ಹಾವೇರಿ/ರಾಣೇಬೆನ್ನೂರು: ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತ ಕಾರಣ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ನೈತಿಕ ಹೊಣೆಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಅವರು ತಮ್ಮ ಹೊಣೆಗಾರಿಕೆಯನ್ನು ನಿಭಾಯಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ರಾಣೇಬೆನ್ನೂರ ನಗರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಿದ್ದ ಕೃತಜ್ಞತಾ ಸಮಾರಂಭಕ್ಕೆ ಆಗಮಿಸಿ ಮಾತನಾಡಿದ ಅವರು, ಬಿ ಸಿ ಪಾಟೀಲರಿಗೆ ಯಾವ ಸ್ಥಾನ ಕೊಡಬೇಕು ಎಂಬುದನ್ನು ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ. ಸರ್ಕಾರದಲ್ಲಿ ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಯಡಿಯೂರಪ್ಪ ಅವರ ತೀರ್ಮಾನವಾಗಿದೆ. ಗೆದ್ದವರಿಗೆ ಅವಕಾಶ ಮಾಡಿ ಕೊಡುವುದಾಗಿ ಈಗಾಗಲೇ ಸಿಎಂ ಹೇಳಿದ್ದಾರೆ ಎಂದು ತಿಳಿಸಿದರು.
ಹಾವೇರಿ ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.