ETV Bharat / state

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ - ವರದಕ್ಷಿಣೆ ಕಿರುಕುಳ ಆರೋಪ

ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದೆ.

Housewife body found hanging
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ
author img

By ETV Bharat Karnataka Team

Published : Nov 23, 2023, 1:51 PM IST

ಬೆಂಗಳೂರು: ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಕಂಡುಬಂದಿದೆ. ವರದಕ್ಷಿಣೆ ಕಿರುಕುಳ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ರಾಧಾ ಮೃಪಟ್ಟಿರುವ ಗೃಹಿಣಿ‌. ರಾಮನಗರದ ಮೂಲದ ಇವರು ಎರಡು ವರ್ಷಗಳ ಹಿಂದೆ ರವಿ ಎಂಬವರನ್ನು ಮದುವೆಯಾಗಿದ್ದರು. ಗುರು-ಹಿರಿಯರ ಸಮ್ಮುಖದಲ್ಲಿ ಕುಟುಂಬಸ್ಥರ ನಿಶ್ಚಯದಂತೆ ವಿವಾಹವಾಗಿತ್ತು. ಆರಂಭದಲ್ಲಿ ಅನ್ಯೋನ್ಯವಾಗಿದ್ದ ದಂಪತಿ ಕಾಲಕ್ರಮೇಣ ಇಬ್ಬರ ನಡುವೆ ವೈಮನಸ್ಸು ಮೂಡಿತ್ತು ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದರು. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆತ್ಮಹತ್ಯೆಗೆ ರವಿ ಹಾಗೂ ಆತನ‌ ಕುಟುಂಬಸ್ಥರು ನೀಡುತ್ತಿದ್ದ ವರದಕ್ಷಣೆ ಕಾರಣ ಎಂದು ಆರೋಪಿಸಿ ಮೃತರ ಕುಟುಂಸ್ಥರು ದೂರು ನೀಡಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ತಲಘಟ್ಟಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಹಾಸನ: ಕುರಿಗಾಹಿ ಮಹಿಳೆಯ ಹತ್ಯೆ, ಹಳ್ಳದಲ್ಲಿ ಶವ ಪತ್ತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.