ETV Bharat / state

ಇನ್ನೆರಡು ದಿನದಲ್ಲಿ ಹೋಟೆಲ್​ಗಳ​​ ಪುನಾರಂಭ ಕುರಿತು ನಿರ್ಧಾರ: ಸಿಎಂ ಯಡಿಯೂರಪ್ಪ

author img

By

Published : May 19, 2020, 1:23 PM IST

ನಗರದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಒಳಗೊಂಡ ನಿಯೋಗ ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿ ಹೋಟೆಲ್​ಗಳ ಪುನಾರಂಭ ಅವಕಾಶ ಕೊಡುವಂತೆ ಸಿಎಂಗೆ ಮನವಿ ಸಲ್ಲಿಸಿತು. ಸಂಘದ ಮನವಿ ಆಲಿಸಿದ ಸಿಎಂ, ಇನ್ನೆರಡು ದಿನ ಕಾಯಿರಿ, ನಂತರ ನಿರ್ಧಾರ ಮಾಡುತ್ತೇವೆ ಎಂದು ಅಭಯ ನೀಡಿದ್ದಾರೆ.

Yadiyuarappa
ಯಡಿಯೂರಪ್ಪ

ಬೆಂಗಳೂರು: ಹೋಟೆಲ್ ಉದ್ಯಮ ಪುನಾರಂಭ ಸಂಬಂಧ ಇನ್ನೆರಡು ದಿನಗಳಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ನಗರದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಒಳಗೊಂಡ ನಿಯೋಗ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿ, ಹೋಟೆಲಗಳ ಆರಂಭಕ್ಕೆ ಅವಕಾಶ ಕೊಡುವಂತೆ ಸಿಎಂಗೆ ಮನವಿ ಸಲ್ಲಿಸಿತ್ತು.

ನಷ್ಟದ ಪ್ರಮಾಣ ಹೆಚ್ಚಾಗುತ್ತಿದ್ದು, ಕಾರ್ಮಿಕರಿಗೆ ಸಂಬಳ ನೀಡಲು ಸಹ ಸಾಧ್ಯವಾಗುತ್ತಿಲ್ಲ. ಹಾಗಾಗಿ ಕಾರ್ಮಿಕರಿಗೂ ಕೂಡಾ ಪ್ಯಾಕೇಜ್ ಘೋಷಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷತಾ ಕ್ರಮಗಳೊಂದಿಗೆ ಹೋಟೆಲ್ ಆರಂಭಿಸುತ್ತೇವೆ. ಇದಕ್ಕೆ ಅವಕಾಶ ಕಲ್ಪಿಸಬೇಕೆಂದು ಎಂದು ಮನವಿ ಮಾಡಿತು.

ಹೋಟೆಲ್ ಮಾಲೀಕರ ಸಂಘದ ಮನವಿ ಆಲಿಸಿದ ಸಿಎಂ, ಇನ್ನೆರಡು ದಿನ ಕಾಯಿರಿ ನಂತರ ನಿರ್ಧಾರ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.