ETV Bharat / state

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮನೆ ಕುಸಿತ, ಕಾರ್​ಗಳು ಜಖಂ.. - ಗುಡುಗು ಮಿಂಚು ಸಹಿತ ಧಾರಾಕಾರ ಮಳೆ

ಬೆಂಗಳೂರಿನಲ್ಲಿ ಸೋಮವಾರ ವರುಣನ ಆರ್ಭಟಕ್ಕೆ ಮನೆ ಕುಸಿದಿದ್ದು, ಕಾರ್​ಗಳು ಜಖಂಗೊಂಡಿವೆ.

Houses collapsed due to rain
ವರುಣನ ಆರ್ಭಟಕ್ಕೆ ಮನೆಗಳು ಕುಸಿತ, ಕಾರ್​ಗಳು ಜಖಂ
author img

By

Published : May 8, 2023, 9:54 PM IST

Updated : May 8, 2023, 10:55 PM IST

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮನೆ ಕುಸಿತ

ಬೆಂಗಳೂರು: ಚಂಡಮಾರುತ ಪರಿಣಾಮದಿಂದ ರಾಜಧಾನಿಯಲ್ಲಿ ಸುರಿಯುತ್ತಿರುವ ಮಳೆ ಅಬ್ಬರ ಸೋಮವಾರವೂ ಮುಂದುವರೆದಿದೆ. ದಕ್ಷಿಣ ವಲಯದಲ್ಲಿ ಅತಿ ಹೆಚ್ಚು ಮಳೆ ಸುರಿದ ಪರಿಣಾಮ ಮನೆ ಕುಸಿದಿರುವ ಘಟನೆ ಬೆಳಕಿಗೆ ಬಂದಿದೆ. ದಕ್ಷಿಣ ವಲಯ ವ್ಯಾಪ್ತಿಯ ಮೈಸೂರು ಹೋರ ವರ್ತುಲ ರಸ್ತೆಯ ಪಿ.ಇ.ಎಸ್ ಕಾಲೇಜಿನ ಬಳಿಯಲ್ಲಿರುವ ವೀರಭದ್ರೇಶ್ವರ ನಗರದಲ್ಲಿ ಘಟನೆ ಸಂಭವಿಸಿದೆ.

ಗೋಪಾಲ್ ಎಂಬುವರಿಗೆ ಸೇರಿದ ಮನೆಯಲ್ಲಿದ್ದ ವಸ್ತುಗಳೆಲ್ಲವೂ ಸಂಪೂರ್ಣ ಹಾನಿ ಆಗಿವೆ. ಮನೆಯಲ್ಲಿ ಯಾರೂ ಇಲ್ಲದಿರುವುದರಿಂದ ಅನಾಹುತ ತಪ್ಪಿದೆ ಎಂದು ಪಾಲಿಕೆ ಅಧಿಕಾರಿಗಳು ಪೊಲೀಸರು ಮಾಹಿತಿ ನೀಡಿದ್ದಾರೆ. ಪಕ್ಕದ ಅಪಾರ್ಟ್‌ಮೆಂಟ್‌ನ ತಡೆಗೋಡೆ ಸಮೇತ ಮನೆ ಕುಸಿದುಬಿದ್ದಿರುವ ಪರಿಣಾಮ ತಡೆಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಅವಘಡದಲ್ಲಿ ಮತ್ತೆರಡು ಕಾರುಗಳಿಗೂ ಕೊಂಚ ಹಾನಿ ಆಗಿದೆ ಎಂದು ಹೇಳಿದ್ದಾರೆ.

