ಬೆಂಗಳೂರು: ಮನೆಗಳಿಗೆ ಕನ್ನ ಹಾಕುತ್ತಿದ್ದ ಆರೋಪಿಯನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಈತನಿಂದ 14.50 ಲಕ್ಷ ರೂ. ಮೌಲ್ಯದ 320 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಪ್ರೇಮ್ ಕುಮಾರ್ ಬಂಧಿತ ಆರೋಪಿಯಾಗಿದ್ದು, ಈತ ರಾಮಮೂರ್ತಿ ನಗರದ ಕಳ್ಳತನ ಪ್ರಕರಣದಲ್ಲಿ 2014 ರಿಂದ 2019ವರೆಗೆ ಜೈಲು ಶಿಕ್ಷೆ ಅನುಭವಿಸಿದ್ದ. ಜೈಲಿನಿಂದ ಬಿಡುಗಡೆಯಾದ ಬಳಿಕವೂ ಮತ್ತೆ ಕಳ್ಳತನ ಮುಂದುವರಿಸಿದ್ದ.
ಆರೋಪಿ ಸೆರೆಯಿಂದ ರಾಮಮೂರ್ತಿ ನಗರ, ವಿದ್ಯಾರಣ್ಯಪುರ ಸೇರಿದಂತೆ ಹಲವು ಠಾಣೆಗಳಲ್ಲಿ ದಾಖಲಾಗಿದ್ದ 8 ಪ್ರಕರಣಗಳು ಪತ್ತೆಯಾಗಿವೆ.