ETV Bharat / state

ಪತಿಗೆ ಪರಸ್ತ್ರೀಯರೊಂದಿಗೆ ಅಕ್ರಮ ಸಂಬಂಧ ಆರೋಪ: ಡೆತ್​​​​ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ - ಡೆತ್​​​​ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ

ಬೆಂಗಳೂರಿನ ಗಾಯತ್ರಿ ನಗರದಲ್ಲಿ ಪತಿಯ ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Housewife committed suicide due her husband illegal relationship
ಪತಿ ಅಕ್ರಮ ಸಂಬಂಧದಿಂದ ನೊಂದ ಪತ್ನಿ ಆತ್ಮಹತ್ಯೆ
author img

By

Published : Mar 19, 2022, 10:53 AM IST

ಬೆಂಗಳೂರು: ಪ್ರೀತಿಸಿ ಕೈಹಿಡಿದ ಗಂಡ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಯತ್ರಿ ನಗರದಲ್ಲಿ ನಡೆದಿದೆ.

ಇಂದುಶ್ರೀ (28) ಮೃತ ದುರ್ದೈವಿ. ಎರಡು ವರ್ಷದಿಂದ ಈಕೆ ರಾಕೇಶ್​ ಎಂಬುವವರನ್ನು ಪ್ರೀತಿಸುತ್ತಿದ್ದರು. 9 ತಿಂಗಳ ಹಿಂದೆಯಷ್ಟೇ ಮನೆಯವರನ್ನು ಒಪ್ಪಿಸಿ ರಾಕೇಶ್​ ಜೊತೆ ವಿವಾಹವಾಗಿದ್ದರು. ಆದರೆ, ಮದುವೆಯಾದ ಬಳಿಕ ಗಂಡ ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎಂದು ನೊಂದ ಮಹಿಳೆ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್​​ನೋಟ್​ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

ಡೆತ್​​ನೋಟ್​ನಲ್ಲಿ ತನ್ನ ಗಂಡನಿಗೆ ಇತರ ಯುವತಿಯರ ಜೊತೆ ಸಂಬಂಧವಿದೆ ಎಂದು ಉಲ್ಲೇಖಿಸಿದ್ದು, ಇಂದುಶ್ರೀ ತಂದೆಯ ದೂರಿನನ್ವಯ ಸುಬ್ರಹ್ಮಣ್ಯನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಮದುವೆಯಾಗಿಲ್ಲ ಎಂಬ ಚಿಂತೆ: ಮದ್ಯದ ಅಮಲಿನಲ್ಲಿ ವಿಷ ಸೇವಿಸಿ ಯುವಕ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.