ಪಾಲಿಕೆ ವಿರುದ್ಧ ಸ್ಥಳೀಯ ನಿವಾಸಿಗಳ ಆಕ್ರೋಶ: ಮಧ್ಯಾಹ್ನ ಸುರಿದ ಧಾರಾಕಾರ ಮಳೆಯಿಂದ ಹತ್ತಾರು ಮನೆಗಳಿಗೆ ನೀರು ನುಗ್ಗಿದೆ. ಜಲಮಂಡಳಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೊಸಕೆರೆಹಳ್ಳಿಯ ಪುಪ್ಪಗಿರಿ ನಗರದಲ್ಲಿ ಹತ್ತಾರು ಮನೆಗಳಿಗೆ ನೀರು ನುಗ್ಗಿದೆ. ದತ್ತಾತ್ರೇಯ ನಗರ, ಗಿರಿನಗರದ 12ನೇ ಮುಖ್ಯ ರಸ್ತೆ ಸೇರಿ ಇತರ ಬಡಾವಣೆಗಳ ಮನೆಗಳಿಗೆ ಕೊಳಚೆ ನೀರು ನುಗ್ಗಿದ್ದು, ಪಾಲಿಕೆ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಹನ ಸವಾರರಿಗೆ ತೀವ್ರ ತೊಂದರೆ: ಬಾಪೂಜಿ ನಗರ, ಬ್ಯಾಂಕ್ ಕಾಲೋನಿ, ಶಾಂತಿ ನಗರ ಹಾಗೂ ರಿಚ್ಮಂಡ್ ರಸ್ತೆಯ ಅಂಚೆ ಕಚೇರಿ ಬಳಿ ಮರಗಳು ಉರುಳಿ ಬಿದ್ದಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಾಲಿಕೆ ಅಧಿಕಾರಿಗಳು, ಪೊಲೀಸರು ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಲಾಲ್‌ಬಾಗ್ ಪಶ್ಚಿಮ ದ್ವಾರದ ಮುಂಭಾಗದಲ್ಲಿ ಹಾಗೂ ಕದಿರನೇಹಳ್ಳಿಯ ಮುಖ್ಯ ರಸ್ತೆ, ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಅಪಾರ ಪ್ರಮಾಣದಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ.

ವಿವಿಧೆಡೆ ಧಾರಾಕಾರ ಮಳೆ: ನಗರದ ದಕ್ಷಿಣ ವಲಯದಲ್ಲಿ ಜೋರಾಗಿ ಮಳೆ ಸುರಿದಿದೆ. ಬೊಮ್ಮನಹಳ್ಳ ವಲಯದಲ್ಲಿ 16 ಮಿ.ಮೀ., ರಾಜರಾಜೇಶ್ವರಿ ವಲಯದಲ್ಲಿ 14 ಮಿ.ಮೀ, ಪೂರ್ವ ವಲಯದಲ್ಲಿ 10 ಮಿ.ಮೀ ಮಳೆ ಬಿದ್ದಿದೆ. ಹೂಡಿ ರಾಜಮಹಲ್ ಗುಟ್ಟೇಹಳ್ಳಿ, ಕಾಡು ಮಲ್ಲೇಶ್ವರ, ದತ್ತಾತ್ರೇಯ ದೇವಸ್ಥಾನ ಹಾಗೂ ದೇವಸಂದ್ರ ಸೇರಿ ನಗರ ಹಲವು ಬಡಾವಣೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ.

ಸವಾರನಿಗೆ ಗಾಯ: ಶ್ರೀನಗರದ ಜಲಗೇರಮ್ಮ ದೇವಸ್ಥಾನದ ಮುಂಭಾಗದಲ್ಲಿ ದ್ವಿಚಕ್ರ ವಾಹನ ಸವಾರರ ಮೇಲೆ ಮರದ ಕೊಂಬೆ ಬಿದ್ದಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಹತ್ತಿರದ ಆಸ್ಪತ್ರೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕೆಲ ದಿನಗಳಿಂದ ಬೀಳುತ್ತಿರುವ ಮಳೆಯಿಂದಾಗಿ ನಗರದ ಅನೇಕ ಕಡೆಗಳಲ್ಲಿ ಸಮಸ್ಯೆಗಳು ಉಂಟಾಗುತ್ತಿದೆ. ಶ್ರೀನಗರದ ಜಲಗೇರಮ್ಮ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಮರದ ಕೊಂಬೆ ಮುರಿದುಬಿದ್ದು ಇಬ್ಬರು ಸವಾರರಿಗೆ ಗಂಭೀರ ಗಾಯವಾಗಿದೆ.

ಇನ್ನೂ 4 ದಿನ ಮಳೆ: ಚಂಡಮಾರುತ ಪರಿಣಾಮ ಮೇ 9 ರಿಂದ ಮೇ 13ರವರೆಗೆ ನಗರದಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಸಕಲ ಸಿದ್ಧತೆ: ಡಿಸಿ ನಿತೇಶ ಪಾಟೀಲ

Last Updated : May 8, 2023, 10:55 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.