ETV Bharat / state

ನಾಳೆ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ: ರಾಜ್ಯದೆಲ್ಲೆಡೆ ಹದ್ದಿನ ಕಣ್ಣಿಡುವಂತೆ ಬೊಮ್ಮಾಯಿ ಸೂಚನೆ - video conference with police

ನಾಳೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲ ದೇವಸ್ಥಾನಗಳಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿವೆ. ಮತ್ತೊಂದೆಡೆ ಉಗ್ರರ ಸಂಚಿನ ಭೀತಿ ಇರುವುದರಿಂದ ಭದ್ರತೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಪೊಲೀಸ್​ ಅಧಿಕಾರಿಗಳೊಂದಿಗೆ ಇಂದು ವಿಡಿಯೋ ಕಾನ್ಫರೆನ್ಸ್​ ನಡೆಸಿದರು. ಈ ವೇಳೆ ಕೆಲ ಸೂಚನೆಗಳನ್ನು ನೀಡಿದರು.

Bommayi video conference
ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್​
author img

By

Published : Aug 4, 2020, 12:05 PM IST

Updated : Aug 4, 2020, 3:55 PM IST

ಬೆಂಗಳೂರು: ಅಯೋಧ್ಯೆ ರಾಮ ಮಂದಿರ ನಿರ್ಮಾಣ ಅತಿ ಸೂಕ್ಷ್ಮ ವಿಚಾರವಾಗಿದ್ದು, ನಾಳೆ ಭೂಮಿ ಪೂಜೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಾಗೆ ರಾಜ್ಯಾದ್ಯಂತ ದೇವಸ್ಥಾನಗಳಲ್ಲಿ ಪೂಜೆಗಳು ನಡೆಯಲಿದ್ದು, ಉಗ್ರರ ಕರಿನೆರಳು ಇರುವ ಕಾರಣ ಈಗಾಗಲೇ ಪೊಲೀಸರು ಅಲರ್ಟ್ ಆಗಿದ್ದಾರೆ.

ನಾಳೆ ಭೂಮಿ ಪೂಜೆ ಇರುವ ಹಿನ್ನೆಲೆ ಇವತ್ತು ಅಧಿಕಾರಿಗಳು ಅಲರ್ಟ್ ಇರುವಂತೆ ಎಲ್ಲಾ ವಲಯ ಐಜಿಪಿಗಳು, ಎಸ್ಪಿಗಳು, ಡಿಜಿ/ಐಜಿಪಿ ಪ್ರವೀಣ್ ಸೂದ್ ಸೇರಿದಂತೆ ಎಲ್ಲರೂ ತೀವ್ರ ಕಟ್ಟೆಚ್ಚರ ವಹಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವಿಡಿಯೋ ಸಂವಾದದ ಮೂಲಕ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಸೂಚನೆ ನೀಡಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಗೃಹ ಸಚಿವರು ಹೇಳಿದ್ದಾರೆ. ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆ ಸಚಿವ ಬೊಮ್ಮಾಯಿ ಹೋಂ ಕ್ವಾರಂಟೈನ್​ ಆಗಿದ್ದಾರೆ. ಮನೆಯಿಂದಲೇ ಅವರು ವಿಡಿಯೋ ಕಾನ್ಫರೆನ್ಸ್​ ನಡೆಸಿದರು.

ಪೊಲೀಸ್​ ಅಧಿಕಾರಿಗಳೊಂದಿಗೆ ಭದ್ರತೆ ಕುರಿತು ಗೃಹ ಸಚಿವರ ವಿಡಿಯೋ ಕಾನ್ಫರೆನ್ಸ್​

ಏನೆಲ್ಲಾ ಸೂಚನೆ:
*ಭೂಮಿ ಪೂಜೆ ವೇಳೆ ರಾಜ್ಯದಲ್ಲಿ ಗಲಭೆ ಸೃಷ್ಟಿಸುವ ಸಂಭವವಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು
* ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕು
* ಭೂಮಿ ಪೂಜೆ ದಿನ ಮತೀಯ ಸಂಘಟನೆಗಳು, ಸಿಎಎ ಹಾಗೂ ಎನ್ ಆರ್ ಸಿ ಹೋರಾಟಗಾರರ ಮೇಲೆ ಕಣ್ಣಿಡಬೇಕು
* ಯಾವುದೇ ಮೆರವಣಿಗೆ, ವಿಜಯೋತ್ಸವ, ಪ್ರತಿಭಟನೆಗೆ ಅನುಮತಿ ನೀಡಬಾರದು
* ಕೋಮು ಸೂಕ್ಷ್ಮ ಜಿಲ್ಲೆಗಳಲ್ಲಿ ತೀವ್ರ ನಿಗಾ ಇಡಬೇಕು
* ಕೋಮು ಸೌಹಾರ್ದತೆಗೆ ಧಕ್ಕೆ ತರುವವರು ಕಂಡುಬಂದ್ರೆ ಪ್ರಿವೆಂಟೀವ್ ಸೆಕ್ಷನ್ ಅಡಿ ವಶಕ್ಕೆ ಪಡೆಯಬೇಕು
* ಯಾವುದೇ ದೇವಸ್ಥಾನ, ಮಸೀದಿಗಳಲ್ಲಿ ಬಾವುಟ ಕಟ್ಟುವಂತಿಲ್ಲ
* ಜನನಿಬಿಡ ಪ್ರದೇಶಗಳು, ಮಾಲ್, ದೇವಸ್ಥಾನ, ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸುವುದು
* ಹಿಂದೂಪರ ಸಂಘಟನೆ, ಹಿಂದೂಯೇತರ ಸಂಘಟನೆಗಳ ಮೇಲೆ ಇವತ್ತಿನಿಂದಲೇ ಕಣ್ಣಿಡುವುದು
* ಡಿಎಆರ್ ಮತ್ತು ಕೆಎಸ್ಆರ್ ಪಿ ತುಕಡಿಗಳನ್ನ ನಿಯೋಜನೆ ಮಾಡಿಕೊಳ್ಳುವುದು
* ಕಮೀಷನರೇಟ್ ಹಾಗು ಜಿಲ್ಲೆಗಳಲ್ಲಿ 144 ಸೆಕ್ಷನ್ ಹಾಕಿ ಭದ್ರತೆ ಕೈಗೊಳ್ಳುವ ಬಗ್ಗೆ ಚಿಂತನೆ ಮಾಡಬೇಕು ಎನ್ನುವುದು ಸೇರಿದಂತೆ ಯಾವುದೇ ಅಹಿತಕರ ಘಟನೆ ಜರುಗದಂತೆ ಕಟ್ಟೆಚ್ಚರಕ್ಕೆ ಗೃಹ ಸಚಿವರು ಸೂಚನೆ ನೀಡಿದ್ದಾರೆ‌.

Last Updated : Aug 4, 2020, 3:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.