ಬೆಂಗಳೂರು: ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನಗರದ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಭೇಟಿ ನೀಡಿದರು. ಗೃಹ ಸಚಿವರ ಆಗಮನದ ಹಿನ್ನೆಲೆ ಜೈಲಿನ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಜೈಲಿನ ಬಳಿಯ ಸುತ್ತಮುತ್ತ ಪೊಲೀಸ್ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿ ಗೃಹಸಚಿವರ ಆಗಮನಕ್ಕೆ ಹಸಿರು ನಿಶಾನೆ ನೀಡಿದ್ದರು.
ಸಚಿವ ಸ್ಥಾನ ಅಲಂಕರಿಸಿದ ನಂತರ ಇದೇ ಮೊದಲ ಬಾರಿಗೆ ಅವರು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದರು. ನಂತರ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಹಿಂದೆ ಇದ್ದ ಸ್ಥಿತಿ ಹಾಗೂ ಮುಂದೆ ಆಗಬೇಕಾದ ಕೆಲಸಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಅಲ್ಲದೇ ಕೋವಿಡ್ ಪರಿಸ್ಥಿತಿಯಲ್ಲಿ ನಿರ್ವಹಿಸಿದ ನಿಯಮಗಳು ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲಿದ್ದಾರೆ.
ಈಗಾಗಲೇ ಅಗತ್ಯಕ್ಕಿಂತ ಹೆಚ್ಚಿರುವ ಬಂಧಿಗಳ ಸಂಖ್ಯೆ, ಕಾರಾಗೃಹದ ಒಳಗೆ ನಡೆಯುತ್ತಿವೆ ಎನ್ನಲಾದ ಕುಕೃತ್ಯಗಳ ಬಗ್ಗೆ ನಿಗಾ ವಹಿಸುವಂತೆ ಆದೇಶಿಸುವ ಪರಿಪಾಠಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಮುಂದಾಗಿದ್ದಾರೆ ಎನ್ನಲಾಗಿದೆ.
ಓದಿ: ಕಬ್ಬು ಬೆಳೆಗಾರಿಗೆ ಸಿಹಿಸುದ್ದಿ: ಪ್ರತಿ ಕ್ವಿಂಟಾಲ್ಗೆ ಎಫ್ಆರ್ಪಿ 290 ರೂಗೆ ಹೆಚ್ಚಳ