ಬೆಂಗಳೂರು: ಆಡುಗೋಡಿ ಬಳಿ ಇರುವ ಪೊಲೀಸ್ ಕ್ವಾಟ್ರಸ್ನ 9ನೇ ಬ್ಲಾಕ್ನಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅರುಣಾ (34) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಸಿ.ಎ.ಆರ್ ಘಟಕದಲ್ಲಿ ಅರುಣಾ ಪತಿ ಕಾನ್ಸ್ಟೇಬಲ್ ಆಗಿ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಆದರೆ, ಇವರಿಬ್ಬರ ನಡುವೆ ಯಾವಾಗಲೂ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆ ಮಹಿಳೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಆಡುಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.