.