ಬೆಂಗಳೂರು: ಜಿಲೆಟಿನ್ ಸ್ಫೋಟ ಪ್ರಕರಣದ ಕುರಿತು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಚಿಕ್ಕಬಳ್ಳಾಪುರದ ಹಿರೆನಾಗವೇಲಿ ಕ್ವಾರಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿರುವ ಅವರು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇನೆ ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿಸಿದ್ದೇನೆ ಎಂದರು.
ಘಟನೆಯ ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸುತ್ತೇನೆ, ನನ್ನ ಇಲಾಖೆಯಿಂದಲೇ ಕ್ರಮ ಆರಂಭಿಸುತ್ತೇನೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.