ETV Bharat / state

ಎರಡು ವರ್ಷದೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ: ಗೃಹ ಸಚಿವ ಡಾ ಜಿ ಪರಮೇಶ್ವರ್ - ಶಾಸಕಾಂಗ ಪಕ್ಷದ ಸಭೆ

ಸ್ಥಗಿತಗೊಂಡಿದ್ದ ಎತ್ತಿನ ಹೊಳೆ ಯೋಜನೆ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್​ ತಿಳಿಸಿದ್ದಾರೆ.

ಗೃಹ ಸಚಿವ ಡಾ ಜಿ ಪರಮೇಶ್ವರ್
ಗೃಹ ಸಚಿವ ಡಾ ಜಿ ಪರಮೇಶ್ವರ್
author img

By ETV Bharat Karnataka Team

Published : Dec 18, 2023, 4:00 PM IST

ಬೆಂಗಳೂರು : ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಎತ್ತಿನ ಹೊಳೆ ಯೋಜನೆ ಬಗ್ಗೆ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆಗೆ ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನ ನೀಡಿಲ್ಲ. ಇದೇ ಕಾರಣದಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ನಮ್ಮ ಸರ್ಕಾರವು ಅನುದಾನ ಬಿಡುಗಡೆ ಮಾಡಿದೆ. ಯೋಜನೆಯ ಅಂದಾಜು ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ 22 ಸಾವಿರ ಕೋಟಿ ರೂ. ಆಗುತ್ತಿದೆ. ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ತಿಳಿಸಿದರು.

ವಾಟರ್ ಸ್ಟೋರೆಜ್‌ಗಾಗಿ ಕೊರಟಗೆರೆ ರೈತರು ನೀಡಿರುವ ಭೂಮಿಗೆ ಎಕರೆಗೆ 8 ಲಕ್ಷ ರೂ ಹಾಗೂ ದೊಡ್ಡಬಳ್ಳಾಪುರದಲ್ಲಿ ಎಕರೆ ಭೂಮಿಗೆ 32 ಲಕ್ಷ ರೂ. ಪರಿಹಾರ ನಿಗದಿಪಡಿಸಲಾಗಿದೆ. ಎಲ್ಲ ರೈತರಿಗೂ ಒಂದೇ ರೀತಿಯ ಸಮಾನ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗಿದೆ ಎಂದರು.

ಎನ್‌ಐಎ ದಾಳಿ : ಎನ್‌ಐಎ ಕಚೇರಿ ಬೆಂಗಳೂರಿನಲ್ಲಿ ಆಗಿದೆ. ಅಕ್ರಮ ಚಟುವಟಿಕೆಗಳ‌ ಬಗ್ಗೆ ಮಾಹಿತಿ ಆಧರಿಸಿ ದಾಳಿ ಮಾಡುತ್ತಿರುತ್ತಾರೆ. ಈ ಬಗ್ಗೆ ಎನ್‌ಐಎ ತಂಡವು ಕೆಲವು ಸಲ ರಾಜ್ಯ ಪೊಲೀಸರೊಂದಿಗೆ ಮಾಹಿತಿ ಹಂಚಿಕೊಳ್ಳುತ್ತಾರೆ. ಅವರ ಕರ್ತವ್ಯ ಅವರು ಮಾಡಲಿದ್ದಾರೆ ಎಂದು ಹೇಳಿದರು.

ನಿಗಮ, ಮಂಡಳಿ ನೇಮಕ ಬಗ್ಗೆ ಚರ್ಚೆ: ಸಿಎಂ, ಡಿಸಿಎಂ ದೆಹಲಿ ಪ್ರಯಾಣ ವಿಚಾರವಾಗಿ ಪ್ರತಿಕ್ರಿಯಿಸುತ್ತ, ದೆಹಲಿಯಲ್ಲಿ ಸಿಡಬ್ಲ್ಯೂಸಿ ಸಭೆ ಕರೆದಿದ್ದಾರೆ. ಆ ಸಭೆಯಲ್ಲಿ ಭಾಗವಹಿಸಲು ಸಿಎಂ, ಡಿಸಿಎಂ ಹೋಗ್ತಿದ್ದಾರೆ. ಇದೇ ವೇಳೆ, ಪಕ್ಷದ ವಿಷಯಗಳ ಬಗ್ಗೆ ಚರ್ಚೆ ಮಾಡ್ತಾರೆ. ನಿಗಮ ‌ಮಂಡಳಿಗಳ‌ ನೇಮಕ ಬಗ್ಗೆಯೂ ಚರ್ಚೆ ಮಾಡ್ತಾರೆ. ನಿಗಮ ಮಂಡಳಿಗಳಿಗೆ ನೇಮಕಕ್ಕೆ ಶಾಸಕರಿಂದ ಒತ್ತಡ ಇದೆ. ಬೆಳಗಾವಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲೂ ಒತ್ತಾಯ ಕೇಳಿ ಬಂತು. ಮೊದಲು ಶಾಸಕರಿಗೆ, ನಂತರ ಕಾರ್ಯಕರ್ತರಿಗೆ ನಿಗಮ ಮಂಡಳಿಗಳಲ್ಲಿ ನೇಮಕ ಮಾಡಲಾಗುವುದು. ಆದಷ್ಟು ಬೇಗ ನಿಗಮ ಮಂಡಳಿಗಳಿಗೆ ನೇಮಕ ಮಾಡ್ತಾರೆ ಎಂದರು.

ಇದನ್ನೂ ಓದಿ: ರಾಜ್ಯದಲ್ಲಿ ಸೈಬರ್ ಪ್ರಕರಣ ಹೆಚ್ಚಳ, ಸೈಬರ್ ಕ್ರೈಂ ತಡೆಗೆ ಹೊಸ ನಿಯಮ ತರಲು ಕ್ರಮ: ಡಾ. ಪರಮೇಶ್ವರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.