ETV Bharat / state

ಪಾರ್ಟಿ ಪ್ರಿಯರ ನೆಚ್ಚಿನ ತಾಣಗಳಾದ ಕೋರಮಂಗಲ, ಎಚ್ಎಸ್ಆರ್ ಲೇಔಟ್ ಭಾಗದಲ್ಲಿ ಹೇಗಿದೆ ಭದ್ರತೆ? - ETV bharat kannada

ಹೊಸ ವರ್ಷಕ್ಕೆ ಕ್ಷಣಗಣನೆ- ಆಚರಣೆಗೆ ತಯಾರಾದ ಪಾರ್ಟಿ ಪ್ರಿಯರು- ಪಬ್​, ರೆಸ್ಟೋರೆಂಟ್​​​ ಮೇಲೆ ಪೊಲೀಸ್​ ಕಣ್ಗಾವಲು

how-is-the-security-in-koramangala-the-favorite-places-of-party-lovers
ಪಾರ್ಟಿ ಪ್ರಿಯರ ನೆಚ್ಚಿನ ತಾಣಗಳಾದ ಕೋರಮಂಗಲ, ಎಚ್ಎಸ್ಆರ್ ಲೇಔಟ್ ಭಾಗದಲ್ಲಿ ಹೇಗಿದೆ ಭಧ್ರತೆ..
author img

By

Published : Dec 31, 2022, 3:38 PM IST

ಪಾರ್ಟಿ ಪ್ರಿಯರ ನೆಚ್ಚಿನ ತಾಣಗಳಾದ ಕೋರಮಂಗಲ, ಎಚ್ಎಸ್ಆರ್ ಲೇಔಟ್ ಭಾಗದಲ್ಲಿ ಹೇಗಿದೆ ಭಧ್ರತೆ..

ಬೆಂಗಳೂರು: ನೂತನ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಜನರು ಹಳೆಯ ವರ್ಷಕ್ಕೆ ವಿದಾಯ ಹೇಳಿ ನೂತನ ಸಂವತ್ಸರವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಪಾರ್ಟಿ ಪ್ರಿಯರ ನೆಚ್ಚಿನ ತಾಣಗಳಾದ ಕೋರಮಂಗಲ, ಹೆಚ್ಎಸ್ಆರ್ ಲೇಔಟ್ ಹಾಗೂ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಪಾರ್ಟಿಗಳು ಆಯೋಜನೆಯಾಗುವ ಸ್ಥಳಗಳಲ್ಲಿ ಒಳಾಂಗಣ ಹಾಗೂ ಹೊರಾಂಗಣ ಎಂದು ಎರಡು ವಿಭಾಗಗಳಲ್ಲಿ ಭದ್ರತೆಯ ಉಸ್ತುವಾರಿ ವಹಿಸಿಕೊಳ್ಳಲಾಗಿದ್ದು, ಒಳಾಂಗಣ ಭದ್ರತೆಯನ್ನು ಆಯೋಜಕರು ಹೆಚ್ಚಾಗಿ ನೋಡಿಕೊಳ್ಳಬೇಕು ಎಂದು ಆಗ್ನೇಯ ವಿಭಾಗದ ಡಿಸಿಪಿ ಸಿ ಕೆ ಬಾಬಾ ತಿಳಿಸಿದ್ದಾರೆ.

ಇನ್ನು, ಪಾರ್ಟಿ ಆಯೋಜನೆಯಾಗುವ ಸ್ಥಳಗಳ ಬಳಿ ಹೊರಾಂಗಣದಲ್ಲಿ ಮತ್ತು ರಸ್ತೆಯಲ್ಲಿ ಹೆಚ್ಚಿನ ಭದ್ರತೆಗೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದಕ್ಕಾಗಿ ಖಾಸಗಿ ಭದ್ರತಾ ಸಿಬ್ಬಂದಿಗಳನ್ನು ಸಹ ನಿಯೋಜಿಸಲಾಗಿದೆ. ಪಾರ್ಟಿಗೆ ಬರುವ ಪ್ರತಿಯೊಬ್ಬರ ಮಾಹಿತಿ ಹಾಗೂ ಫೋಟೋಗಳನ್ನು ಪೊಲೀಸ್ ಸಿಬ್ಬಂದಿ ಪಡೆಯಲಿದ್ದಾರೆ. ಜೊತೆಗೆ ಪಬ್, ಹೋಟೆಲ್, ರೆಸ್ಟೋರೆಂಟ್​ಗಳ ಪ್ರವೇಶದ್ವಾರದಲ್ಲಿ ಸಿಸಿಟಿವಿಗಳನ್ನ ಅಳವಡಿಸಲಾಗಿದೆ‌. ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳು ಲೈವ್ ಎಲ್ಇಡಿ ಮೇಲೆ ಬಿತ್ತರವಾಗಲಿವೆ.

ಪಾರ್ಟಿಯಲ್ಲಿ ಭಾಗಿಯಾಗುವವರು ಸಹ ಜವಾಬ್ದಾರಿಯಿಂದ ವರ್ತಿಸಬೇಕಿದ್ದು, ಅಪರಿಚಿತರನ್ನು ಸಂಪರ್ಕಿಸುವ ಮೊದಲು ಎಚ್ಚರವಿರಲಿ ಎಂದು ಸಿ.ಕೆ‌. ಬಾಬಾ ತಿಳಿಸಿದ್ದಾರೆ. ಅಲ್ಲದೇ ಪಾರ್ಟಿಯಲ್ಲಿ ಆರೋಗ್ಯ ಸಮಸ್ಯೆ ಅಥವಾ ಅಸ್ವಸ್ಥರಾದರೆ ನೆರವಿಗಾಗಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಬೆಡ್​ಗಳನ್ನು ಕಾಯ್ದಿರಿಸಲಾಗಿದೆ.

ರಾಜ್ಯ ಸರ್ಕಾರದ ನಿಯಮದಂತೆ ಪಬ್,​ ಹೋಟೆಲ್​ಗಳಲ್ಲಿ ರಾತ್ರಿ ಒಂದು ಗಂಟೆ ತನಕ ಪಾರ್ಟಿಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ನಂತರದಲ್ಲಿ ತಮ್ಮ ತಮ್ಮ ಮನೆಗೆ ತೆರಳುವವರು ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಡಿಸಿಪಿ ಸಿ.ಕೆ ಬಾಬಾ ಸೂಚಿಸಿದ್ದಾರೆ.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಸಿದ್ಧತೆ: ಹೋಟೆಲ್, ಪಬ್, ಬಾರ್ & ರೆಸ್ಟೋರೆಂಟ್ ಟೆರೇಸ್​ಗಳಿಗೆ ನೋ ಎಂಟ್ರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.