ಬೆಂಗಳೂರು: ಬಾಗಲಗುಂಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಗಳವು ಮಾಡಿ ಎಸ್ಕೇಪ್ ಆಗಿದ್ದ ಆರೋಪಿಯನ್ನು ಖೆಡ್ಡಾಗೆ ಬೀಳಿಸಿ 18 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಸಿದ್ದಪ್ಪ ಬಿ ಕೆ ಎಂಬ ಆರೋಪಿ ವಿಜಯಲಕ್ಷ್ಮಿ ಬಡಾವಣೆಯಲ್ಲಿ ಮನೆಕಳ್ಳತನ ಮಾಡಿ ಪರಾರಿಯಾಗಿದ್ದ. ಈ ಕುರಿತು ನಗರದ ಠಾಣೆಯಲ್ಲಿ ಮನೆ ಮಾಲೀಕ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ 18 ಲಕ್ಷ ಮೌಲ್ಯದ ಚಿನ್ನಾಭರಣ, ಒಂದು ಇನ್ನೋವಾ ಕಾರು ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.
ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ.
ಇದನ್ನೂ ಓದಿ:ಕೋವಿಡ್ ನಿಯಂತ್ರಣ ಸಂಬಂಧ ಭಾನುವಾರ ಮುಂದಿನ ಕ್ರಮದ ಘೋಷಣೆ: ಸುಧಾಕರ್