ETV Bharat / state

ನ್ಯಾ. ಮೋಹನ ಶಾಂತನಗೌಡರ್ ನಿಧನ: ಗೃಹ ಸಚಿವ ಬೊಮ್ಮಾಯಿ ಸಂತಾಪ - ನಂತರ ಗೃಹ ಸಚಿವರು ಬೆಂಗಳೂರಿನ ರಾಜಾಜಿನಗರ

ಗೃಹ ಸಚಿವರು ಬೆಂಗಳೂರಿನ ರಾಜಾಜಿನಗರದಲ್ಲಿರುವ ನ್ಯಾ. ಶಾಂತನಗೌಡರ ನಿವಾಸದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

  Home Minister Basavaraj Bommai condolences to death of mohan shantagiwdar

author img

By

Published : Apr 25, 2021, 3:04 PM IST

Updated : Apr 25, 2021, 4:46 PM IST

ಬೆಂಗಳೂರು : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ನಿಧನಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಗೃಹ ಸಚಿವ ಬೊಮ್ಮಾಯಿ ಸಂತಾಪ

ನ್ಯಾಯಾಂಗ ಕ್ಷೇತ್ರದಲ್ಲಿ ಉನ್ನತ ಹುದ್ದೆಗೇರಿದ ಶಾಂತನಗೌಡರ್ ಅವರ ನಿಧನದಿಂದ ನ್ಯಾಯಾಂಗ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ನಂತರ ಗೃಹ ಸಚಿವರು ಬೆಂಗಳೂರಿನ ರಾಜಾಜಿನಗರದಲ್ಲಿರುವ ಶಾಂತನಗೌಡರ ನಿವಾಸದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ವಸತಿ ಸಚಿವ ವಿ. ಸೋಮಣ್ಣ, ಕೃಷಿ ಸಚಿವ ಬಿ ಸಿ ಪಾಟೀಲ್ ಅವರು ಮೋಹನ ಶಾಂತನಗೌಡರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಂತನಗೌಡರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

Last Updated : Apr 25, 2021, 4:46 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.